8:45 AM Friday18 - April 2025
ಬ್ರೇಕಿಂಗ್ ನ್ಯೂಸ್
Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ…

ಇತ್ತೀಚಿನ ಸುದ್ದಿ

‘ಬಾಲಿ’ ಎಂದೇ ಪ್ರಸಿದ್ದರಾಗಿದ್ದ ರಿದಂ ಕಿಂಗ್ ಬಾಲಸುಬ್ರಹ್ಮಣ್ಯಂ ನಿಧನ: ಕೆಎಫ್ ಎಂಎ ಸಂಸ್ಥೆ ತೀವ್ರ ಸಂತಾಪ

02/01/2025, 23:11

ಬೆಂಗಳೂರು(reporterkarnataka.com): ಜನಪ್ರಿಯ ಮೃದಂಗ ವಾದಕ ಬಾಲಸುಬ್ರಹ್ಮಣ್ಯಂ (ಬಾಲಿ) ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ಬಾಲಿ ಅವರಿಗೆ 80 ವರ್ಷ ವಯಸ್ಸಾಗಿತ್ತು. ಬಾಲಿ ಅವರ ನಿಧನಕ್ಕೆ ಕೆ.ಎಫ್.ಎಂ.ಎ(ಕರ್ನಾಟಕ ಫಿಲಂ ಮ್ಯುಸಿಷಿಯನ್ ಅಸೋಸಿಯೇಷನ್) ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಬಾಲಿ ಅವರು ನನ್ನಂತಹ ನೂರಾರು ಕಲಾವಿದರನ್ನು ಸಾಕಿ ಬೆಳಸಿದವರು. ಕಲೆಯನ್ನೇ ಉಸಿರಾಗಿ ಇಟ್ಟುಕೊಂಡಿದವರು. ಅವರ ಸಾವು ನನಗೆ ತುಂಬಾ ದುಃಖ ತಂದಿದೆ. ದೇವರು ಅವರಿಗೆ ಸದ್ಗತಿ ನೀಡಲಿ ಎಂದು ಕೆ.ಎಫ್.ಎಂ.ಎ ಅಧ್ಯಕ್ಷರಾದ ಸಾಧುಕೋಕಿಲ ತಿಳಿಸಿದ್ದಾರೆ.
ಚಿಕ್ಕ ವಯಸ್ಸಿನಲ್ಲಿಯೇ ಮೃದಂಗ ಕಲಿಕೆ ಆರಂಭಿಸಿದ್ದ ಬಾಲಿ ಅವರು ಡೋಲಕ್, ಮೃದಗಂ, ತಬಲಾ ವಾದ್ಯಗಳನ್ನು ನುಡಿಸುವಲ್ಲೂ ಪರಿಣಿತರಾಗಿದ್ದರು. ಡ್ರಮ್ಸ್, ಬ್ಯಾಂಗೋ, ಕಾಂಗೋಸ್ ಗಳಲ್ಲಿ ಕೂಡ ಅವರಿಗೆ ಅಸಾಧಾರಣ ಪರಿಣಿತಿ ಇತ್ತು. ಸುಗಮ ಸಂಗೀತದ ಹಿರಿಯ ಕಲಾವಿದರಾದ ಬಾಳಪ್ಪ ಹುಕ್ಕೇರಿ, ಪಿ.ಕಾಳಿಂಗ ರಾವ್, ಮೈಸೂರು ಅನಂತ ಸ್ವಾಮಿ, ಸಿ.ಅಶ್ವತ್ಥ್ ಮೊದಲಾದವರ ಸಂಯೋಜನೆಯ ವಾದ್ಯಗೋಷ್ಟಿಗಳನ್ನು ಅವರು ನಿರ್ವಹಿಸಿದ್ದರು. ಕನ್ನಡದ ಮೊದಲ ಭಾವಗೀತೆಗಳ ಧ್ವನಿಮುದ್ರಿಕೆ ‘ನಿತ್ಯೋತ್ಸವ’ದಿಂದಲೂ ಅವರು ಸಕ್ರಿಯರಾಗಿದ್ದರು. ಜಿ.ಕೆ.ವೆಂಕಟೇಶ್, ವಿಜಯಭಾಸ್ಕರ್, ಎಂ.ರಂಗರಾವ್, ಡಾ.ರಾಜೀವ ತಾರಾನಾಥ್, ಅಶ್ವತ್ಥ್-ವೈದಿಯವರು ಸಂಯೋಜಿಸಿದ್ದ ಚಿತ್ರಗೀತೆಗಳಿಗೆ ಬಾಲಿ ಅವರು ಕೆಲಸ ಮಾಡಿದ್ದರು. ಶಂಕರ್ ನಾಗ್ ಅವರ ಸಂಕೇತ್ ಸ್ಟುಡಿಯೋ ನಿರ್ಮಾಣದಲ್ಲೂ ಬಾಲಿ ಅವರು ಬಹಳ ಮುಖ್ಯವಾದ ಪಾತ್ರವನ್ನು ವಹಿಸಿದ್ದರು. ಹಿನ್ನೆಲೆ ಸಂಗೀತದ ಬಗ್ಗೆ ಅಡಿಯೋ-ವಿಡಿಯೋ-ಓದುವ ಹೀಗೆ ಮೂರು ಅಯಾಮದ ಪುಸ್ತಕವನ್ನು ಬರೆದಿದ್ದ ಬಾಲಿ ಅವರು ತಮ್ಮ ‘ರಮ್ಯ ಕಲ್ಚರಲ್ ಅಕಾಡಮಿ’ಯ ಮೂಲಕ ನೂರಾರು ಹೊಸ ಕಲಾವಿದರನ್ನು ರೂಪಿಸಿದ್ದರು. ಜೀ ಟಿವಿಯ ಜನಪ್ರಿಯ ಕಾರ್ಯಕ್ರಮ ‘ಸರಿಗಮಪ’ದ ತೀರ್ಪುಗಾರರ ಮಂಡಳಿಯಲ್ಲೂ ಬಾಲಿ ಅವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು