10:31 AM Friday4 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಗ್ಯಾಸ್ ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ನೆಲಸಮ; ಕೂಲಿಗೆ ಹೋಗಿದ್ರಿಂದ ಯಜಮಾನ ಪಾರು

01/01/2025, 21:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟದಿಂದ ಮನೆ ಸಂಪೂರ್ಣ ನೆಲಸಮವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗಬ್ಗಲ್ ಸಮೀಪದ ಕಂಬಳಿಹಾರ ಗ್ರಾಮದಲ್ಲಿ ನಡೆದಿದೆ‌.
ಮನೆ ಮಾಲೀಕ ಬಸಯ್ಯ ಹಿರೇಮಠ್ ಕೂಲಿಗೆ ಹೋಗಿದ್ರಿಂದ ಭಾರೀ ಅನಾಹುತದಿಂದ ಪಾರಾಗಿದ್ದಾರೆ.


ಸಿಲಿಂಡರ್ ಸಿಡಿದು ಸ್ಫೋಟಗೊಂಡ ರಭಸಕ್ಕೆ ಗುಡಿಸಲಿನಲ್ಲಿದ್ದ ವಸ್ತುಗಳು ಶೇ.100ಕ್ಕೆ 100ರಷ್ಟು ಸಟ್ಟು ಕರಕಲಾಗಿ ಇಡೀ ಗುಡಿಸಲಿದ್ದ ಜಾಗವೇ ಬೂದಿಮಯವಾಗಿದೆ. ಬಸಯ್ಯ ಹಿರೇಮಠ್ ಗೆ ಹೆಂಡತಿ-ಮಕ್ಕಳು ಯಾರೂ ಇಲ್ಲ. ಏಕಾಂಗಿಯಾಗಿ ಬದುಕುತ್ತಿರುವ ಹಿರೇಮಠ್ ಕೂಲಿ ಮಾಡಿಕೊಂಡು ಗುಡಿಸಲಿನಲ್ಲಿ ವಾಸ ಮಾಡುತ್ತಿದ್ದರು. ಇಂದು ಸ್ವತಃ ತಾನೇ ಅಡುಗೆ ಮಾಡಿ ಬೆಳಗ್ಗೆ ಊಟ ಮಾಡಿ ಮಧ್ಯಾಹ್ನದ ಊಟಕ್ಕೂ ಬಾಕ್ಸ್ ತೆಗೆದುಕೊಂಡು ಹೋಗಿದ್ದರು. ಆದರೆ, ಮಧ್ಯಾಹ್ನದ ವೇಳೆಗೆ ಸಿಲಿಂಡರ್ ಸಿಡಿದು ಇಡೀ ಗುಡಿಸಲೇ ಸರ್ವನಾಶವಾಗಿದೆ. ಒಂದು ವೇಳೆ ಸಿಲಿಂಡರ್ ಸ್ಫೋಟಗೊಳ್ಳುವ ವೇಳೆ ಗುಡಿಸಲು ಹಾಗೂ ಅಕ್ಕಪಕ್ಕ ಯಾರಾದರೂ ಇದ್ದಿದ್ದರೆ ಜೀವಹಾನಿಯೇ ಸಂಭವಿಸುತ್ತಿತ್ತು. ಆದರೆ, ಮಧ್ಯಾಹ್ನದ ವೇಳೆ ಆಗಿದ್ದರಿಂದ ಭಾರೀ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ಪಾರಾದಂತಾಗಿದೆ. ವಿಷಯ ತಿಳಿದು ಕೂಲಿಯಿಂದ ವಾಪಸ್ ಬಂದ ಬಸ್ಸಯ್ಯ ಹಿರೇಮಠ್ ಮನೆ ಸ್ಥಿತಿ ಕಂಡು ಕಣ್ಣೀರಿಟ್ಟಿದ್ದಾರೆ. ಇದ್ದೊಂದು ಗುಡಿಸಲು ಬೆಂಕುಗಾಹುತಿಯಾಗಿದ್ದರಿಂದ ಅವರಿಗೆ ಮಲಗೋಕು ಜಾಗ ಇಲ್ಲದಂತಾಗಿದೆ. ಬಾಳೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಬಾಳೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು