12:21 PM Tuesday7 - January 2025
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಎಚ್ ಎಂಪಿವಿ ಸೋಂಕು: ಜನರಲ್ಲಿ ಆತಂಕ ಬೇಡ, ಎಚ್ಚರ ಇರಲಿ; ಆರೋಗ್ಯ… ತೀರ್ಥಹಳ್ಳಿಯ ಕಿತ್ತನಗದ್ದೆ ನಾಡ್ತಿಯ ಹೊಳೆಯಲ್ಲಿ ಮರಳು ಮಾಫಿಯ ಜಾಲ ಪತ್ತೆ ಎಲ್ಲ ಎಸ್ಕಾಂ ಸಿಬ್ಬಂದಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ: ಇಂಧನ ಸಚಿವ… ಊಟದಲ್ಲಿ ರಾಜಕೀಯ ಬೆರೆಸಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್ ಮೂಡಿಗೆರೆ: ಹುಲಿ ದಾಳಿಗೆ ಬಾಣಂತಿ ಹಸು ಬಲಿ; ಕರುವಿನ ಆಕ್ರಂಧನ ಬೆಂಗಳೂರು: 22ನೇ ಚಿತ್ರಸಂತೆ ಉದ್ಘಾಟನೆ; ಕಲಾಕೃತಿ ಕೊಂಡು ಕಲಾವಿದರ ಬೆಂಬಲಿಸಲು ಮುಖ್ಯಮಂತ್ರಿ ಕರೆ ವಿರೋಧ ಪಕ್ಷ ಆರೋಪ ಮಾಡಿದರೆ ಸಾಬೀತು ಮಾಡಬೇಕು: ದಾವಣಗೆರೆಯಲ್ಲಿ ಸಿಎಂ ಸಿದ್ದರಾಮಯ್ಯ ಇಡಿ ಅಧಿಕಾರಿಗಳ ಸೋಗಿನಲ್ಲಿ ಮನೆಗೆ ದಾಳಿ ಮಾಡಿ ಲಕ್ಷಾಂತರ ರೂಪಾಯಿ ಲೂಟಿ: ಕಠಿಣ… ಬೆಂಗಳೂರು: ಬೀದಿ ಬದಿ ವ್ಯಾಪಾರ ಮಾಡಲು ಅವಕಾಶವಿರುವ ರಸ್ತೆಗಳನ್ನು ಗುರುತಿಸಲು ಸೂಚನೆ ಎನ್. ಆರ್. ಪುರ: ರಾಜ್ಯ ಹೆದ್ದಾರಿಯಲ್ಲಿ ಓಡಾಡಿದ ಕಾಡಾನೆ; ನಾಗರಿಕರಲ್ಲಿ ಹೆಚ್ಚಿದ ಆತಂಕ

ಇತ್ತೀಚಿನ ಸುದ್ದಿ

ಕೋಲಾರ ಜಿಲ್ಲೆ: ಮೂವರು ಪತ್ರಕರ್ತರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ

03/01/2025, 15:52

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterlarnataka@gmail.com

ಜಿಲ್ಲೆಯ ಹಿರಿಯ ಪತ್ರಕರ್ತರಾದ ವಾಸುದೇವ ಹೊಳ್ಳ, ಹಾಬಿ ರಮೇಶ್‌ ಹಾಗೂ ‘ಪ್ರಜಾವಾಣಿ’ ಜಿಲ್ಲಾ ವರದಿಗಾರ ಕೆ.ಓಂಕಾರ ಮೂರ್ತಿ ಅವರು ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಅಕಾಡೆಮಿ ಅಧ್ಯಕ್ಷರು ಗುರುವಾರ ಪ್ರಶಸ್ತಿ ಪಟ್ಟಿ ಪ್ರಕಟಿಸಿದ್ದು, ವಾಸುದೇವ ಹೊಳ್ಳ ಅವರಿಗೆ 2023ನೇ ಸಾಲಿನ ‘ವಾರ್ಷಿಕ ಪ್ರಶಸ್ತಿ’ ಹಾಗೂ ಹಾಬಿ ರಮೇಶ್‌ ಅವರಿಗೆ 2024ನೇ ಸಾಲಿನ ‘ವಾರ್ಷಿಕ ಪ್ರಶಸ್ತಿ’ ಒಲಿದಿದೆ.
ಓಂಕಾರ ಮೂರ್ತಿ ಅವರು ಅಕಾಡೆಮಿಯ 2024ನೇ ಸಾಲಿನ ‘ಅಭಿಮಾನಿ ದತ್ತಿ ಪ್ರಶಸ್ತಿ’ಗೆ ಭಾಜನರಾಗಿದ್ದಾರೆ. ‘ಕೆರೆ ಒಡಲಿಗೆ ಬೆಂಗಳೂರಿನ ಚರಂಡಿ ನೀರು; ತರಕಾರಿ ಗುಣಮಟ್ಟ ಕುಸಿತ, ಅವಳಿ ವ್ಯಾಲಿಯಲ್ಲಿ ಅಪಾಯ’ ವಿಶೇಷ ವರದಿಗೆ ಈ ಪ್ರಶಸ್ತಿ ಒಲಿದಿದೆ.
ಪ್ರಶಸ್ತಿ ಪುರಸ್ಕೃತರಿಗೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್‌, ಪ್ರಧಾನ ಕಾರ್ಯದರ್ಶಿ ಎಸ್‌.ಕೆ.ಚಂದ್ರಶೇಖರ್‌, ಖಜಾಂಚಿ ಎ.ಜಿ.ಸುರೇಶ್‌ ಕುಮಾರ್‌ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಕೆ.ಎಸ್.ಗಣೇಶ್, ವಿ.ಮುನಿರಾಜು ಅಭಿನಂದನೆ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು