10:40 PM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

ಹುರುಳಿ ಒಕ್ಕಣೆ ಎಫೆಕ್ಟ್?: ನಡು ರಸ್ತೆಯಲ್ಲೇ ಸುಟ್ಟು ಭಸ್ಮವಾದ ಕಾರು; ಪ್ರಯಾಣಿಕರು ಪಾರು

07/01/2025, 19:34

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಹುರುಳಿ ಒಕ್ಕಣೆಯ ಎಫೆಕ್ಟ್ ನಿಂದಾಗಿ ನಡುರಸ್ತೆಯಲ್ಲಿ ಕಾರು ಸುಟ್ಟು ಕರುಕಲಾಗಿ ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆಯು ನಂಜನಗೂಡು ಹಾಗೂ ಸರಗೂರು ತಾಲೂಕಿನ ಗಡಿಯಂಚಿನ ಯಶವಂತಪುರ ಗ್ರಾಮದ ಮುಖ್ಯರಸ್ತೆಯಲ್ಲಿ ನಡೆದಿದೆ.
ಸರಗೂರು ತಾಲೂಕಿನ ಪವಿತ್ರ ಧಾರ್ಮಿಕ ಕ್ಷೇತ್ರ ಶ್ರೀ ಬೇಲದಕುಪ್ಪೆ ಮಹದೇಶ್ವರ ಸ್ವಾಮಿ ದೇವಾಲಯಕ್ಕೆ ತೆರಳುವ ರಾಜ್ಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಕೆ.ಆರ್.ನಗರದ ವ್ಯಕ್ತಿಗಳಿಗೆ
ಸೇರಿದ ಕಾರು ಎಂದು ಹೇಳಲಾಗಿದೆ.
ರಸ್ತೆ ಮಧ್ಯೆ ರಾಗಿ ಹಾಗೂ ಹುರುಳಿ ಒಕ್ಕಣೆ ಮಾಡುತ್ತಿರುವ ಹಿನ್ನಲೆ ಘಟನೆ ನಡೆದಿರಬಹುದೆಂದು ಶಂಕಿಸಲಾಗಿದೆ. ಕಾರಿಗೆ ಒಕ್ಕಣೆಗೆ ಹಾಕಿರುವ ಹುರುಳಿ ಸತ್ತೆ ಸಿಲುಕಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.ರಾತ್ರಿ ವೇಳೆ ಘಟನೆ ನಡೆದ ಕಾರಣ ಕಾರಿನಲ್ಲಿದ್ದ ಪ್ರಯಾಣಿಕರು ಅಸಹಾಯಕರಾಗಿದ್ದಾರೆ.
ಬೆಂಕಿ ಇಡೀ ಕಾರನ್ನೆ ಆವರಿಸಿ ಸುಟ್ಟು ಭಸ್ಮ ಮಾಡಿದೆ ಕಾರಿಗೆ ಬೆಂಕಿ ಹತ್ತಿಕೊಳ್ಳುತ್ತಿದ್ದಂತೆ ಮಹಿಳೆಯರು ಮಕ್ಕಳಾದಿಯಾಗಿ ಕಾರಿನಿಂದ ಇಳಿದು ಅದೃಷ್ಟ ವಸಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆ ನಡೆದ ನಂತರ ಒಕ್ಕಣೆ ಮಾಡಿರುವ ಕುರುಹನ್ನ ಅಳಿಸಿ ಹಾಕುವ ಯತ್ನ ನಡೆದಿದೆ ಎನ್ನಲಾಗಿದೆ. ಸದ್ಯ ರಾಜ್ಯ ಹೆದ್ದಾರಿಯಲ್ಲಿ ಕಾರು ಅನಾಥವಾಗಿ ಸುಟ್ಟು ಕರುಕಲಾದ ಸ್ಥಿತಿಯಲ್ಲಿ ನಿಂತಿರುವುದು ಮಾತ್ರ ವಿಷಾದನೀಯ.


ರಸ್ತೆಯಲ್ಲಿ ಈ ರೀತಿ ಹುರುಳಿ, ರಾಗಿ, ಭತ್ತ, ಸೇರಿದಂತೆ ವಿವಿಧ ದವಸ ಧಾನ್ಯಗಳನ್ನು ಒಕ್ಕಣೆ ಮಾಡುತ್ತಿರುವುದರಿಂದ ಇಂತಹ ದುರ್ಘಟನೆಗಳ ಜೊತೆಗೆ ಪ್ರಾಣವನ್ನು ಕಳೆದುಕೊಳ್ಳುತ್ತಿರುವ ಘಟನೆಗಳು ಆಗಿಂದ್ದಾಗ್ಗೆ ನಡೆಯುತ್ತಲೇ ಇವೆ.
ಇದರಿಂದಾಗಿ ನಾಗರೀಕರ ಜೀವಕ್ಕೆ ಬೆಲೆಯೇ ಇಲ್ಲದಂತಾಗಿದೆ. ಇದೆಲ್ಲವನ್ನೂ ಕಂಡು ಕಾಣದಂತಿರುವ ಸಂಬಂಧ ಪಟ್ಟ ಅಧಿಕಾರಿಗಳು ಮುಂದಾದರು ಇದಕ್ಕೆ ಕಡಿವಾಣ ಹಾಕಿ ಜನರ ಜೀವದ ರಕ್ಷಣೆಗೆ ಮುಂದಾಗಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು