2:43 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಶಸ್ತ್ರಾಸ್ತ್ರ ತ್ಯಜಿಸಿ ಮುಖ್ಯವಾಹಿನಿಗೆ ಬನ್ನಿ: ನಕ್ಸಲರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಹ್ವಾನ

30/12/2024, 21:18

ಬೆಂಗಳೂರು(reporterkarnataka.com):ನಕ್ಸಲೀಯ ಚಟುವಟಿಕೆಗಳಲ್ಲಿ ತೊಡಗಿರುವವರು ಶರಣಾಗಿ ಮುಖ್ಯವಾಹಿನಿಗೆ ಬರಬೇಕೆಂದು ಸರ್ಕಾರವು ಬಯಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಮಧ್ಯೆ ನಕ್ಸಲೀಯರು ಪ್ರಜಾತಾಂತ್ರಿಕತೆಯ ಮುಖ್ಯವಾಹಿನಿಗೆ ಬರಬೇಕೆಂದು ಪ್ರತಿಪಾದಿಸುವ ಹಾಗೂ ಜೀವಹಾನಿಯು ಯಾವ ಕಡೆಯು ನಡೆಯಬಾರದು ಎಂದು ಬಯಸುವ ವಿವಿಧ ಪ್ರಗತಿಪರ ಹಾಗೂ ಜನಪರ ವೇದಿಕೆಗಳ ಹಲವಾರು ಮುಖಂಡರು ನನ್ನನ್ನು ಭೇಟಿ ಮಾಡಿರುತ್ತಾರೆ.
ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮತ್ತು ಶಾಂತಿ ನೆಲೆಸುವಂತೆ ಮಾಡಲು ಸರ್ಕಾರವು ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಹಿಂಜರಿಯುವುದಿಲ್ಲ ಎಂದು ಪತ್ರಿಕಾ ಹೇಳಿಯಲ್ಲಿ ಮುಖ್ಯಮಂತ್ರಿ ತಿಳಿಸಿದ್ದಾರೆ.
ನಕ್ಸಲೀಯರು ಮುಖ್ಯವಾಹಿನಿಗೆ ಬರಲು ಮಾತುಕತೆ ನಡೆಸಲು ಮುಂದಾದರೆ ಈ ಪ್ರಕ್ರಿಯೆಯನ್ನು ಸರ್ಕಾರ ಕಾನೂನಿನ ಚೌಕಟ್ಟಿನಲ್ಲಿ ಸ್ವಾಗತಿಸಿ, ಸಹಾನುಭೂತಿಯಿಂದ ನಡೆದುಕೊಳ್ಳುತ್ತದೆ.
ನಕ್ಸಲೀಯ ಚಟುವಟಿಕೆಗಳು ಕರ್ನಾಟಕದಲ್ಲಿ ಎಂದೂ ನೆರೆಯ ರಾಜ್ಯಗಳಂತೆ ವಿಪರೀತ ಪ್ರಮಾಣದಲ್ಲಿ ನಡೆದಿಲ್ಲ. ಆದರೆ, ಮಲೆನಾಡಿನಲ್ಲಿ ಎರಡು ದಶಕಗಳಿಂದ ಆಗಾಗ್ಗೆ ನಕ್ಸಲೀಯ ಚಟುವಟಿಕೆಗಳು ಕಾಣುತ್ತಲಿವೆ ಮತ್ತು ಆ ಕಾರಣದಿಂದ ಹಿಂಸೆ ಹಾಗೂ ಸಾವು-ನೋವುಗಳು ಸಂಭವಿಸಿವೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ಹಲವಾರು ಅಮಾಯಕರ, ಪೊಲೀಸರ ಮತ್ತು ನಕ್ಸಲೀಯ ಚಟುವಟಿಕೆಗಳಲ್ಲಿ ಇದ್ದವರ ಜೀವಹಾನಿಯೂ ಆಗಿದೆ. ಆದರೆ, ಪ್ರಜಾತಾಂತ್ರಿಕ ಸಮಾಜದಲ್ಲಿ ಬಂದೂಕಿನ ಮೂಲಕ ಬದಲಾವಣೆ ತರಲು ಹೊರಟಿರುವ ಆದರ್ಶವಾದಿಗಳು ತಮ್ಮ ಜೀವವನ್ನೂ ತೆತ್ತುಕೊಳ್ಳುತ್ತಾರೆ, ಇತರರ ಜೀವಹಾನಿಗೂ ಕಾರಣವಾಗುತ್ತಾರೆ. ಇದು ನೋವಿನ ವಿಚಾರವಾದರೂ, ಸಂವಿಧಾನಬದ್ಧವಾಗಿ ಆಡಳಿತ ನಡೆಸುವ ಸರ್ಕಾರ ಸುಮ್ಮನೇ ಕೂರುವುದು ಸಾಧ್ಯವಿಲ್ಲ. ಕರ್ನಾಟಕದ ಎಲ್ಲ ನಕ್ಸಲೀಯರು ಸಂಪೂರ್ಣವಾಗಿ ಶರಣಾಗತರಾಗಿ ಮುಖ್ಯವಾಹಿನಿಗೆ ಬರಲು ನಮ್ಮ ಸರ್ಕಾರವು ಬಯಸುತ್ತದೆ. ನಕ್ಸಲೀಯರು ಮುಖ್ಯವಾಹಿನಿಗೆ ಬರಲು ಮುಂದಾದ್ದಲ್ಲಿ ಶರಣಾಗತಿ ಕುರಿತು ಈಗಾಗಲೇ ಸರ್ಕಾರವು ನೀತಿಯನ್ನು ರೂಪಿಸಿದ್ದು, ಈ ನೀತಿಯನ್ನು ಸರಳೀಕರಣಗೊಳಿಸಿ, ಸಮಪರ್ಕವಾಗಿ ಜಾರಿ ಮಾಡಲಾಗುವುದೆಂದು ಭರವಸೆ ನೀಡುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ನಕ್ಸಲೀಯರ ಶರಣಾಗತಿ ನೀತಿಯನ್ವಯ ಹಂತ ಹಂತವಾಗಿ ಆರ್ಥಿಕ ನೆರವು ನೀಡಲಾಗುವುದು ಹಾಗೂ ಆಯುಧಗಳನ್ನು ಸರ್ಕಾರಕ್ಕೆ ಅದ್ಯಾರ್ಪಣೆ ಮಾಡುವ ನಕ್ಸಲೀಯರಿಗೆ ಪ್ರೋತ್ಸಾಹ ಧನ, ಕೌಶಲ್ಯ ತರಬೇತಿಗಳು ನೀಡುವುದಲ್ಲದೆ ಅವರುಗಳ ಪುನರ್ವಸತಿಗೂ ಸಹ ಎಲ್ಲ ಕ್ರಮಗಳನ್ನು ಸಹಾನುಭೂತಿಯಿಂದ ಹಾಗೂ ಆದ್ಯತೆ ಮೇರೆಗೆ ಪರಿಗಣಿಸಲು ಕ್ರಮವಹಿಸಲಾಗುವುದು.
ಅವರ ಮೇಲಿನ ಮೊಕದ್ದಮೆ / ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಲು ಸರ್ಕಾರದಿಂದ ಕ್ರಮ ಕೈಗೊಳ್ಳಲಾಗುವುದೆಂದು ಭರವಸೆ ನೀಡಿದೆ ಹಾಗೂ ಅವರಿಗೆ ಕಾನೂನಿನ ನೆರವು ಸಹ ನೀಡಲಾಗುವುದು.
ಈಗಾಗಲೇ ಶರಣಾಗತರಾದ ನಕ್ಸಲೀಯರ ಅಗತ್ಯಗಳನ್ನು ಸಹ ಗುರುತಿಸಿ ಅವರಿಗೂ ಸಹ ಪುನರ್ವಸತಿ ಕಲ್ಪಿಸುವ ಪ್ರಕ್ರಿಯೆಯನ್ನು ಮಾಡಲಾಗುತ್ತಿದೆ.
ಅದೇ ಸಂದರ್ಭದಲ್ಲಿ ಕಾನೂನನ್ನು ಕೈಗೆತ್ತಿಕೊಳ್ಳುವ ಮತ್ತು ಹಿಂಸಾತ್ಮಕ ಚಟುವಟಿಕೆಗಳಲ್ಲಿ ತೊಡಗುವ ಯಾರೇ ಆದರೂ, ಅವರ ವಿರುದ್ಧ ಕಠಿಣವಾದ ಕಾನೂನು ಕ್ರಮವನ್ನು ನಮ್ಮ ಸರ್ಕಾರವು ತೆಗೆದುಕೊಳ್ಳಲಿದೆ ಎಂದೂ ಈ ಸಂದರ್ಭದಲ್ಲಿ ಸ್ಪಷ್ಟಪಡಿಸಬಯಸುತ್ತೇನೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು