2:56 PM Thursday26 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್

ಇತ್ತೀಚಿನ ಸುದ್ದಿ

ಮಾಜಿ ಪ್ರಧಾನಿ, ಆರ್ಥಿಕ ಸುಧಾರಣೆಯ ಹರಿಕಾರ ಡಾ. ಮನಮೋಹನ್ ಸಿಂಗ್ ನಿಧನ

26/12/2024, 23:07

ಹೊಸದಿಲ್ಲಿ(reporterkarnataka.com): ಮಾಜಿ ಪ್ರಧಾನಿ, ಕಾಂಗ್ರೆಸ್ ಹಿರಿಯ ನಾಯಕ ಡಾ. ಮನಮೋಹನ್ ಸಿಂಗ್ ಅವರು ಇಂದು ನಿಧನರಾದರು.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ 92ರ ಹರೆಯದ ಡಾ. ಸಿಂಗ್ ಅವರನ್ನು ರಾತ್ರಿ 8 ಗಂಟೆ ಸುಮಾರಿಗೆ ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನ (ಎಐಐಎಂಎಸ್) ತುರ್ತು ವಿಭಾಗಕ್ಕೆ ದಾಖಲಿಸಲಾಗಿತ್ತು. ಆದರೆ, ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು. ಡಾ. ಮನಮೋಹನ್ ಸಿಂಗ್ 2004ರಿಂದ 2014ರ ವರೆಗೆ 10 ವರ್ಷಗಳ ಕಾಲ ಪ್ರಧಾನ ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ಆರ್ಥಿಕ ಸುಧಾರಣೆ ಹೆಸರುವಾಸಿಯಾದ ಡಾ. ಸಿಂಗ್ ಅವರು ಜನರಿಗೆ ಪ್ರಯೋಜನವಾಗುವ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದರು. ಅವರು 33 ವರ್ಷಗಳ ಸುದೀರ್ಘ ಅವಧಿಯಲ್ಲಿ ರಾಜ್ಯಸಭಾ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.
ಕಾಂಗ್ರೆಸ್ ನ ಹಿರಿಯ ನಾಯಕರಾದ ಅವರು ಏಪ್ರಿಲ್‌ನಲ್ಲಿ ರಾಜ್ಯಸಭೆಯಿಂದ ನಿವೃತ್ತರಾದರು.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ, ಒಂದು ವಾರ ರಾಜ್ಯದಲ್ಲಿ ಶೋಕಾಚರಣೆ, *ಡಿ.27ರಂದು ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ*

ಇತ್ತೀಚಿನ ಸುದ್ದಿ

ಜಾಹೀರಾತು