7:52 PM Sunday5 - January 2025
ಬ್ರೇಕಿಂಗ್ ನ್ಯೂಸ್
ಇಡಿ ಅಧಿಕಾರಿಗಳ ಸೋಗಿನಲ್ಲಿ ಮನೆಗೆ ದಾಳಿ ಮಾಡಿ ಲಕ್ಷಾಂತರ ರೂಪಾಯಿ ಲೂಟಿ: ಕಠಿಣ… ಬೆಂಗಳೂರು: ಬೀದಿ ಬದಿ ವ್ಯಾಪಾರ ಮಾಡಲು ಅವಕಾಶವಿರುವ ರಸ್ತೆಗಳನ್ನು ಗುರುತಿಸಲು ಸೂಚನೆ ಎನ್. ಆರ್. ಪುರ: ರಾಜ್ಯ ಹೆದ್ದಾರಿಯಲ್ಲಿ ಓಡಾಡಿದ ಕಾಡಾನೆ; ನಾಗರಿಕರಲ್ಲಿ ಹೆಚ್ಚಿದ ಆತಂಕ ದೀರ್ಘಾವಧಿ ಸಾಲ 137.85 ಕೋಟಿಗಳ ಅನುದಾನ ವಿನಿಯೋಗ: ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ… ರಾಜ್ಯದ 4 ಸಾರಿಗೆ ನಿಗಮಗಳಲ್ಲಿ ಶೇ.15ರಷ್ಟು ದರ ಹೆಚ್ಚಳ: ಸಚಿವ ಸಂಪುಟ ಅನುಮೋದನೆ ಮಂಗಳೂರು ಸಹಿತ ರಾಜ್ಯದ 6 ಸ್ಮಾರ್ಟ್‌ ಸಿಟಿ ಕಾಮಗಾರಿಗಳ ತನಿಖೆ: ಸಚಿವ ಬೈರತಿ… ಕ್ರೆಡಲ್ ನಿಂದ 40.53 ಕೋಟಿ ಲಾಭಾಂಶ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಹಸ್ತಾಂತರ ಬೆಂಗಳೂರು: ಬೈಕ್ ಶೋ ರೂಂನಲ್ಲಿ ಅಗ್ನಿ ಅನಾಹುತ: ಸುಟ್ಟು ಕರಕಲಾದ 60ಕ್ಕೂ ಹೆಚ್ಚು… ಮುಂದಿನ ವರ್ಷ ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ ಖರ್ಗೆ ರಾಜೀನಾಮೆ ನೀಡುವ ಪ್ರಶ್ನೆ…

ಇತ್ತೀಚಿನ ಸುದ್ದಿ

ಸೋಲಾರ್ ಅಳವಡಿಸಿದರೆ ಕೇಂದ್ರದಿಂದ ಸಬ್ಸಿಡಿ: ಸಾರ್ವಜನಿಕರಲ್ಲಿ ಅರಿವು ಮೂಡಿಸುವಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೂಚನೆ

31/12/2024, 22:43

ಮಂಗಳೂರು(reporterkarnataka.com): ಮನೆಯ ಮೇಲ್ಚಾವಣಿಯಲ್ಲಿ ಸೋಲಾರ್ ಸಿಸ್ಟಮ್ ಅಳವಡಿಸಿದರೆ ಕೇಂದ್ರ ಸರಕಾರದಿಂದ ಗ್ರಾಹಕರಿಗೆ ಸಬ್ಸಿಡಿ ದೊರಕುತ್ತಿದ್ದು ಈ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚು ಅರಿವು ಮೂಡಿಸುವಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೂಚಿಸಿದ್ದಾರೆ.
ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆಯ ಕಾರ್ಯಾಗಾರದ ಸಿದ್ಧತೆಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈ ಯೋಜನೆಯಂತೆ ಸಾರ್ವಜನಿಕರು ತಮ್ಮ ಮನೆಯ ಮೇಲ್ಚಾವಣಿಯಲ್ಲಿ ಸೋಲಾರ್ ಸಿಸ್ಟಮ್ ಅಳವಡಿಸಿದರೆ ಸರಕಾರದಿಂದ ಸಬ್ಸಿಡಿ ದೊರಕಲಿದೆ. 1 ಕಿಲೋ ವ್ಯಾಟ್ ಗೆ ರೂ. 30 ಸಾವಿರ, 2 ಕಿಲೋ ವ್ಯಾಟ್ ರೂ.60 ಸಾವಿರ, 3 ಕಿಲೋ ವ್ಯಾಟ್ ಮೇಲ್ಪಟ್ಟ ಸೋಲಾರ್‍ಗಳಿಗೆ ರೂ. 78 ಸಾವಿರ ವರೆಗೆ ಸಬ್ಸಿಡಿ ದೊರಕಲಿದೆ ಎಂದು ಅವರು ತಿಳಿಸಿದರು.
ಈ ಸೋಲಾರ್ ಯೋಜನೆಯಿಂದ ಉತ್ಪತ್ತಿಯಾಗುವ ವಿದ್ಯುತ್‍ ಅನ್ನು ತಮ್ಮ ಮನೆಯ ಬಳಕೆಗೆ ಉಪಯೋಗಿಸಬಹುದು ಹಾಗೂ ಹೆಚ್ಚುವರಿ ವಿದ್ಯುತ್ ಅನ್ನು ಮೆಸ್ಕಾಂಗೆ ಮಾರಬಹುದಾಗಿದೆ ಎಂದು ಸಂಸದರು ತಿಳಿಸಿದರು.

ಮೆಸ್ಕಾಂ ವ್ಯವಸ್ಥಾಪನ ನಿರ್ದೇಶಕ ಜಯಕುಮಾರ್ ಮಾತನಾಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ 675 ಜನರು ಸೋಲಾರ್ ಯೋಜನೆ ಅಳವಡಿಸಿಕೊಂಡಿದ್ದಾರೆ. ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆ ಅಡಿಯಲ್ಲಿ ಸೋಲಾರ್ ಉಪಕರಣಗಳ ಮಾರಾಟಕ್ಕೆ 270 ಡೀಲರ್‍ಗಳನ್ನು ಗುರುತಿಸಲಾಗಿದೆ.


ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಮಾತನಾಡಿ ಸೋಲಾರ್ ಉಪಕರಣಗಳ ಖರೀದಿಗೆ ಬ್ಯಾಂಕ್ ಸಾಲ ನೀಡಲು ಬ್ಯಾಂಕುಗಳೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.
ಶಾಸಕರಾದ ಡಾ. ವೈ. ಭರತ್ ಶೆಟ್ಟಿ, ವೇದವ್ಯಾಸ್ ಕಾಮತ್ ಮಾತನಾಡಿ ಪ್ರಧಾನಮಂತ್ರಿ ಸೋಲಾರ್ ಘರ್ ಯೋಜನೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಸುವಂತೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಸಿ.ಎಲ್ ಆನಂದ್, ಲೀಡ್ ಬ್ಯಾಂಕ್ ಮ್ಯಾನೇಜರ್ ಕವಿತಾ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು