4:39 PM Monday6 - January 2025
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ: ಹುಲಿ ದಾಳಿಗೆ ಬಾಣಂತಿ ಹಸು ಬಲಿ; ಕರುವಿನ ಆಕ್ರಂಧನ ಬೆಂಗಳೂರು: 22ನೇ ಚಿತ್ರಸಂತೆ ಉದ್ಘಾಟನೆ; ಕಲಾಕೃತಿ ಕೊಂಡು ಕಲಾವಿದರ ಬೆಂಬಲಿಸಲು ಮುಖ್ಯಮಂತ್ರಿ ಕರೆ ವಿರೋಧ ಪಕ್ಷ ಆರೋಪ ಮಾಡಿದರೆ ಸಾಬೀತು ಮಾಡಬೇಕು: ದಾವಣಗೆರೆಯಲ್ಲಿ ಸಿಎಂ ಸಿದ್ದರಾಮಯ್ಯ ಇಡಿ ಅಧಿಕಾರಿಗಳ ಸೋಗಿನಲ್ಲಿ ಮನೆಗೆ ದಾಳಿ ಮಾಡಿ ಲಕ್ಷಾಂತರ ರೂಪಾಯಿ ಲೂಟಿ: ಕಠಿಣ… ಬೆಂಗಳೂರು: ಬೀದಿ ಬದಿ ವ್ಯಾಪಾರ ಮಾಡಲು ಅವಕಾಶವಿರುವ ರಸ್ತೆಗಳನ್ನು ಗುರುತಿಸಲು ಸೂಚನೆ ಎನ್. ಆರ್. ಪುರ: ರಾಜ್ಯ ಹೆದ್ದಾರಿಯಲ್ಲಿ ಓಡಾಡಿದ ಕಾಡಾನೆ; ನಾಗರಿಕರಲ್ಲಿ ಹೆಚ್ಚಿದ ಆತಂಕ ದೀರ್ಘಾವಧಿ ಸಾಲ 137.85 ಕೋಟಿಗಳ ಅನುದಾನ ವಿನಿಯೋಗ: ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ… ರಾಜ್ಯದ 4 ಸಾರಿಗೆ ನಿಗಮಗಳಲ್ಲಿ ಶೇ.15ರಷ್ಟು ದರ ಹೆಚ್ಚಳ: ಸಚಿವ ಸಂಪುಟ ಅನುಮೋದನೆ ಮಂಗಳೂರು ಸಹಿತ ರಾಜ್ಯದ 6 ಸ್ಮಾರ್ಟ್‌ ಸಿಟಿ ಕಾಮಗಾರಿಗಳ ತನಿಖೆ: ಸಚಿವ ಬೈರತಿ… ಕ್ರೆಡಲ್ ನಿಂದ 40.53 ಕೋಟಿ ಲಾಭಾಂಶ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಹಸ್ತಾಂತರ

ಇತ್ತೀಚಿನ ಸುದ್ದಿ

ಎಚ್.ಡಿ.ಕೋಟೆ ತಾಲೂಕು ಆಹಾರ ಸುರಕ್ಷತಾ ಅಧಿಕಾರಿಗಳ ದಿಢೀರ್ ಭೇಟಿ: ಪರಿಶೀಲನೆ

01/01/2025, 21:14

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಎಚ್. ಡಿ. ಕೋಟೆ ತಾಲೂಕಿನ ಆಹಾರ ಸುರಕ್ಷತಾ ಅಧಿಕಾರಿಗಳೂ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳೂ ಆದ ಟಿ. ರವಿಕುಮಾರ್ ಮತ್ತು ತಂಡದವರು ಎಚ್.ಡಿ.ಕೋಟೆ ತಾಲ್ಲೂಕಿನ ಅಣ್ಣೂರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆಹಾರ ಪರವಾನಗಿ (FSSA ಲೈಸೆನ್ಸ್ ) ಇಲ್ಲದೆ, ಹೋಟೆಲ್, ಬೇಕರಿ ಮತ್ತು ತಿಂಡಿ ಆಹಾರ ಪದಾರ್ಥಗಳನ್ನು ತಯಾರಿಸುವ ಅಂಗಡಿ ಮತ್ತು ಗೋಡೌನ್ ಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಾಲೀಕರು ಮತ್ತು ವ್ಯಾಪಾರಸ್ಥರು ಗ್ರಾಹಕರಿಗೆ ಉತ್ತಮವಾದ ಮತ್ತು ಶುದ್ಧವಾದ ಒಳ್ಳೆ ಗುಣಮಟ್ಟದ ತಿಂಡಿ ಪದಾರ್ಥ ಮತ್ತು ಆಹಾರವನ್ನು ನೀಡಬೇಕು,ಯಾವುದೇ ಕಾರಣಕ್ಕೂ ನೆನ್ನೆ ಮೊನ್ನೆ ತಯಾರಿಸಿರುವ ತಿಂಡಿ ಪದಾರ್ಥಗಳು, ಆಹಾರವನ್ನು ನೀಡಬಾರದು, ತಿಂಡಿ ಮತ್ತು ಆಹಾರ ಪದಾರ್ ಗಳನ್ನು ಮಾಡಿದ ನಂತರ ಅವುಗಳನ್ನು ಪ್ಲಾಸ್ಟಿಕ್ ಕವರ್ ನಿಂದ ಮುಚ್ಚಿಡಬೇಕು. ಯಾವುದೇ ಕಾರಣಕ್ಕೂ ನೊಣ ಮತ್ತು ಇನ್ನಿತರ ಕೀಟಗಳು ಕೂರದ ಹಾಗೆ ನೋಡಿಕೊಳ್ಳಬೇಕು, ಮತ್ತು ಆವಾಗ ಆವಾಗ ಜಾಗವನ್ನು ಫಿನಾಯಿಲ್ ನಿಂದ ಸ್ವಚ್ಛಗೊಳಿಸಬೇಕು, ಘನತ್ಯಾಜ್ಯಗಳನ್ನು ಗ್ರಾಮ ಪಂಚಾಯಿತಿಯವರು ನೇಮಿಸಿರುವ ವಾಹನಕ್ಕೆ ಮಾತ್ರ ನೀಡಬೇಕು,
ರಸ್ತೆ,ಬದಿ, ಕೆರೆ, ಕಟ್ಟೆ ,ನದಿಗಳಲ್ಲಿ ಬಿಸಾಡಬಾರದು ಹಾಗೂ ಎಚ್.ಡಿ. ಕೋಟೆ ಮತ್ತು ಸರಗೂರು ತಾಲ್ಲೂಕಿನ ಎಲ್ಲಾ ಹೋಟೆಲ್ ಮತ್ತು ಬೇಕರಿ ಮಾಲೀಕರು, ಮತ್ತು ವ್ಯಾಪಾರಸ್ಥರು 1 ವಾರದ ಒಳಗೆ ಕಡ್ಡಾಯವಾಗಿ ಆಹಾರ ಪರವಾನಿಗೆ (ಲೈಸೆನ್ಸ್) ಪಡೆಯಬೇಕು, ಇಲ್ಲದಿದ್ದರೆ ನಿಮ್ಮ ಮೇಲೆ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಸ್ಥಳದಲ್ಲೇ ಸೂಚಿಸಿ ನೋಟಿಸ್ ನೀಡಿ ಎಚ್ಚರಿಕೆ ನೀಡಿದರು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂತೋಷ್, ಗ್ರಾಮ ಪಂಚಾಯಿತಿ ಸದಸ್ಯರಾದ ಮಹೇಶ್ , ಚೌಡ ನಾಯ್ಕ, ಮುಖಂಡರಾದ ಸುರೇಶ್ ಆರೋಗ್ಯ ನಿರೀಕ್ಷಣಾಧಿಕಾರಿ ರವಿರಾಜ್ ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದವರು, ಗ್ರಾಮದ ಮುಖಂಡರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು