11:37 AM Thursday26 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್

ಇತ್ತೀಚಿನ ಸುದ್ದಿ

60% ಕಮೀಷನ್; ನಿಮ್ಮ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಸಿಎಂಗೆ ಕೇಂದ್ರ ಸಚಿವ ಕುಮಾರಸ್ವಾಮಿ ತಿರುಗೇಟು

07/01/2025, 19:38

*ಪತ್ರಿಕೆ ವರದಿ ಮಾಡಿದ್ದ ಬಾಕಿ ಕಾರ್ಡ್ ಪೋಸ್ಟ್ ಮಾಡಿ ಟಾಂಗ್ ಕೊಟ್ಟ ಕೇಂದ್ರ ಸಚಿವರು*

*₹32,000 ಕೋಟಿ ಬಿಲ್ ಬಾಕಿ ಬಿದ್ದಿದೆ. ಈ ಬಾಕಿ ಮೇಲೆ ನಿಮ್ಮ ಪರ್ಸಂಟೇಜ್ ಕರಿನೆರಳು ಕೂಡ ಬಿದ್ದಿದೆ! ಎಂದು ಕಿಡಿ*

*ನನ್ನನ್ನು ಟಾರ್ಗೆಟ್ ಮಾಡುವುದು ಮುಖ್ಯವಲ್ಲ, ಗುತ್ತಿಗೆದಾರ ಬಾಕಿ ಪಾವತಿಸಿ ಎಂದ ಸಚಿವರು*

ನವದೆಹಲಿ(reporterkarnataka.com):ರಾಜ್ಯ ಕಾಂಗ್ರೆಸ್ ಸರಕಾರದ ಮೇಲೆ 60% ಕಮೀಶನ್ ಆರೋಪವನ್ನು ಮತ್ತಷ್ಟು ತೀವ್ರಗೊಳಿಸಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಮಾಧ್ಯಮಗಳಲ್ಲಿ ಬಂದಿರುವ ವರದಿಗಳ ತುಣುಕುಗಳನ್ನು ಟ್ಯಾಗ್ ಮಾಡಿ ಸರಕಾರದ ವಿರುದ್ಧ ಪರ್ಸಂಟೇಜ್ ದಾಳಿ ಮಾಡಿರುವ ಅವರು, ಇಲ್ಲಿದೆ ನೋಡಿ ನಿಮ್ಮ ಲೂಟಿ ಸಾಕ್ಷಿಗುಡ್ಡೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದಾಖಲೆ ಕೊಡಿ.. ದಾಖಲೆ ಕೊಡಿ ಎನ್ನುತ್ತಿದ್ದೀರಿ.. ಇಲ್ನೋಡಿ ಸನ್ಮಾನ್ಯ ಸಿದ್ದರಾಮಯ್ಯನವರೇ.. ನಿಮ್ಮ ಖೊಟ್ಟಿ ಗ್ಯಾರಂಟಿ ಸರಕಾರದ ಲೂಟಿ ಸಾಕ್ಷಿಗುಡ್ಡೆ. ಪತ್ರಿಕೆಯವರೇ ನಿಮ್ಮ ಸಾಕ್ಷಿಗುಡ್ಡೆಯ ಸಾಕ್ಷಾತ್ಕಾರ ಮಾಡಿಸಿದ್ದಾರೆ!! ನಿಮ್ಮ ಸರಕಾರ ಗುತ್ತಿಗೆದಾರರನ್ನು ಎಷ್ಟು ನಿರ್ಲಜ್ಜವಾಗಿ ಸುಲಿಗೆ ಮಾಡುತ್ತಿದೆ ಎನ್ನುವುದಕ್ಕೆ ಈ ಸಾಕ್ಷಿಗುಡ್ಡೆ ಸಾಕ್ಷ್ಯ ಸಾಲದೇ ಮುಖ್ಯಮಂತ್ರಿಗಳೇ..? ಎಂದು ಸಚಿವರು ಪ್ರಶ್ನೆ ಮಾಡಿದ್ದಾರೆ.
ಚೆಂಬು ಹಾಕಿ ಹಂಡೆ ಹೊಡೆದರು ಎನ್ನುವಂತೆ ಗ್ಯಾರಂಟಿ ಹೆಸರಿನಲ್ಲಿ ಬಿಡಿಗಾಸು ಕೊಟ್ಟು ಕೋಟಿ ಕೋಟಿ ಲೂಟಿ ಮಾಡುತ್ತಿದ್ದೀರಿ. ಗುತ್ತಿಗೆದಾರರ ₹32,000 ಕೋಟಿಯಷ್ಟು ಬಿಲ್ ಬಾಕಿ ಬಿದ್ದಿದೆ. ಈ ಬಾಕಿ ಮೇಲೆ ನಿಮ್ಮ ಪರ್ಸಂಟೇಜ್ ಕರಿನೆರಳು ಕೂಡ ಬಿದ್ದಿದೆ! ಸಾಲಸೋಲ ಮಾಡಿ ಕಾಮಗಾರಿ ಮಾಡಿರುವ ಗುತ್ತಿಗೆದಾರರು ದಯಾಮರಣಕ್ಕೆ ಅರ್ಜಿ ಬರೆಯುತ್ತಿದ್ದಾರೆ!! ಎಂದು ಕೇಂದ್ರ ಸಚಿವರು ಕಳವಳ ವ್ಯಕ್ತಪಡಿಸಿದ್ದಾರೆ.
ಗುತ್ತಿಗೆದಾರರ ಬಿಲ್ ಬಾಕಿ ಪಟ್ಟಿ ನೋಡಿ.. ಜಲ ಸಂಪನ್ಮೂಲ: ₹14,600 ಕೋಟಿ, ಲೋಕೋಪಯೋಗಿ: ₹10,000 ಕೋಟಿ, ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್: ₹3,100 ಕೋಟಿ, ಸಣ್ಣ ನೀರಾವರಿ: ₹2,800 ಕೋಟಿ, ಇತರೆ ಇಲಾಖೆ: ₹1,500 ಕೋಟಿ ಸೇರಿ ಒಟ್ಟು: ₹32,000 ಕೋಟಿ ಬಾಕಿ ಇದೆ ಎಂದು ಸಚಿವರು ಹೇಳಿದ್ದಾರೆ.
ಭಂಡತನ ಏಕೆ? ಆಗಿರುವ ತಪ್ಪು ಸರಿಪಡಿಸಿಕೊಳ್ಳಿ. ವಿನಾಕಾರಣ ಸಮರ್ಥನೆ ಲಾಯಕ್ಕಲ್ಲ. ಗುತ್ತಿಗೆದಾರರ ಬದುಕು ಉಳಿಸಿ ರಾಜ್ಯದ ಅಭಿವೃದ್ಧಿ ಕಡೆಗೆ ಗಮನ ಹರಿಸಿ. ಇದ್ದಿದ್ದನ್ನು ಇದ್ದಹಾಗೆ ಹೇಳಿದ್ದೇನೆ. ನೀವೂ, ನಿಮ್ಮ ಸಂಪುಟ ನನ್ನ ಮೇಲೆ ವಾಗ್ಯುದ್ಧಕ್ಕಿಳಿದರೆ ಉಪಯೋಗವೇನು? ಗುತ್ತಿಗೆದಾರರ ಬಾಕಿ ಪಾವತಿಗಿಂತ ನನ್ನನ್ನು ಟಾರ್ಗೆಟ್ ಮಾಡುವುದು ಮುಖ್ಯವಲ್ಲ ಎಂದು ಸಿಎಂ ಮತ್ತು ಸಚಿವರಿಗೆ ಕೇಂದ್ರ ಸಚಿವರು ಕಿವಿಮಾತು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು