6:31 AM Tuesday16 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಜನಪ್ರತಿನಿಧಿಗಳು ಸದನದ ಹೊರಗೂ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು: ಸ್ಪೀಕರ್ ಖಾದರ್

29/12/2024, 11:25

ಮಂಗಳೂರು(reporterkarnataka.com): ಜನಪ್ರತಿನಿಧಿಗಳು
ಸದನದ ಒಳಗೆ ಮಾತ್ರವಲ್ಲ, ಹೊರಗೂ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಅದಕ್ಕಾಗಿ ಸದನ ಬಳಿಕವೂ ಕ್ಯಾಮರಾ ಚಿತ್ರೀಕರಣ ಮುಂದುವರಿಸುವ ಅವಶ್ಯಕತೆ ಇಲ್ಲ. ವಿಧಾನಸಭೆ ನಿಯಮದಂತೆ ಅಧಿವೇಶನ ವೇಳೆ ಮಾತ್ರ ಕ್ಯಾಮರಾ ರೆಕಾರ್ಡ್ ಮಾಡಲಾಗುತ್ತದೆ ಎಂದು ಸ್ಪೀಕರ್ ಯು.ಟಿ. ಖಾದರ್ ಹೇಳಿದರು.
ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿವೇಶನದ ನಂತರ ಕ್ಯಾಮರಾ ರೆಕಾರ್ಡ್ ಮಾಡುತ್ತಿಲ್ಲ. ಅದನ್ನು ಆರಂಭಿಸುವ ಹೊಸ ಸಂಪ್ರದಾಯವನ್ನು ನಾನು ಜಾರಿಗೆ ತರುವುದಿಲ್ಲ. ಆದರೆ ಕಲಾಪದ ಬಳಿಕ ವರಾಂಡ ಮುಂತಾದ ಕಡೆಗಳಲ್ಲಿ ಕುಳಿತುಕೊಂಡು ಮಾತನಾಡುವಾಗಲೂ ಜನಪ್ರತಿನಿಧಿಗಳು ತಮ್ಮ ನಡವಳಿಕೆ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುವುದು ಒಳಿತು ಎಂದು ಕಿವಿಮಾತು ಹೇಳಿದರು.
ಸಿ.ಟಿ.ರವಿ ಪ್ರಕರಣ ವಿಧಾನ ಪರಿಷತ್ ವ್ಯಾಪ್ತಿಗೆ ಬರುವುದರಿಂದ ಸ್ಥಳ ಮಹಜರಿಗೆ ಸಂಬಂಧಿಸಿದಂತೆ
ಪರಿಷತ್ ಸಭಾಪತಿಗಳೇ ನಿಯಮಾನುಸಾರ ತೀರ್ಮಾನ ಕೈಗೊಳ್ಳುತ್ತಾರೆ. ಆದರೆ, ಲಕ್ಷ್ಮೀ ಹೆಬ್ಬಾಳ್ಕರ್ ಶಾಸಕರಾಗಿರುವುದರಿಂದ ಅವರ ವಿಚಾರ ನನ್ನ ವ್ಯಾಪ್ತಿಗೆ ಬರುತ್ತದೆ. ಅವರು ಪ್ರಕರಣ ಬಗ್ಗೆ ದೂರು ನೀಡಿದ್ದು, ಅದನ್ನು ಪ್ರಿವಿಲೇಜ್ ಕಮಿಟಿಗೆ ವಹಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.
ಹಾಲಿ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನ ಮೇಲಿನ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿ ಪ್ರಾಸಿಕ್ಯೂಷನ್ ವಿಚಾರವನ್ನು ಶಾಸಕಾಂಗದ ಕಾರ್ಯದರ್ಶಿಗಳಿಂದ ಮಾಹಿತಿ ಪಡೆಯಲಾಗುವುದು ಎಂದರು.
*16 ವಿಧೇಯಕ ಪಾಸ್:*
ಬೆಳಗಾವಿಯಲ್ಲಿ ನಡೆದ 16ನೇ ವಿಧಾನಸಭೆಯ 5ನೇ ಅಧಿವೇಶನ 8 ದಿನಗಳ ಕಾಲ 63 ಗಂಟೆ 57 ನಿಮಿಷಗಳ ಕಾರ್ಯಕಲಾಪ ನಡೆಸಿದೆ. ಧನವಿನಿಯೋಗ ಸೇರಿ ಒಟ್ಟು 16 ವಿಧೇಯಕಗಳನ್ನು ಮಂಡಿಸಿ ಅಂಗೀಕರಿಸಲಾಗಿದೆ ಎಂದು ಸ್ಪೀಕರ್ ಯು.ಟಿ. ಖಾದರ್ ಹೇಳಿದರು.
2024ನೇ ಸಾಲಿನ ಕರ್ನಾಟಕ ವಿಧಾನಮಂಡಲ(ಅನರ್ಹತಾ ನಿವಾರಣೆ)(ತಿದ್ದುಪಡಿ) ವಿಧೇಯಕ ಮತ್ತು 2024ನೇ ಸಾಲಿನ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಮಂತರ ಯೋಜನೆ(ತಿದ್ದುಪಡಿ) ವಿಧೇಯಕಗಳನ್ನು ವಾಪಸ್ ಪಡೆಯಲಾಗಿದೆ. ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ನಡೆದ ಚರ್ಚೆಯಲ್ಲಿ 49 ಸದಸ್ಯರು ಭಾಗವಹಿಸಿದ್ದು, 13 ಗಂಟೆ 11 ನಿಮಿಷಗಳ ಕಾಲ ಚರ್ಚೆ ನಡೆಸಲಾಗಿದೆ ಎಂದರು.
ರಾಜ್ಯದಲ್ಲಿ ಬಾಣಂತಿ ಸಾವು, ಅನುದಾನದ ಕೊರತೆ, ಅಭಿವೃದ್ಧಿ ಬಗ್ಗೆ ನಿಯಮ 60ರಡಿ ನಿಲುವಳಿ ಸೂಚನೆಯಲ್ಲಿ ನಡೆಸಲಾಗಿದೆ. ಒಟ್ಟು 3,004 ಪ್ರಶ್ನೆಗಳನ್ನು ಸ್ವೀಕರಿಸಲಾಗಿದ್ದು, ಸದನದಲ್ಲಿ ಉತ್ತರಿಸಬೇಕಾದ 150 ಪ್ರಶ್ನೆಗಳ ಪೈಕಿ 137 ಪ್ರಶ್ನೆಗಳಿಗೆ ಉತ್ತರ ನೀಡಲಾಗಿದೆ. 444 ಗಮನ ಸೆಳೆಯುವ ಸೂಚನೆ ಪೈಕಿ 294 ಸೂಚನೆಗಳಿಗೆ ಉತ್ತರಿಸಲಾಗಿದೆ. ಶೂನ್ಯ ವೇಳೆಯಲ್ಲಿ ಒಟ್ಟು 5 ಸೂಚನೆಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಅವರು ವಿವರ ನೀಡಿದರು.
*ಮಂಗಳೂರು ಕ್ಷೇತ್ರಕ್ಕೆ 2 ಯೋಜನೆಗೆ ಸಂಪುಟ ಅಸ್ತು:* ನನ್ನ ಮಂಗಳೂರು ಅಸೆಂಬ್ಲಿ ಕ್ಷೇತ್ರಕ್ಕೆ 200 ಕೋಟಿ ರೂ.ಗಳಲ್ಲಿ ಕೋಟೆಪುರ-ಬೋಳಾರ ವರೆಗೆ ನೇತ್ರಾವತಿ ನದಿಗೆ ಪರ್ಯಾಯ ಸೇತುವೆ ನಿರ್ಮಾಣ ಹಾಗೂ ಸಜಿಪನಡು ವಿನಿಂದ ತುಂಬೆ ವರೆಗೆ 62 ಕೋಟಿ ರೂ.ಗಳಲ್ಲಿ ಸೇತುವೆ ನಿರ್ಮಿಸಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದರಿಂದ ಮಂಗಳೂರು ನಗರ ಸೇರಿದಂತೆ ವಿವಿಧ ಕಡೆಗಳಲ್ಲಿ ಸಂಚಾರ ದಟ್ಟಣೆ ಕಡಿಮೆಯಾಗಲಿದೆ. ಸಮುದ್ರ ತೀರದಲ್ಲಿ ಕೇರಳ ವರೆಗೆ ಕಾರ್ನಿಶ್ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಮಾಂಕಾಳಿಪಡ್ಪುವಿನಲ್ಲಿ ರೈಲ್ವೆ ಕೆಳಸೇತುವೆ ಕಾಮಗಾರಿ ನಡೆಯುತ್ತಿದೆ. ಇದು ಮುಕ್ತಾಯಗೊಂಡರೆ ಪಂಪ್‌ವೆಲ್ ಮೂಲಕ ಹೋಗುವವರಿಗೆ ಹಾಗೂ ತೊಕ್ಕೊಟ್ಟಿನಿಂದ ಪಂಪ್‌ವೆಲ್ ಕಡೆಗೆ ಸಂಚರಿಸುವವರು ಸುಲಭದಲ್ಲಿ ಸಂಚರಿಸಲು ಸಾಧ್ಯವಾಗಲಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು