11:26 AM Sunday18 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.…

ಇತ್ತೀಚಿನ ಸುದ್ದಿ

ರಾಯಚೂರು ನಗರದ ಆಯ್ದ 10 ಪಾರ್ಕುಗಳಲ್ಲಿ ಧ್ಯಾನ ಕೇಂದ್ರ ಸ್ಥಾಪಿಸಲು ಚಿಂತನೆ

07/01/2025, 23:01

ಬಳ್ಳಾರಿ(reporterkarnataka.com): ನಗರದ ಆಯ್ದ 10 ಪಾರ್ಕ್’ಗಳಲ್ಲಿ ಧ್ಯಾನ ಕೇಂದ್ರಗಳ ಸ್ಥಾಪನೆಗೆ ಯೋಜನೆ ರೂಪಿಸಲಾಗುವುದು ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.
ಬಳ್ಳಾರಿಯ ಗಾಂಧಿನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಪಿರಮಿಡ್ ಸ್ಪಿರಿಚುವಲ್ ಸೊಸೈಟಿ ಮೂವಮೆಂಟ್ ಸಂಸ್ಥೆಯ ವತಿಯಿಂದ ಏರ್ಪಡಿಸಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ನಿಮ್ಮ ಸಂಸ್ಥೆಯ ಬೇಡಿಕೆಯಂತೆ ನಗರದ 10 ಆಯ್ದ ಪಾರ್ಕ್’ಗಳಲ್ಲಿ ಧ್ಯಾನ ಕೇಂದ್ರ ನಿರ್ಮಿಸಲಾಗುವುದು, ಜನರು ಇದರ ಸದುಪಯೋಗ ಪಡೆಯಬೇಕು ಎಂದರು.
ಮಾನಸಿಕ ಖಿನ್ನತೆಯಿಂದ ಹೊರ ಬರಲು ಧ್ಯಾನ ಸಹಕಾರಿ ಎಂದು ಹೇಳಿದ ಅವರು, ಖಿನ್ನತೆಗೆ ಸಿಲುಕಿದ್ದ ಎಷ್ಟೋ ಜನರಿಗೆ ಧ್ಯಾನದಿಂದ ಜೀವದಾನ ಆಗಿದೆ ಎಂದರು.
ಭೌತಿಕ ಜಗತ್ತಿನ ಆಸೆ, ಆಕಾಂಕ್ಷೆಗಳಿಂದಾಗಿ ಜನರು ಒತ್ತಡಕ್ಕೆ ಸಿಲುಕಿದ್ದಾರೆ, ಅನಾರೋಗ್ಯಕರ ಸ್ಪರ್ಧೆ, ನಾ ಮುಂದೆ ಹೋಗಬೇಕೆಂಬ ಒತ್ತಡಕ್ಕೆ ಸಿಲುಕಿ ನೆಮ್ಮದಿ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.

ಇದಕ್ಕೂ ಮುನ್ನ ಮಾತನಾಡಿದ ಮಾಸ್ಟರ್ ಅಯ್ಯಪ್ಪ, ಪ್ರತಿ ದೇವಸ್ಥಾನ ಪಿರಾಮಿಡ್ ಕೇಂದ್ರ ಆಗಬಹುದು ಎಂದರು.
ನಗರದ ಪಾರ್ಕಗಳಲ್ಲಿ ಧ್ಯಾನ ಕೇಂದ್ರಗಳು ಸ್ಥಾಪನೆ ಆಗಬೇಕು,
ಧ್ಯಾನದಿಂದ ಎಲ್ಲವನ್ನೂ ಸಾಧಿಸಬಹುದು ಎಂದರು.
ಮಾಸ್ಟರ್ ಕೇತಪ್ಪ ಅವರು ಮಾತನಾಡಿ, ಶಾಲಾ ಕಾಲೇಜುಗಳಲ್ಲಿ ಧ್ಯಾನ ಕಡ್ಡಾಯ ಆಗಬೇಕು, ದೇಶದ ಎಲ್ಲ ಪಾರ್ಕ್’ಗಳಲ್ಲಿ ಧ್ಯಾನ ಕೇಂದ್ರಗಳು ಸ್ಥಾಪನೆಯಾಗಬೇಕು ಎಂದರು.
ಕಾರ್ಯಕ್ರಮ ಆಯೋಜಿಸಿದ್ದ ಸುಮಾ ರೆಡ್ಡಿ ಸ್ವಾಗತಿಸಿ, ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು