7:40 AM Sunday5 - October 2025
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್

ಇತ್ತೀಚಿನ ಸುದ್ದಿ

ಇಎಸ್ಐ ಆಸ್ಪತ್ರೆಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ದಿಢೀರ್ ಭೇಟಿ: ಸರ್ವರ್ ಸಮಸ್ಯೆ; ರೋಗಿಗಳ ಪರದಾಟ

01/01/2025, 21:18

ಮಂಗಳೂರು(reporterkarnataka.com): ನಗರದ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಗೆ (ಇಎಸ್ಐ)ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಇಂದು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ರೋಗಿಗಳು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಈ ವೇಳೆ ಆಸ್ಪತ್ರೆಯ ಹಿರಿಯ ಅಧಿಕಾರಿಗಳ ಅನುಪಸ್ಥಿತಿ ಕಂಡು ಬಂದಿದ್ದು, ತಕ್ಷಣವೇ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸಿ ರೋಗಿಗಳ ಸಮಸ್ಯೆಗೆ ಕಾರಣವಾದ ಸರ್ವರ್ ದೋಷವನ್ನು ಸರಿಪಡಿಸಲು ಅಧಿಕಾರಿಗಳು ನೀಡಲಾಗಿರುವ ದೂರುಗಳ ಪತ್ರಗಳನ್ನು ಹಾಜರುಪಡಿಸುವಂತೆ ತಿಳಿಸಿದರು. ಇದೇ ವೇಳೆ ಕಳೆದ ಹಲವಾರು ದಿನಗಳಿಂದ ಇಲ್ಲಿಗೆ ಬರುವ ರೋಗಿಗಳಿಗೆ ಸರ್ವರ್ ದೋಷವಿದೆ ಎಂದು ಹೇಳಿ, ದೂರದ ಊರುಗಳಿಂದ ಬರುವ ರೋಗಿಗಳು ಸತಾಯಿಸುವ ಬಗ್ಗೆ ಆಕ್ಷೇಪಣೆ ವ್ಯಕ್ತಪಡಿಸಿದ ಸಂಸದರು ಸರ್ವರ್ ಸಮಸ್ಯೆ ಇದ್ದರೆ ಇತರ ಆಸ್ಪತ್ರೆಗಳಿಗೆ ನೀಡುವ ಪತ್ರಗಳನ್ನು ಅಂತರ್ಜಾಲದಲ್ಲಿ ಆಗದಿದ್ದರೆ ಕೈ ಬರಹ ಮೂಲಕ ನೀಡಿ ಕೊಡಬೇಕು. ಯಾವುದೇ ಕಾರಣಕ್ಕೂ ರೋಗಿಗಳಿಗೆ ತೊಂದರೆ ನೀಡಬಾರದು ಎಂದು ತಾಕೀತು ಮಾಡಿದರು. ಈ ವೇಳೆ ಸಂದರ್ಭದಲ್ಲಿ ಮಾತನಾಡಿದ ಓರ್ವ ರೋಗಿಯ ಸಂಬಂಧಿಕರು ಕಳೆದ ಹಲವಾರು ವರ್ಷಗಳಿಂದ ಡಯಬಿಟಿಸ್ ರೋಗಿಗಳಿಗೆ
ಡಯಾಲಿಸಿಸ್ ಮಾಡಲು ಒಂದು ತಿಂಗಳಿಗೆ 12 ಟೋಕನ್ ನೀಡಲಾಗುತ್ತಿತ್ತು. ಆದರೆ ಈಗ 3 ತಿಂಗಳಿಗೆ ಟೋಕನ್ ನೀಡಲಾಗುತ್ತಿದ್ದು ಅದು ಸಹ ಈಗ ಸರ್ವರ್ ಸಮಸ್ಯೆಯಿಂದ ಸರಿಯಾದ ಸಮಯಕ್ಕೆ ಸಿಗದೇ ಖಾಸಗಿ ಆಸ್ಪತ್ರೆಯಲ್ಲಿ ನಗದು ಹಣ ನೀಡಿ ಡಯಾಲಿಸಿಸಿ ಮಾಡಿಕೊಳ್ಳುವಂತಾಗಿದೆ.
ಅಲ್ಲದೆ ದೂರದ ಊರಿನಿಂದ ಬೆಳಗ್ಗೆ 8 ಗಂಟೆಗೆ ಬಂದ ನಮಗೆ ಈಗ ಸಂಜೆ 5ರ ತನಕವೂ ಸರ್ವರ್ ಸಮಸ್ಯೆ, ಸರಿ ಆಗಿಲ್ಲ ಎಂದರು ನಮಗೆ ಇಷ್ಟು ದೂರ ನಡೆಯಲು ಸಹ ಸಾಧ್ಯವಿಲ್ಲ. ಅಲ್ಲದೆ ರೋಗಿಯನ್ನು ಆಸ್ಪತ್ರೆಗೆ ಕರೆದುಕೊಂಡು ಬಂದರೆ ಮಾತ್ರ ಟೋಕನ್ ನೀಡಲಾಗುವುದು ಎನ್ನುವ ನಿಯಮ ಬೇರೆ ಜಾರಿ ಮಾಡಿದ್ದಾರೆ ಎಂದರು.
ಇದೇ ವೇಳೆ ಭೇಟಿ ನೀಡಿದ್ದ ಸಂಸದರು ಇಂದು ಇಎಸ್ಐ ಆಸ್ಪತ್ರೆಗೆ ಭೇಟಿ ನೀಡಿದ್ದ ರೋಗಿಗಳ ಸಮಸ್ಯೆಯನ್ನು ತಿಳಿದುಕೊಂಡು ಅವರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಲು ಅಧಿಕಾರಿಗಳಿಗೆ ಆದೇಶಿಸಿದರು. ಇಂದು ರೋಗಿಗಳಿಗೆ ಅವಶ್ಯ ವಾಗಿರುವ ಸೂಕ್ತ ದಾಖಲೆ ಗಳನ್ನು ಸ್ಥಳದಲ್ಲೇ ದೊರಕಿಸಿ ಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಸಮಸ್ಯೆ ಸರಿ ಪಡಿಸುವ ಭರವಸೆಯನ್ನು ನೀಡಿದ್ದಾರೆ ಎಂದು ಸ್ಥಳದಲ್ಲಿದ್ದ ರೋಗಿಗಳು ಸಂತಸ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು