1:06 PM Thursday9 - January 2025
ಬ್ರೇಕಿಂಗ್ ನ್ಯೂಸ್
ನಂಜನಗೂಡು: ಶಿವಶರಣ ಒಕ್ಕಲಿಗರ ಮುದ್ದಣನವರ ಪ್ರಪ್ರಥಮ ಜಯಂತಿ ಆಚರಣೆ ಬಳ್ಳಾರಿ: ಎಲ್ಲ ರೈಲುಗಳ ಆರಂಭಕ್ಕಾಗಿ ರಾಜ್ಯ ರೈಲ್ವೆ ಕ್ರಿಯಾ ಸಮಿತಿಯಿಂದ ಒಂದು ತಿಂಗಳ… ಎಂಎಸ್‌ ಐಎಲ್‌ ಟೂರ್‌ ಪ್ಯಾಕೇಜ್‌ ಗೆ ಸಚಿವ ಎಂ. ಬಿ. ಪಾಟೀಲ್ ಚಾಲನೆ ಜ.10-12: ಸೌತ್ ಏಷ್ಯಾ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್-2025; ದೇಶ – ವಿದೇಶದ 2… ದೇಶದ ವೈವಿಧ್ಯತೆ, ಸೌಹಾರ್ದತೆ ಉಳಿಸಿಕೊಳ್ಳುವ ಮೂಲಕ ಆಂತರಿಕವಾಗಿ ಸಶಕ್ತವಾಗಬೇಕಿದೆ: ಧರ್ಮಸ್ಥಳದಲ್ಲಿ ಉಪ ರಾಷ್ಟ್ರಪತಿ… 60% ಕಮೀಷನ್; ನಿಮ್ಮ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಸಿಎಂಗೆ ಕೇಂದ್ರ ಸಚಿವ… ಇದು 60 ಪರ್ಸೆಂಟ್‌ ಕಮಿಷನ್‌ ಸರ್ಕಾರ, ಗುತ್ತಿಗೆದಾರರಿಗೆ ನೀಡಲು ಹಣವಿಲ್ಲ: ಪ್ರತಿಪಕ್ಷ ನಾಯಕ… ಹಣ ಕೈಯಲ್ಲಿದ್ದರೂ ಸ್ಕಾಲರ್ ಶಿಪ್ ವಿತರಣೆಯಲ್ಲಿ ನಿರ್ಲಕ್ಷ್ಯ: ಅಧಿಕಾರಿಗಳ ಚಳಿ ಬಿಡಿಸಿದ ಸಿಎಂ… ಅರಣ್ಯ ಒತ್ತುವರಿ, ಕಳ್ಳಬೇಟೆ ತಡೆಗೆ ಗರುಡಾಕ್ಷಿ ಅಸ್ತ್ರ: ಆನ್ಲೈನ್ ಎಫ್ಐಆರ್ ವ್ಯವಸ್ಥೆಗೆ ಚಾಲನೆ ರಾಜ್ಯದಲ್ಲಿ ಎಚ್ ಎಂಪಿವಿ ಸೋಂಕು: ಜನರಲ್ಲಿ ಆತಂಕ ಬೇಡ, ಎಚ್ಚರ ಇರಲಿ; ಆರೋಗ್ಯ…

ಇತ್ತೀಚಿನ ಸುದ್ದಿ

ಆರ್. ಅಶೋಕ್‌ ಸಾರಿಗೆ ಸಚಿವರಾಗಿದ್ದಾಗ 7 ಬಾರಿ ಕೆಎಸ್ಸಾರ್ಟಿಸಿ ದರ ಏರಿಸಿದ್ದರು: ಸಚಿವ ರಾಮಲಿಂಗಾ ರೆಡ್ಡಿ

08/01/2025, 10:44

ಬೆಂಗಳೂರು(reporterkarnataka.com): ಪ್ರತಿಪಕ್ಷದ ನಾಯಕ ಆರ್‌. ಅಶೋಕ್‌ ಅವರು ಸಾರಿಗೆ ಸಚಿವರಾಗಿದ್ದಾಗ 7 ಬಾರಿ ಕೆಎಸ್ಸಾರ್ಟಿಸಿ ಬಸ್ ದರ ಏರಿಸಿದ್ದರು. ಈಗ ಅವರೇ ಗುಲಾಬಿ ಕೊಟ್ಟು ನಾಟಕವಾಡುತ್ತಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಟೀಕಿಸಿದ್ದಾರೆ.
ಸಾರಿಗೆ ಸಚಿವರು ತನ್ನ ಎಕ್ಸ್ ಖಾತೆಯಲ್ಲಿ ಆರ್. ಅಶೋಕ್ ನಡೆಯ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಆರ್. ಅಶೋಕ್ ಸವರು 2008ರಿಂದ 2013ರ ವರೆಗೆ ಸಾರಿಗೆ ಸಚಿವರಾಗಿದ್ದಾಗ ಒಟ್ಟು 7 ಬಾರಿ ಸಾರಿಗೆ ಬಸ್‌ ಟಿಕೇಟ್‌ ದರವನ್ನು ಹೆಚ್ಚಳ ಮಾಡಿದ್ದರು. ಇಂದು ಅವರೇ ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಜನರಿಗೆ ಗುಲಾಬಿ ಕೊಟ್ಟು ನಮ್ಮ ಪರವಾಗಿ ಕ್ಷಮೆ ಕೇಳುವ ನಾಟಕ ಮಾಡುತ್ತಿದ್ದಾರೆ ಎಂದು ರಾಮಲಿಂಗಾ ರೆಡ್ಡಿ ಎಕ್ಸ್ ಖಾತೆಯಲ್ಲಿ ಬರೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು