12:01 AM Tuesday7 - January 2025
ಬ್ರೇಕಿಂಗ್ ನ್ಯೂಸ್
ದೇಶದ ವೈವಿಧ್ಯತೆ, ಸೌಹಾರ್ದತೆ ಉಳಿಸಿಕೊಳ್ಳುವ ಮೂಲಕ ಆಂತರಿಕವಾಗಿ ಸಶಕ್ತವಾಗಬೇಕಿದೆ: ಧರ್ಮಸ್ಥಳದಲ್ಲಿ ಉಪ ರಾಷ್ಟ್ರಪತಿ… 60% ಕಮೀಷನ್; ನಿಮ್ಮ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಸಿಎಂಗೆ ಕೇಂದ್ರ ಸಚಿವ… ಇದು 60 ಪರ್ಸೆಂಟ್‌ ಕಮಿಷನ್‌ ಸರ್ಕಾರ, ಗುತ್ತಿಗೆದಾರರಿಗೆ ನೀಡಲು ಹಣವಿಲ್ಲ: ಪ್ರತಿಪಕ್ಷ ನಾಯಕ… ಹಣ ಕೈಯಲ್ಲಿದ್ದರೂ ಸ್ಕಾಲರ್ ಶಿಪ್ ವಿತರಣೆಯಲ್ಲಿ ನಿರ್ಲಕ್ಷ್ಯ: ಅಧಿಕಾರಿಗಳ ಚಳಿ ಬಿಡಿಸಿದ ಸಿಎಂ… ಅರಣ್ಯ ಒತ್ತುವರಿ, ಕಳ್ಳಬೇಟೆ ತಡೆಗೆ ಗರುಡಾಕ್ಷಿ ಅಸ್ತ್ರ: ಆನ್ಲೈನ್ ಎಫ್ಐಆರ್ ವ್ಯವಸ್ಥೆಗೆ ಚಾಲನೆ ರಾಜ್ಯದಲ್ಲಿ ಎಚ್ ಎಂಪಿವಿ ಸೋಂಕು: ಜನರಲ್ಲಿ ಆತಂಕ ಬೇಡ, ಎಚ್ಚರ ಇರಲಿ; ಆರೋಗ್ಯ… ತೀರ್ಥಹಳ್ಳಿಯ ಕಿತ್ತನಗದ್ದೆ ನಾಡ್ತಿಯ ಹೊಳೆಯಲ್ಲಿ ಮರಳು ಮಾಫಿಯ ಜಾಲ ಪತ್ತೆ ಎಲ್ಲ ಎಸ್ಕಾಂ ಸಿಬ್ಬಂದಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ: ಇಂಧನ ಸಚಿವ… ಊಟದಲ್ಲಿ ರಾಜಕೀಯ ಬೆರೆಸಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್ ಮೂಡಿಗೆರೆ: ಹುಲಿ ದಾಳಿಗೆ ಬಾಣಂತಿ ಹಸು ಬಲಿ; ಕರುವಿನ ಆಕ್ರಂಧನ

ಇತ್ತೀಚಿನ ಸುದ್ದಿ

ಬೆಂಗಳೂರು: ಬೀದಿ ಬದಿ ವ್ಯಾಪಾರ ಮಾಡಲು ಅವಕಾಶವಿರುವ ರಸ್ತೆಗಳನ್ನು ಗುರುತಿಸಲು ಸೂಚನೆ

04/01/2025, 09:28

ಬೆಂಗಳೂರು(reporterkarnataka.com): ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರ ಮಾಡಲು ಅವಕಾಶವಿರುವ ರಸ್ತೆಗಳನ್ನು ಮಾರ್ಗಸೂಚಿಯ ಅನುಸಾರ ಗುರುತಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಶ್ಚಿಮ ವಲಯ ವ್ಯಾಪ್ತಿಯಲ್ಲಿ “ಮುಖ್ಯ ಆಯುಕ್ತರ ನಡೆ ವಲಯದ ಕಡೆ”ಯಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ ವೇಳೆ ಬೀದಿ ಬದಿ ವ್ಯಾಪಾರಿಗಳು, ವ್ಯಾಪಾರ ವಲಯವನ್ನು ಗುರುತಿಸುವವರೆಗೆ ಯಾವುದೇ ರೀತಿಯ ಸಮಸ್ಯೆ ಮಾಡದಂತೆ ಮನವಿ ಮಾಡಿದರು.
ಅದಕ್ಕೆ ಮುಖ್ಯ ಆಯುಕ್ತರು ಪ್ರತಿಕ್ರಿಯಿಸಿ, ಪಶ್ಚಿಮ ವಲಯದಲ್ಲಿ ಈಗಾಗಲೇ ಸುಮಾರು 7000 ಬೀದಿ ಬದಿ ವ್ಯಾಪಾರಿಗಳನ್ನು ಗುರುತಿಸಲಾಗಿದೆ. ಪಾಲಿಕೆ ವತಿಯಿಂದ ವೆಂಡಿಂಗ್ ಜೋನ್‌ಗಳನ್ನು ಗುರುತಿಸುವ ಕೆಲಸ ನಡೆಯುತ್ತಿದೆ. ಈ ಸಂಬಂಧ ವೆಂಡಿಂಗ್ ಜೋನ್ ಗುರುತಿಸುವವರೆಗೆ ಯಾವ್ಯಾವ ರಸ್ತೆಗಳಲ್ಲಿ ವ್ಯಾಪಾರ ಮಾಡಬಹುದು ಎಂಬುದನ್ನು ಪರಿಶೀಲಿಸಿ ಬೀದಿ ಬದಿ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಅವಕಾಶ ಕಲ್ಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
*ಮಾರ್ಕ್ ಮಾಡಿ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಿ:*
ಯಾವ್ಯಾವ ರಸ್ತೆಗಳಲ್ಲಿ ಬೀದಿ ಬದಿ ವ್ಯಾಪಾರಸ್ತರು ವ್ಯಾಪಾರ ಮಾಡಬಹುದು ಎಂಬುದನ್ನು ಗುರುತಿಸಬೇಕು. ಅನಂತರ ಪಾದಚಾರಿಗಳಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಪಾದಚಾರಿ ಮಾರ್ಗದಲ್ಲಿ ಮಾರ್ಕಿಂಗ್ ಮಾಡಿ(ಗಡಿ ಗುರುತಿಸಿ) ಅವರಿಗೆ ವ್ಯಾಪಾರ ಮಾಡಲು ಅವಕಾಶ ಕಲ್ಪಿಸಿಕೊಡಲು ಸೂಚನೆ ನೀಡಿದರು.
*ಶಾಶ್ವತ ಪೆಟ್ಟಿಗೆಗಳನ್ನು ತೆರವುಗೊಳಿಸಿ:*
ಪಾದಚಾರಿ ಮಾರ್ಗದಲ್ಲಿ ಶಾಶ್ವತ ಪೆಟ್ಟಿಗಳನ್ನು ಇಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದರೆ ಅದನ್ನು ಕೂಡಲೆ ತೆರವುಗೊಳಿಸಬೇಕು. ಪಾದಚಾರಿಗಳ ಓಡಾಟಕ್ಕೆ ಅವಕಾಶವಿರಬೇಕು. ಪಾದಚಾರಿ ಮಾರ್ಗವನ್ನು ಸಂಪೂರ್ಣವಾಗಿ ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡುವಂತಿಲ್ಲ. ಇದರ ಜೊತೆಗೆ ಪಾದಚಾರಿ ಮಾರ್ಗದಲ್ಲಿ ಬರುವ ಅಂಗಡಿ/ಮುಂಗಟ್ಟುಗಳ ಮುಂಭಾಗದ ಪಾದಚಾರಿ ಮಾರ್ಗ ಒತ್ತುವರಿ ಮಾಡಿಕೊಂಡಿರುವುದನ್ನು ಪರಿಶೀಲಿಸಿ ತೆರವುಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
*ವಿದ್ಯುತ್ ಚಿತಾಗಾರಕ್ಕೆ ಪ್ರಸ್ತಾವನೆ ಸಲ್ಲಿಸಿ:*
ಚಾಮರಾಜಪೇಟೆಯ ಟಿ.ಆರ್.ಮಿಲ್ ಬಳಿಯ ರುದ್ರಭೂಮಿಯು ಸುಮಾರು 3 ಎಕರೆ ಪ್ರದೇಶದಲ್ಲಿದ್ದು, ವಿದ್ಯತ್ ಚಿತಾಗಾರ ನಿರ್ಮಾಣ ಮಾಡಿದರೆ ಸ್ಥಳೀಯರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಕೇಳಿದ್ದಕ್ಕೆ ಪ್ರತಿಕ್ರಿಯಿಸಿ, ವಿದ್ಯತ್ ಚಿತಾಗಾರ ಮಾಡುವ ಸಲುವಾಗಿ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
*90ಕ್ಕೂ ಹೆಚ್ಚು ಅಹವಾಲುಗಳ ಸ್ವೀಕಾರ:*
ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ಇಂದು ನಾಗರಿಕರಿಂದ ಒಟ್ಟಾರೆ 90ಕ್ಕೂ ಹೆಚ್ಚು ಅಹವಾಲನ್ನು ಸ್ವೀಕರಿಸಿ, ಎಲ್ಲಾ ದೂರುಗಳನ್ನು ತ್ವರಿತವಾಗಿ ಬಗೆಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ವೇಳೆ ವಲಯ ಆಯುಕ್ತರಾದ ಅರ್ಚನಾ, ವಲಯ ಜಂಟಿ ಆಯುಕ್ತರಾದ ಸಂಗಪ್ಪ, ಉಪ ಆಯುಕ್ತರಾದ ಶ್ರೀನಿವಾಸ್, ಮುಖ್ಯ ಅಭಿಯಂತರರಾದ ಶಶಿ ಕುಮಾರ್, ಕಾರ್ಯಪಾಲಕ ಅಭಿಯಂತರರು, ಪಾಲಿಕೆ, ಜಲಮಂಡಳಿ, ಬೆಸ್ಕಾಂ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು