10:14 AM Tuesday15 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮೊಗರ್ನಾಡು ದೇವ ಮಾತಾ ಚರ್ಚ್‌ ನಲ್ಲಿ ಸಂಭ್ರಮದ ಹೊಸ ವರ್ಷದ ಬಲಿಪೂಜೆ

03/01/2025, 15:55

ಬಂಟ್ವಾಳ(reporterkarnataka.com): 250 ವರ್ಷಗಳ ಸಾರ್ಥಕ ಸೇವೆಯನ್ನು ಪೂರ್ತಿಗೊಳಿಸಿ ಸಂಭ್ರಮಾಚರಣೆಯಲ್ಲಿರುವ ಬಂಟ್ವಾಳ ತಾಲೂಕಿನ ಮೊಗರ್ನಾಡು ದೇವ ಮಾತಾ ಚರ್ಚ್‌ ನಲ್ಲಿ ಹೊಸ ವರ್ಷದ ಬಲಿ ಪೂಜೆ ಸಂಭ್ರಮದಿಂದ ನಡೆಯಿತು.
ಬಲಿಪೂಜೆಯ ನೇತೃತ್ವವನ್ನು ಆಸ್ಟ್ರೇಲಿಯಾದ ಅತಿ ವಂದನೀಯ ಮೊನ್ಸಿಂಜೋರ್‌ ಆಲ್ಫ್ರೆಡ್‌ ರಾಯನ್‌ ಡಿ’ಸೋಜಾ ಅವರು ವಹಿಸಿ ಮೇರಿ ಮಾತೆ ದೇವ ಮಾತೆ ಆಗಿದ್ದರಿಂದ ಅವರು ನಮ್ಮೆಲ್ಲರ ಮಾತೆ. ಅವರ ಆದರ್ಶ ನಮಗೆ ದಾರಿದೀಪವಾಗಿದೆ ಎಂದರು. ಬಲಿಪೂಜೆಯಲ್ಲಿ ಚರ್ಚ್ ನ ಪ್ರಧಾನ ಧರ್ಮ ಗುರು ವಂದನೀಯ ಫಾ. ಅನಿಲ್‌ ಕೆನ್ಯೂಟ್‌ ಡಿ’ಮೆಲ್ಲೊ ಅವರು ಭಾಗವಹಿಸಿ ಭಕ್ತರಿಗೆ ಹೊಸ ವರ್ಷದ ಶುಭಾಶಯ ಸಲ್ಲಿಸಿದರು.
ಈ ಸಂದರ್ಭದಲ್ಲಿ ಚರ್ಚಿನ ಪಾಲನಾ ಸಮಿತಿಯ ಉಪಾಧ್ಯಕ್ಷ ಸಂತೋಷ್‌ ಡಿ’ ಸೋಜಾ, ಕಾರ್ಯದರ್ಶಿ ವಿಲ್ಫ್ರೆಡ್‌ ಲೋಬೊ, ಆಯೋಗಗಳ ಸಂಯೋಜಕಿ ಎಮಿಲಿಯಾ ಡಿ’ ಕುನ್ಹಾ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು