6:31 PM Thursday9 - January 2025
ಬ್ರೇಕಿಂಗ್ ನ್ಯೂಸ್
ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪನೆ, ರಾಹುಲ್ ಗಾಂಧಿ ಕೊಟ್ಟಿದ್ದ ಭರವಸೆ ಸಾಕಾರ: ಸಚಿವ… ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಿ: ಮುಖ್ಯಮಂತ್ರಿ ಸೂಚನೆ ದೇಸಿ ತಿನಿಸಿನ ಬೇಡಿಕೆ ಹೆಚ್ಚಸಲು ಕ್ರಮ: ಸಚಿವ ಎನ್. ಚಲುವರಾಯಸ್ವಾಮಿ ನಂಜನಗೂಡು: ಶಿವಶರಣ ಒಕ್ಕಲಿಗರ ಮುದ್ದಣನವರ ಪ್ರಪ್ರಥಮ ಜಯಂತಿ ಆಚರಣೆ ಬಳ್ಳಾರಿ: ಎಲ್ಲ ರೈಲುಗಳ ಆರಂಭಕ್ಕಾಗಿ ರಾಜ್ಯ ರೈಲ್ವೆ ಕ್ರಿಯಾ ಸಮಿತಿಯಿಂದ ಒಂದು ತಿಂಗಳ… ಎಂಎಸ್‌ ಐಎಲ್‌ ಟೂರ್‌ ಪ್ಯಾಕೇಜ್‌ ಗೆ ಸಚಿವ ಎಂ. ಬಿ. ಪಾಟೀಲ್ ಚಾಲನೆ ಜ.10-12: ಸೌತ್ ಏಷ್ಯಾ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್-2025; ದೇಶ – ವಿದೇಶದ 2… ದೇಶದ ವೈವಿಧ್ಯತೆ, ಸೌಹಾರ್ದತೆ ಉಳಿಸಿಕೊಳ್ಳುವ ಮೂಲಕ ಆಂತರಿಕವಾಗಿ ಸಶಕ್ತವಾಗಬೇಕಿದೆ: ಧರ್ಮಸ್ಥಳದಲ್ಲಿ ಉಪ ರಾಷ್ಟ್ರಪತಿ… 60% ಕಮೀಷನ್; ನಿಮ್ಮ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಸಿಎಂಗೆ ಕೇಂದ್ರ ಸಚಿವ… ಇದು 60 ಪರ್ಸೆಂಟ್‌ ಕಮಿಷನ್‌ ಸರ್ಕಾರ, ಗುತ್ತಿಗೆದಾರರಿಗೆ ನೀಡಲು ಹಣವಿಲ್ಲ: ಪ್ರತಿಪಕ್ಷ ನಾಯಕ…

ಇತ್ತೀಚಿನ ಸುದ್ದಿ

ಡಿಸಿಎಂ ಡಿ.ಕೆ. ಶಿವಕುಮಾರ್ ಸಹನೆ ಕಟ್ಟೆ ಒಡೆಯುವ ಕಾಲ ಸನ್ನಿಹಿತವಾಗಿದೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

08/01/2025, 16:09

*ಸಿಎಂ ಭ್ರಷ್ಟಾಚಾರ ನಿಯಂತ್ರಿಸಲು ಮುಂದಾದರೆ ಕುರ್ಚಿಗೆ ಕಂಟಕವಾಗುವ ಆತಂಕ:ಬಸವರಾಜ ಬೊಮ್ಮಾಯಿ*

ಬೆಂಗಳೂರು(reporterkarnataka.com): ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಅಭದ್ರತೆ, ಒಳ ಬೇಗುದಿ ಇದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಹನೆಯ ಕಟ್ಟೆ ಯಾವಾಗ ಒಡೆಯುತ್ತದೆ ಎನ್ನುವುದು ಪ್ರಶ್ನೆಯಾಗಿದ್ದು, ಕಾಲ ಸನ್ನಿಹಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಅಭದ್ರತೆ. ಒಳ ಬೇಗುದಿ ಆರಂಭದಿಂದಲೂ ಇದೆ, ಇದು ನಿರೀಕ್ಷಿತ ಬೆಳವಣಿಗೆ ಇದರಲ್ಲಿ ಬಹಳ ಮುಖ್ಯ ವಿಚಾರ ಡಿ.ಕೆ.vಶಿವಕುಮಾರ್ ಅವರ ಸಹನೆ ಅವರು ತಮ್ಮ ವ್ಯಕ್ತಿತ್ವಕ್ಕೆ ವಿರುದ್ಧವಾಗಿ ಬಹಳ ಸಹನೆ ಪ್ರದರ್ಶನ ಮಾಡುತ್ತಿದ್ದಾರೆ. ಅದು ಅವರ ಮುತ್ಸದ್ಧಿತನವೋ? ಹೈಕಮಾಂಡ್ ಸೂಚನೆಯೋ ನೋಡಬೇಕು. ಡಿಕೆಶಿವಕುಮಾರ್ ಅವರ ಸಹನೆ ಕಟ್ಟೆ ಯಾವಾಗ ಒಡೆಯುತ್ತದೆ ಅನ್ನುವುದು ಮುಖ್ಯವಾಗುತ್ತದೆ‌. ಪ್ರಕ್ರಿಯೆ ಆರಂಭವಾಗಿದ್ದು, ಕಾಲ ಯಾವಾಗ ಬರುತ್ತದೆ ಎಂದು ನೋಡಬೇಕು ಎಂದು ಹೇಳಿದರು.
ಕಾಂಗ್ರೆಸ್ ಮೇಲಿನ ಕಮೀಷನ್ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಸರ್ಕಾರ ಎಲ್ಲದರಲ್ಲಿ ಕಮೀಷನ್, ಭ್ರಷ್ಟಾಚಾರ ನಡೆಸುತ್ತಿದೆ. ಇದರಿಂದ ಜನ ಹೈರಾಣಾಗಿದ್ದಾರೆ. ಅಬಕಾರಿ ಗುತ್ತಿಗೆದಾರರು, ಪಿಡಬ್ಲ್ಯುಡಿ, ನೀರಾವರಿ ಇಲಾಖೆಯ ಗುತ್ತಿಗೆದಾರರು ಅನುಭವಿಸುತ್ತಿದ್ದಾರೆ. ಜನ ಸಾಮಾನ್ಯರು ರೋಸಿ ಹೋಗಿದ್ದಾರೆ. ಮಧ್ಯಮ ವರ್ಗದವರು ಹೈರಾಣಾಗಿದ್ದಾರೆ. ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಒಂದು ಸೈಟ್ ತೆಗೆದುಕೊಳ್ಳಲಾಗದ ವಾತಾವರಣವನ್ನು ಸರ್ಕಾರ ನಿರ್ಮಾಣ ಮಾಡಿದೆ. ಎಸ್‌ಸಿ, ಎಸ್ಟಿ ಬೋರ್ ವೆಲ್ ಗಳಿಗೂ ಕಮೀಷನ್ ಪಡೆಯುತ್ತಿದ್ದಾರೆ. ಭ್ರಷ್ಟಾಚಾರ ಪದೇ ಪದೇ ಮುನ್ನೆಲೆಗೆ ಬರುತ್ತಿದೆ. ಇದನ್ನು ಸಿಎಂ ನಿರಾಕರಿಸಿರಬಹುದು, ಅವರಿಗೆ ಹಿಡಿತ ಕೈ ತಪ್ಪಿರಬಹುದು, ಅವರೇ ಭಾಗಿಯಾಗಿರಬಹುದು ಅಥವಾ ಅದರ ಬಗ್ಗೆ ಮಾತನಾಡಿದರೆ ಅಧಿಕಾರಕ್ಕೆ ಧಕ್ಕೆ ಬರುತ್ತದೆ ಎನ್ನುವ ಭಾವನೆ ಮೂಡಿದೆ. ಸರ್ಕಾರದಲ್ಲಿ ಒಂದೊಂದು ಇಲಾಖೆಯಲ್ಲಿ ಒಂದೊಂದು ರೀತಿಯ ಪರ್ಸೆಂಟ್ ಕಮೀಷನ್ ಇದೆ. ಇಷ್ಟೇ ಇದೆ ಅಂತ ಹೇಳಲು ಆಗುವುದಿಲ್ಲ. ಆದರೆ, ಕುಮಾರಸ್ವಾಮಿಯವರು ಹೇಳಿರುವುದು ಭ್ರಷ್ಟಾಚಾರ ಮಿತಿಮೀರಿದೆ ಎಂದು ಹೇಳಿದರು.
ಕಾಂಗ್ರೆಸ್ ನಲ್ಲಿ ಡಿನ್ನರ್ ಮೀಟಿಂಗ್ ಗಳು ಅವರ ಆಂತರಿಕ ವಿಚಾರ, ಈ ಬಗ್ಗೆ ಹೆಚ್ಚು ವಿಶ್ಲೇಷಣೆ ಮಾಡುವುದಿಲ್ಲ. ಆದರೆ, ಆಡಳಿತ ಯಂತ್ರ ಕುಸಿದಿದೆ. ಇದರಿಂದ ಸಾಮಾನ್ಯ ಜನರು ತೊಂದರೆ ಅನುಭವಿಸುವಂತಾಗಿದೆ. ತಾಯಂದಿರು ಸಾಯುತ್ತಿದ್ದಾರೆ. ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಸರಿಯಾಗಿ ದೊರೆಯುತ್ತಿಲ್ಲ. ಅಂಗನಾವಡಿ ಕಾರ್ಯಕರ್ತರು ಸರಿಯಾಗಿ ಗೌರವಧನ ಪಡೆಯುತ್ತಿಲ್ಲ. ನಾವು ಪ್ರತಿಪಕ್ಷವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತೇವೆ ಎಂದು ಅವರು ನುಡಿದರು.
ಕಾಂಗ್ರೆಸ್ ದೆಹಲಿಯಲ್ಲಿ ಮಹಿಳೆಯರಿಗೆ ಪ್ಯಾರಿ ದೀದಿ ಯೋಜನೆ ಘೋಷಣೆ ಮಾಡಿರುವುದರಿಂದ ಅಲ್ಲಿನ ಜನರು ನಂಬುವುದಿಲ್ಲ. ಈಗಾಗಲೇ ಗ್ಯಾರೆಂಟಿ ಹೆಸರಿನಲ್ಲಿ ಹಿಮಾಚಲ ಪ್ರದೇಶ, ತೆಲಂಗಾಣ, ಕರ್ನಾಟಕವನ್ನು ದಿವಾಳಿ ಮಾಡಿದ್ದಾರೆ. ಅವರು ಅಧಿಕಾರಕ್ಕೆ ಬಂದರೆ ದೆಹಲಿಯನ್ನೂ ದಿವಾಳಿ ಮಾಡುತ್ತಾರೆ. ಹೀಗಾಗಿ ಜನರು ಕಾಂಗ್ರೆಸನ್ನು ನಂಬುವುದಿಲ್ಲ ಎಂದರು.
*ಗೊಂದಲಕ್ಕೆ ತೆರೆ*
ಬಿಜೆಪಿಯಲ್ಲೂ ಭೋಜನ ಕೂಟ ನಡೆಯುತ್ತಿದಿಯಾ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾವು ಆಗಾಗ ಒಟ್ಟಿಗೆ ಊಟ ಮಾಡುತ್ತೇವೆ. ಅದರಲ್ಲಿ ಮಹತ್ವ ಏನು ಇಲ್ಲ ಎಂದರು.
ರಾಜ್ಯ ಬಿಜೆಪಿಯಲ್ಲಿನ ಗೊಂದಲಗಳ ಬಗ್ಗೆ ಪಕ್ಷದ ಹೈಕಮಾಂಡ್ ಗಮನ ಹರಿಸಿದೆ. ಈ ತಿಂಗಳಲ್ಲಿ ಸರಿ ಹೋಗಲಿದೆ. ಒಳ್ಳೆಯ ರೀತಿಯಲ್ಲಿ ಎಲ್ಲವೂ ಬಗೆಹರಿಯುವ ವಾತಾವರಣವನ್ನು ಹೈಕಮಾಂಡ್ ತೀರ್ಮಾನಿಸಲಿದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು