5:47 AM Wednesday8 - January 2025
ಬ್ರೇಕಿಂಗ್ ನ್ಯೂಸ್
ದೇಶದ ವೈವಿಧ್ಯತೆ, ಸೌಹಾರ್ದತೆ ಉಳಿಸಿಕೊಳ್ಳುವ ಮೂಲಕ ಆಂತರಿಕವಾಗಿ ಸಶಕ್ತವಾಗಬೇಕಿದೆ: ಧರ್ಮಸ್ಥಳದಲ್ಲಿ ಉಪ ರಾಷ್ಟ್ರಪತಿ… 60% ಕಮೀಷನ್; ನಿಮ್ಮ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಸಿಎಂಗೆ ಕೇಂದ್ರ ಸಚಿವ… ಇದು 60 ಪರ್ಸೆಂಟ್‌ ಕಮಿಷನ್‌ ಸರ್ಕಾರ, ಗುತ್ತಿಗೆದಾರರಿಗೆ ನೀಡಲು ಹಣವಿಲ್ಲ: ಪ್ರತಿಪಕ್ಷ ನಾಯಕ… ಹಣ ಕೈಯಲ್ಲಿದ್ದರೂ ಸ್ಕಾಲರ್ ಶಿಪ್ ವಿತರಣೆಯಲ್ಲಿ ನಿರ್ಲಕ್ಷ್ಯ: ಅಧಿಕಾರಿಗಳ ಚಳಿ ಬಿಡಿಸಿದ ಸಿಎಂ… ಅರಣ್ಯ ಒತ್ತುವರಿ, ಕಳ್ಳಬೇಟೆ ತಡೆಗೆ ಗರುಡಾಕ್ಷಿ ಅಸ್ತ್ರ: ಆನ್ಲೈನ್ ಎಫ್ಐಆರ್ ವ್ಯವಸ್ಥೆಗೆ ಚಾಲನೆ ರಾಜ್ಯದಲ್ಲಿ ಎಚ್ ಎಂಪಿವಿ ಸೋಂಕು: ಜನರಲ್ಲಿ ಆತಂಕ ಬೇಡ, ಎಚ್ಚರ ಇರಲಿ; ಆರೋಗ್ಯ… ತೀರ್ಥಹಳ್ಳಿಯ ಕಿತ್ತನಗದ್ದೆ ನಾಡ್ತಿಯ ಹೊಳೆಯಲ್ಲಿ ಮರಳು ಮಾಫಿಯ ಜಾಲ ಪತ್ತೆ ಎಲ್ಲ ಎಸ್ಕಾಂ ಸಿಬ್ಬಂದಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ: ಇಂಧನ ಸಚಿವ… ಊಟದಲ್ಲಿ ರಾಜಕೀಯ ಬೆರೆಸಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್ ಮೂಡಿಗೆರೆ: ಹುಲಿ ದಾಳಿಗೆ ಬಾಣಂತಿ ಹಸು ಬಲಿ; ಕರುವಿನ ಆಕ್ರಂಧನ

ಇತ್ತೀಚಿನ ಸುದ್ದಿ

ನಂಜನಗೂಡು: ಅದ್ದೂರಿಯಾಗಿ ನಡೆದ ವಾಲ್ಮೀಕಿ ಜಯಂತಿ; ಮಾಜಿ ಶಾಸಕ ಹರ್ಷವರ್ಧನ್ ಚಾಲನೆ

06/01/2025, 20:20

ಮೋಹನ್ ನಂಜನಗೂಡು ಮೈಸೂರು

info.reporterkarnataka@gmal.com

ನಂಜನಗೂಡು ತಾಲ್ಲೂಕಿನ ಹರತಲೆ ಗ್ರಾಮದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಯುವಕರ ಸಂಘ ಮತ್ತು ಸಿ. ಚಿಕ್ಕರಂಗನಾಯಕ ಅಭಿಮಾನಿಗಳ ಬಳಗದ ವತಿಯಿಂದ ಆಯೋಜಿಸಲಾಗಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯು ಸಡಗರ ಸಂಭ್ರಮದಿಂದ ನಡೆಯಿತು.
ಕಾರ್ಯಕ್ರಮವನ್ನು ಮಾಜಿ ಶಾಸಕ ಬಿ. ಹರ್ಷವರ್ಧನ್ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.
ಜಿ.ಪಂ ಮಾಜಿ ಸದಸ್ಯ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಗೌರವಾಧ್ಯಕ್ಷ ಚಿಕ್ಕರಂಗನಾಯಕ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಇದೇ ಸಂದರ್ಭ ಸಿ. ಚಿಕ್ಕ ರಂಗನಾಯಕ ಅಭಿಮಾನಿಗಳ ಬಳಗದ ವತಿಯಿಂದ ನೂತನ ವರ್ಷದ ಕ್ಯಾಲೆಂಡರ್ ಸಹ ಬಿಡುಗಡೆ ಮಾಡಲಾಯಿತು.
ಅಲ್ಲದೆ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನಿಸಲಾಯಿತು.


ಕಾರ್ಯಕ್ರಮವನ್ನು ಉದ್ಘಾಟಿಸಿ ಹಾಗೂ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾಜಿ ಶಾಸಕ ಹರ್ಷವರ್ಧನ್ ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಚಿಕ್ಕರಂಗನಾಯಕ ಮಾತನಾಡಿ ಮಹರ್ಷಿ ವಾಲ್ಮೀಕಿ,ಬುದ್ದ, ಬಸವ, ಅಂಬೇಡ್ಕರ್, ಕನಕದಾಸರು ಸೇರಿದಂತೆ ಹಲವಾರು ದಾರ್ಶನಿಕರನ್ನು ಒಂದು ಜಾತಿಗೆ ಸೀಮಿತಗೊಳಿಸಬಾರದು. ಮಹರ್ಷಿ ವಾಲ್ಮೀಕಿ ಅವರು ಬರೆದಿರುವ ರಾಮಾಯಣ ಒಂದು ಜಾತಿಗೆ ಸೀಮಿತವಾಗಿಲ್ಲ ಅದು ಇಡೀ ವಿಶ್ವಕ್ಕೆ ಹಾಗೂ ಇಡೀ ಸಮಾಜಕ್ಕೆ ಪ್ರಸ್ತುತವಾಗಿದೆ. ಅಂತಹ ದಾರ್ಶನಿಕರ ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಅವರ ಮಾರ್ಗದಲ್ಲೇ ನಡೆಯಬೇಕು ಎಂದು ಎಂದು ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ಬಳಿಕ ಮಹರ್ಷಿ ವಾಲ್ಮೀಕಿ ರವರ ಪುತ್ಥಳಿ ಇರುವ ರಥಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಲಾಯಿತು.
ಗ್ರಾಮದ ಪ್ರಮುಖ ಬೀದಿಗಳಲ್ಲಿ ಅದ್ದೂರಿಯಾಗಿ ಮೆರವಣಿಗೆ ಮಾಡಲಾಯಿತು.
ಮೆರವಣಿಗೆಯಲ್ಲಿ ಕಳಶ ಹೊತ್ತ ಹೆಣ್ಣು ಮಕ್ಕಳು ಸೇರಿದಂತೆ ವಿವಿಧ ಜಾನಪದ ಕಲಾ ತಂಡಗಳು ಭಾಗವಹಿಸಿದ್ದವು. ಡಿಜೆ ಸದ್ದಿಗೆ ಮುಖಂಡರು ಹಾಗೂ ಯುವಕರು ಹೆಜ್ಜೆ ಹಾಕಿ ಕುಣಿದು ಕುಪ್ಪಳಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಮಹದೇವಸ್ವಾಮಿ, ನಾಯಕರ ಸಂಘದ ಅಧ್ಯಕ್ಷ ಬಂಗಾರಸ್ವಾಮಿ, ಬಿಜೆಪಿ ಅಧ್ಯಕ್ಷ ಕೆಂಡಗಣ್ಣಪ್ಪ, ಬಿಜೆಪಿ ನಗರ ಅಧ್ಯಕ್ಷ ಸಿದ್ದರಾಜು, ವಕೀಲ ಮಹೇಶ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಲತಾ ಮುದ್ದು ಮೋಹನ್, ಗ್ರಾಪಂ ಸದಸ್ಯರಾದ ಗೋವಿಂದರಾಜು, ವರಲಕ್ಷ್ಮಿ ಸೇರಿದಂತೆ ಹಲವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು