12:08 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ವಿರೋಧ ಪಕ್ಷ ಆರೋಪ ಮಾಡಿದರೆ ಸಾಬೀತು ಮಾಡಬೇಕು: ದಾವಣಗೆರೆಯಲ್ಲಿ ಸಿಎಂ ಸಿದ್ದರಾಮಯ್ಯ

05/01/2025, 21:57

ದಾವಣಗೆರೆ(reporterkarnataka.com): ವಿರೋಧ ಪಕ್ಷಗಳದ್ದು ಕೇವಲ ಆರೋಪ ಮಾಡುವುದೇ ಕೆಲಸವಲ್ಲ. ದಾಖಲಾತಿಗಳ ಸಮೇತ ಆರೋಪ ಮಾಡಬೇಕು ಹಾಗೂ ಆರೋಪಗಳನ್ನು ಸಾಬೀತು ಪಡಿಸಬೇಕು. ಆಧಾರವಿಲ್ಲದೆ ಆರೋಪಗಳನ್ನು ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.


ಅವರು ಎಂಬಿಎ ಗ್ರೌಂಡ್ ಹೆಲಿಪ್ಯಾಡ್ ಆವರಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದರು.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಸರ್ಕಾರದಲ್ಲಿ 60% ಕಮಿಷನ್ ಪಡೆಯಲಾಗುತ್ತಿದೆ ಎಂದು ಆರೋಪಿಸಿರುವ ಬಗ್ಗೆ ಮೇಲಿನಂತೆ ಪ್ರತಿಕ್ರಿಯೆ ನೀಡಿದರು.
*ಕೇಂದ್ರ ಸರ್ಕಾರ ರೈಲ್ವೆ ದರ ಏರಿಕೆ ಮಾಡಿಲ್ಲವೇ?;*
ರಸ್ತೆ ಸಾರಿಗೆ ಸಂಸ್ಥೆಗಳ ಬಸ್ ದರ ಹೆಚ್ಚಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಎಲ್ಲಾ ಕಾಲದಲ್ಲಿಯೂ ಬಸ್ ದರಗಳು ಏರಿಕೆಯಾಗಿದೆ. ನೌಕರರ ವೇತನ, ಡೀಸಲ್ ಬೆಲೆ ಏರಿಕೆ,ಬಸ್ಸುಗಳನ್ನು ಕೊಳ್ಳುವುದು ಹಾಗೂ ಹಣದುಬ್ಬವೂ ಆಗಿದೆ. ವರ್ಷಗಳ ಹಿಂದೆ ಬೆಲೆ ಹೆಚ್ಚಿಸಲಾಗಿದ್ದು, ಸಾರಿಗೆ ನಿಗಮಗಳು ತೊಂದರೆಯಲ್ಲಿವೆ ಎನ್ನುವ ಕಾರಣ ಹಾಗೂ ಬೇಡಿಕೆಯೂ ಇದ್ದುದ್ದರಿಂದ ಬೆಲೆಯೇರಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಬಿಜೆಪಿ ಹಾಗೂ ಕುಮಾರಸ್ವಾಮಿಯವರ ಕಾಲದಲ್ಲಿಯೂ ಬೆಲೆ ಹೆಚ್ಚಿಸಲಿಲ್ಲವೇ? ಕೇಂದ್ರ ಸರ್ಕಾರ ರೈಲ್ವೆ ದರ ಏರಿಕೆ ಮಾಡಿಲ್ಲವೇ ಎಂದು ಪ್ರಶ್ನಿಸಿದರು.
*ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ:*
ಕೆಪಿಸಿಸಿ, ಮುಖ್ಯಮಂತ್ರಿಗಳ ಬದಲಾವಣೆಯ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ಈ ವಿಷಯಗಳ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದರು.
ಖಾಲಿ ಇರುವ ಸಚಿವ ಸ್ಥಾನಗಳನ್ನು ತುಂಬುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ನಾಗೇಂದ್ರ ಅವರ ರಾಜೀನಾಮೆಯಿಂದ ಖಾಲಿಯಾಗಿರುವ ಸಚಿವ ಸ್ಥಾನವನ್ನು ತುಂಬುವ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಲಾಗುವುದು ಎಂದರು.
*ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ನಡೆಸಲು ನಾವು ಸಿದ್ದ:*
ಜಿಲ್ಲಾ ಮತ್ತು ತಾಲ್ಲೂಕು ಪಂಚಾತಿಗಳು ಚುನಾವಣೆಗಳು ನಡೆದು ಐದು ವರ್ಷಗಳಾಗಿವೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ವಿಷಯ ನ್ಯಾಯಾಲಯದ ಮುಂದೆ ಹೋಗಿದೆ. ವಿಷಯ ಅಲ್ಲಿಯೇ ಇತ್ಯರ್ಥವಾಗಬೇಕು. ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ನಡೆಸಲು ನಾವು ತಯಾರಾಗಿದ್ದೇವೆ ಎಂದರು.
*ಒಳಮೀಸಲಾತಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ:* ಒಳಮೀಸಲಾತಿ ನೀಡಬೇಕೆಂದು ಸರ್ವೋಚ್ಚ ನ್ಯಾಯಾಲಯ ಹೇಳಿದ್ದು ಪ್ರಾಯೋಗಿಕ ಮಾಹಿತಿ ಇಲ್ಲದಿರುವುದರಿಂದ ನಾಗಮೋಹನ್ ದಾಸ್ ಅವರ ನೇತೃತ್ವದ ಸಮಿತಿ ರಚಿಸಲಾಗಿದೆ. ಒಳಮೀಸಲಾತಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.
*ರಾಜಕೀಯ ಚರ್ಚೆ ನಡೆದಿಲ್ಲ:*
ಸಚಿವ ಸತೀಶ್ ಜಾರಕಿಹೊಳಿ ಅವರ ಮನೆಯಲ್ಲಿ ಹಲವು ಸಚಿವರು ಸಭೆ ಸೇರಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಊಟಕ್ಕೆ ಸೇರುವುದೇ ತಪ್ಪೇ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ರಾಜಕಾರಣಿಗಳು ಊಟಕ್ಕೆ ಸೇರಿದರೆ ಬಣ್ಣ ಕಟ್ಟಲಾಗುತ್ತದೆ. ಈಗಾಗಲೇ ಹೇಳಿದಂತೆ ಅಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.
ದಾವಣಗೆರೆಯಲ್ಲಿ ವಿಶ್ವ ಕನ್ನಡ ಸಮ್ಮೇಳನ ಆಯೋಜಿಸಬೇಕೆಂದು ಈ ಹಿಂದೆ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಬಜೆಟ್ ನಲ್ಲಿ ಘೋಷಿಸಲಾಗಿತ್ತು ಎಂಬುದಕ್ಕೆ ಉತ್ತರಿಸಿ ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು.
*ಮಾರ್ಚ್ ನಲ್ಲಿ ಬಜೆಟ್ ಮಂಡನೆ:*
ಈ ಬಾರಿಯ ಬಜೆಟ್ ನ್ನು ಮಾರ್ಚ್ ನಲ್ಲಿ ಮಂಡಿ. ಆಯವ್ಯಯ ಪೂರ್ವಭಾವಿ ಚರ್ಚೆ ಪ್ರಾರಂಭವಾದ ನಂತರ ದಿನಾಂಕವನ್ನು ತಿಳಿಸಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು