7:52 AM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಕಳ್ಳತನ ಮಾಡಲು ಬಂದು ಮಹಿಳೆಯೊಂದಿಗೆ ಅಸಭ್ಯ ವರ್ತನೆ; ಯುವಕನ ಕಂಬಕ್ಕೆ ಕಟ್ಟಿ ಗ್ರಾಮಸ್ಥರಿಂದ ಧರ್ಮದೇಟು

03/01/2025, 15:50

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com
ಪತಿಯನ್ನ ಕಳೆದುಕೊಂಡ ವಿಧವೆಯೊಬ್ಬರ ಮನೆಗೆ ಮಧ್ಯ ರಾತ್ರಿಯಲ್ಲಿ ನುಗ್ಗಿದ ಕಳ್ಳನೊಬ್ಬ ಕದಿಯುವ ವಿಫಲ ಯತ್ನ ಮಾಡಿ ನಂತರ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಸಿಕ್ಕಿಬಿದ್ದ ಘಟನೆ ನಂಜನಗೂಡು ತಾಲೂಕು ಬೊಕ್ಕಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಹರ್ಷ ಎಂಬಾತನೇ ಕಳ್ಳತನಕ್ಕೆ ಯತ್ನಿಸಿ ಅಸಭ್ಯವಾಗಿ ವರ್ತಿಸಿದ ಯುವಕ.
ಸಿಕ್ಕಿಬಿದ್ದ ಯುವಕನನ್ನು ಗ್ರಾಮಸ್ಥರು ಕಂಬಕ್ಕೆ ಕಟ್ಟಿಹಾಕಿ ಥಳಿಸಿ ನಂತರ ಪೊಲೀಸರ ವಶಕ್ಕೆ ನೀಡಿದ್ದಾರೆ.
ಬೊಕ್ಕಹಳ್ಳಿ ಗ್ರಾಮದ ಮಂಜುಳ ನಾಲ್ಕು ತಿಂಗಳ ಹಿಂದೆ ಪತಿ ಶಿವಕುಮಾರ್ ರನ್ನ ಕಳೆದುಕೊಂಡು ಜೀವನೋಪಾಯಕ್ಕಾಗಿ ಮೈಸೂರಿನ ಬಿಸಿಎಂ ಹಾಸ್ಟೆಲ್ ನಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದಾರೆ. ಇವರಿಗೆ ಇದ್ದ ಒಂದು ಎಕ್ರೆ ಜಮೀನನ್ನ ಭೋಗ್ಯಕ್ಕೆ ಹಾಕಿದ ಪರಿಣಾಮ ಮನೆಯಲ್ಲಿ 3 ಲಕ್ಷ ನಗದು ಇಟ್ಟುಕೊಂಡಿದ್ದಾರೆ ಎಂಬ ಮಾಹಿತಿ ಅರಿತಿದ್ದ ಹರ್ಷ ಜನವರಿ 1ರ ಮಧ್ಯರಾತ್ರಿ ಮನೆಗೆ ನುಗ್ಗಿದ್ದಾನೆ.
ಶಬ್ದವಾದ ಹಿನ್ನಲೆ ಮಂಗಳಾ ಎಚ್ಚರಗೊಂಡು ಪರಿಶೀಲಿಸಿದಾಗ ಅತ್ತೆ ಚಿನ್ನಮ್ಮ ಮಲಗಿದ್ದ ಮಂಚದ ಕೆಳಗೆ ಹರ್ಷ ಅವಿತುಕೊಂಡಿರುವುದು ಗೊತ್ತಾಗಿದೆ.


ಯುವಕನನ್ನ ಹಿಡಿದಾಗ ಮಂಗಳಾ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ. ಆಕೆಯ ಅಂಗಾಂಗಗಳನ್ನ ಮುಟ್ಟಿ ಪರಾರಿಯಾಗಿದ್ದಾನೆ.
ಈ ವಿಚಾರ ಗ್ರಾಮಸ್ಥರಿಗೆ ತಿಳಿಸಿದಾಗ ಹರ್ಷನನ್ನು ಪತ್ತೆ ಹಚ್ಚಿ ಕಂಬಕ್ಕೆ ಕಟ್ಟಿಹಾಕಿ ಧರ್ಮದೇಟು ನೀಡಿದ್ದಾರೆ. ಹಣ ಕಳ್ಳತನ ಮಾಡಲು ಮನೆಗೆ ನುಗ್ಗಿದ್ದಾಗಿ ಹರ್ಷ ಒಪ್ಪಿಕೊಂಡಿದ್ದಾನೆ.
ಬಳಿಕ ಮಂಗಳಾ ಅವರು ನಂಜನಗೂಡು ಗ್ರಾಮಾಂತರ ಠಾಣೆಗೆ ದೂರು ನೀಡಿದ ಹಿನ್ನೆಲೆ ಪೊಲೀಸರು ಹರ್ಷನನ್ನ ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು