1:59 PM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಮೈಸೂರು ಇನ್ಫೋಸಿಸ್ ಆವರಣದಲ್ಲಿ ಚಿರತೆ ಸೆರೆಗೆ ಕಾರ್ಯಾಚರಣೆ; ಡ್ರೋನ್ ಬಳಕೆ: ಸಚಿವ ಈಶ್ವರ ಖಂಡ್ರೆ

31/12/2024, 20:11

•ಜನವಸತಿ ಪ್ರದೇಶಕ್ಕೆ ಚಿರತೆ ನುಗ್ಗದಂತೆ ಕ್ರಮ- ಅರಣ್ಯ ಸಚಿವರು
•ಚಿರತೆ ಪತ್ತೆಗೆ ಡ್ರೋನ್ ಕ್ಯಾಮರಾ ಬಳಕೆ:ಈಶ್ವರ ಖಂಡ್ರೆ

ಬೀದರ್(reporterkarnataka.com): ಮೈಸೂರು ನಗರದ ಇನ್ಫೋಸಿಸ್ ಆವರಣದಲ್ಲಿ ಇಂದು ನಸುಕಿನ 4.30ರ ಸುಮಾರಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಇದರ ಸೆರೆಗೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದ್ದಾರೆ.
ವಿಷಯ ತಿಳಿದ ಕೂಡಲೇ ಚಿರತೆ ಸೆರೆ ಹಿಡಿಯಲು ಚಿರತೆ ಕಾರ್ಯಪಡೆ ತಂಡವನ್ನು ಕಳುಹಿಸಲಾಗಿದೆ. ತಂಡದಲ್ಲಿ ಪಶುವೈದ್ಯರು, ಚಿರತೆ ಸೆರೆ ತರಬೇತಿ ಪಡೆದ 40 ಸಿಬ್ಬಂದಿ ಇದ್ದಾರೆ. ವನ್ಯಜೀವಿ ವಿಭಾಗದ ಅರಣ್ಯಾಧಿಕಾರಿಗಳೂ ಸ್ಥಳದಲ್ಲಿದ್ದು, ಕಾರ್ಯಾಚರಣೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಸಿಸಿ ಟಿವಿಯಲ್ಲಿ ಚಿರತೆ ಸಂಚಾರದ ದೃಶ್ಯಗಳು ಸೆರೆಯಾಗಿದ್ದು, ಇಂದು ಮಧ್ಯಾಹ್ನ 12ರ ಸುಮಾರಿನಲ್ಲಿ ಚಿರತೆ ಇರುವಿಕೆ ಖಚಿತವಾದ ಹಿನ್ನೆಲೆಯಲ್ಲಿ ತುರ್ತು ಕಾರ್ಯಾಚರಣೆಗೆ ಸೂಚನೆ ನೀಡಲಾಗಿದೆ. ಇನ್ಫೋಸಿಸ್ ತನ್ನ ಉದ್ಯೋಗಿಗಳಿಗೆ ಮನೆಯಿಂದಲೇ ಕಾರ್ಯ ನಿರ್ವಹಿಸಲು ಅವಕಾಶ ನೀಡಿದ್ದು ಆತಂಕ ಪಡುವ ಅಗತ್ಯವಿಲ್ಲ. ಅರಣ್ಯ ಇಲಾಖೆ ಸಿಬ್ಬಂದಿ ಬಲೆ, ಅರವಳಿಕೆ ಔಷಧದೊಂದಿಗೆ ಸಜ್ಜಾಗಿದ್ದಾರೆ.
ಇನ್ಫೋಸಿಸ್ ಆವರಣ ಸುಮಾರು 350 ಎಕರೆಯಷ್ಟಿದ್ದು, ಕೆಲವು ಭಾಗ ಕಾಡಿನಂತೆಯೇ ಇದೆ. ಇಲ್ಲಿ ಕಾರ್ಯಾಚರಣೆ ಸಾಹಸವೇ ಸರಿ. ಆದರೂ ಕಾರ್ಯಾಚರಣೆ ನಡೆಯುತ್ತಿದೆ. ಚಿರತೆ ಸಮೀಪದ ವಸತಿ ಪ್ರದೇಶಗಳಿಗೆ ನುಗ್ಗದಂತೆ ಸಹ ಕ್ರಮ ವಹಿಸಲಾಗಿದೆ. ಚಿರತೆ ಪತ್ತೆಗೆ ಥರ್ಮಲ್ ಕ್ಯಾಮರಾ ಅಳವಡಿಸಿದ ಡ್ರೋನ್ ಸಹ ಬಳಸಲಾಗುತ್ತಿದೆ.
ಅರಣ್ಯ ಇಲಾಖೆ ಸಿಬ್ಬಂದಿ ಶೀಘ್ರವೇ ಚಿರತೆ ಸೆರೆ ಹಿಡಿದು ಜನರ ಆತಂಕ ದೂರ ಮಾಡುತ್ತಾರೆ ಎಂಬ ವಿಶ್ವಾಸವನ್ನು ಈಶ್ವರ ಖಂಡ್ರೆ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು