11:53 AM Tuesday7 - January 2025
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿಯ ಕಿತ್ತನಗದ್ದೆ ನಾಡ್ತಿಯ ಹೊಳೆಯಲ್ಲಿ ಮರಳು ಮಾಫಿಯ ಜಾಲ ಪತ್ತೆ ಎಲ್ಲ ಎಸ್ಕಾಂ ಸಿಬ್ಬಂದಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ: ಇಂಧನ ಸಚಿವ… ಊಟದಲ್ಲಿ ರಾಜಕೀಯ ಬೆರೆಸಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್ ಮೂಡಿಗೆರೆ: ಹುಲಿ ದಾಳಿಗೆ ಬಾಣಂತಿ ಹಸು ಬಲಿ; ಕರುವಿನ ಆಕ್ರಂಧನ ಬೆಂಗಳೂರು: 22ನೇ ಚಿತ್ರಸಂತೆ ಉದ್ಘಾಟನೆ; ಕಲಾಕೃತಿ ಕೊಂಡು ಕಲಾವಿದರ ಬೆಂಬಲಿಸಲು ಮುಖ್ಯಮಂತ್ರಿ ಕರೆ ವಿರೋಧ ಪಕ್ಷ ಆರೋಪ ಮಾಡಿದರೆ ಸಾಬೀತು ಮಾಡಬೇಕು: ದಾವಣಗೆರೆಯಲ್ಲಿ ಸಿಎಂ ಸಿದ್ದರಾಮಯ್ಯ ಇಡಿ ಅಧಿಕಾರಿಗಳ ಸೋಗಿನಲ್ಲಿ ಮನೆಗೆ ದಾಳಿ ಮಾಡಿ ಲಕ್ಷಾಂತರ ರೂಪಾಯಿ ಲೂಟಿ: ಕಠಿಣ… ಬೆಂಗಳೂರು: ಬೀದಿ ಬದಿ ವ್ಯಾಪಾರ ಮಾಡಲು ಅವಕಾಶವಿರುವ ರಸ್ತೆಗಳನ್ನು ಗುರುತಿಸಲು ಸೂಚನೆ ಎನ್. ಆರ್. ಪುರ: ರಾಜ್ಯ ಹೆದ್ದಾರಿಯಲ್ಲಿ ಓಡಾಡಿದ ಕಾಡಾನೆ; ನಾಗರಿಕರಲ್ಲಿ ಹೆಚ್ಚಿದ ಆತಂಕ ದೀರ್ಘಾವಧಿ ಸಾಲ 137.85 ಕೋಟಿಗಳ ಅನುದಾನ ವಿನಿಯೋಗ: ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ…

ಇತ್ತೀಚಿನ ಸುದ್ದಿ

ಕುಡಿಯಲು ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನೇ ಕೊಂದ ಕಿರಾತಕ: ನ್ಯೂ ಇಯರ್ ಸೆಲೆಬ್ರೇಷನ್ ಹಿನ್ನೆಲೆ ಕೃತ್ಯ?

03/01/2025, 10:44

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕುಡಿದು ಹೊಸ ವರ್ಷಾಚರಣೆ ಆಚರಿಸುವ ಮತ್ತಿನಲ್ಲಿ ಕುಡಿಯಲು ಹಣ ನೀಡಲು ನಿರಾಕರಿಸಿದ ಹಿನ್ನಲೆ ವ್ಯಕ್ತಿಯೊಬ್ಬರನ್ನ ನಡು ರಸ್ತೆಯಲ್ಲಿ ಬಿಯರ್ ಬಾಟೆಲ್ ನಿಂದ ಮನಸೋ ಇಚ್ಛೆ ಹಲ್ಲೆ ನಡೆಸಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ.
ಪಟ್ಟಣದ ಸರಸ್ವತಿ ಕಾಲೋನಿಯಲ್ಲಿ ವಾಸವಿರುವ ಮಹದೇವನಗರದ ನಿವಾಸಿ ಆಟೋ ಡ್ರೈವರ್ ರಫೀಕ್ ಪಾಷ (40) ಎಂಬುವವರೆ ಮೃತ ದುರ್ದೈವಿ.
ಹೊಸ ವರ್ಷದ ಮೊದಲ ದಿನ ಬುಧವಾರ ರಫೀಕ್ ರವರು ಸರಸ್ವತಿ ಕಾಲೋನಿಯಲ್ಲಿರುವ ತಮ್ಮ ಮನೆಗೆ ತಡರಾತ್ರಿಯಲ್ಲಿ ನಡೆದು ಹೋಗುತ್ತಿದ್ದಾಗ ನೀಲಕಂಠನಗರದ ನಿವಾಸಿ ಸಲೀಂ ತನ್ನ ಸ್ನೇಹಿತನ ಜೊತೆ ಬಂದು ಕುಡಿಯಲು ಹಣ ಕೊಡುವಂತೆ ರಫೀಕ್ ಅವರನ್ನು ಪೀಡಿಸಿದ್ದಾನೆ.
ಹಣ ಕೊಡಲು ರಫೀಕ್ ನಿರಾಕರಿಸಿದ್ದಾರೆ. ಈ ವೇಳೆ ಸಲೀಂ ಹಾಗೂ ಸ್ನೇಹಿತ ಬಿಯರ್ ಬಾಟೆಲ್ ನಿಂದ ಮನಸೋ ಇಚ್ಛೆ ಥಳಿಸಿದ್ದಾರೆ. ತೀವ್ರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ರಫೀಕ್ ರನ್ನ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ರಫೀಕ್ ಗುರುವಾರ ಮೃತಪಟ್ಟಿದ್ದಾರೆ
ಬಿಯರ್ ಬಾಟಲಿನಿಂದ ಹಲ್ಲೆ ನಡೆಸಿ ಕೊಲೆಗೆ ಕಾರಣರಾದ ನೀಲಕಂಠ ನಗರದ ನಿವಾಸಿ ಸಲೀಂ ಹಾಗೂ ಆತನ ಸ್ನೇಹಿತ ಪರಾರಿಯಾಗಿದ್ದಾರೆ.bಮೃತನ ಸಹೋದರ ಸಮೀವುಲ್ಲಾ ನಂಜನಗೂಡು ಟೌನ್ ಪೊಲೀಸ್ ಠಾಣೆಗೆ ದೂರು ನೀಡಿದ ಹಿನ್ನೆಲೆ ಪ್ರಕರಣ ದಾಖಲಿಸಿ ಕೊಂಡು ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು