7:00 AM Friday18 - April 2025
ಬ್ರೇಕಿಂಗ್ ನ್ಯೂಸ್
Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ…

ಇತ್ತೀಚಿನ ಸುದ್ದಿ

ರಾಜ್ಯದ ಹೆದ್ದಾರಿ ಯೋಜನೆಗಳು: ಗಡ್ಕರಿ ಭೇಟಿಯಾದ ಕುಮಾರಸ್ವಾಮಿ; ಮಂಡ್ಯ ಹೊರ ವರ್ತುಲ ರಸ್ತೆ ಬಗ್ಗೆಯೂ ಚರ್ಚೆ

08/01/2025, 22:44

*ಮಂಡ್ಯ ಹೊರ ವರ್ತುಲ ರಸ್ತೆ ಯೋಜನೆ, ಬೈಪಾಸ್ ಅಭಿವೃದ್ಧಿ ಬಗ್ಗೆ ಮನವಿ*

*ಹೆಚ್ಡಿಕೆ ಮನವಿಗೆ ಖುದ್ದು ಗಮನ ಹರಿಸುವುದಾಗಿ ಭರವಸೆ ನೀಡಿದ ಗಡ್ಕರಿ*

ನವದೆಹಲಿ(reporterkarnataka.com): ರಾಜ್ಯದ ವಿವಿಧ ಹೆದ್ದಾರಿ ಯೋಜನೆಗಳ ಬಗ್ಗೆ ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಖಾತೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಹಲವಾರು ಮನವಿಗಳನ್ನು ಸಲ್ಲಿಸಿ ಆದಷ್ಟು ಬೇಗ ಕ್ರಮ ವಹಿಸುವಂತೆ ಕೋರಿದರು.
ನವದೆಹಲಿಯಲ್ಲಿ ಬುಧವಾರ ಬೆಳಗ್ಗೆ ನಿತಿನ್ ಗಡ್ಕರಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದ ಕುಮಾರಸ್ವಾಮಿ ಅವರು, ರಾಜ್ಯದಲ್ಲಿ ಹಲವಾರು ಹೆದ್ದಾರಿ ಯೋಜನೆಗಳ ಅಭಿವೃದ್ಧಿ ಆಗಬೇಕಿದ್ದು, ಆ ಬಗ್ಗೆ ಕ್ರಮ ವಹಿಸಬೇಕು ಎಂದು ಹತ್ತಕ್ಕೂ ಹೆಚ್ಚು ಯೋಜನೆಗಳ ಮನವಿ ಪತ್ರಗಳನ್ನು ಸಲ್ಲಿಸಿದರು. ಈ ಪೈಕಿ ಕೆಲ ಯೋಜನೆಗಳ ಬಗ್ಗೆ ತಕ್ಷಣವೇ ಖುದ್ದಾಗಿ ಗಮನ ಹರಿಸುವುದಾಗಿ ಗಡ್ಕರಿ ಅವರು ಭರವಸೆ ನೀಡಿದರು.
ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮೈಸೂರು ಮುಂತಾದ ಜಿಲ್ಲೆಗಳ ಹೆದ್ದಾರಿಗಳ ಅಭಿವೃದ್ಧಿ ಬಗ್ಗೆ ಸಾರಿಗೆ ಸಚಿವರ ಜತೆ ಕುಮಾರಸ್ವಾಮಿ ಅವರು ಸಮಾಲೋಚನೆ ನಡೆಸಿದರು.
ನಮ್ಮ ಮನವಿಗೆ ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ ಮಾನ್ಯ ಸಾರಿಗೆ ಸಚಿವರು; ಎಲ್ಲಾ ಯೋಜನೆಗಳ ಬಗ್ಗೆ ಖುದ್ದು ಗಮನ ಹರಿಸುವುದಾಗಿ ಗಡ್ಕರಿ ಅವರು ಭರವಸೆ ನೀಡಿದರು ಎಂಬುದಾಗಿ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
*ಮಂಡ್ಯದ ಹೊರ ವರ್ತುಲ ರಸ್ತೆ:* ಮಂಡ್ಯ ಹೆದ್ದಾರಿಯ ಬೈಪಾಸ್ ರಸ್ತೆ ಅಗಲೀಕರಣ ಮಾಡುವುದು, ಅದರ ವೈಟ್ ಟ್ಯಾಪಿಂಗ್ ಹಾಗೂ NH-275ರಲ್ಲಿರುವ ಮಂಡ್ಯ ನಗರದ ಎಲ್ಲಾ ಜಂಕ್ಷನ್ ಗಳು, ಪಾದಚಾರಿ ಮಾರ್ಗಗಳನ್ನೂ ಅಭಿವೃದ್ಧಿ ಮಾಡಬೇಕು ಎಂದು ಕುಮಾರಸ್ವಾಮಿ ಅವರು ಕೋರಿದರು.
ಮಂಡ್ಯ ಹೆದ್ದಾರಿಯ ಬೈಪಾಸ್ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು, ಹಳ್ಳದಿಣ್ಣೆ ಬಿದ್ದು ವಾಹನ ಸವಾರರಿಗೆ ಬಹಳಷ್ಟು ತೊಂದರೆ ಆಗಿದೆ. ರಾತ್ರಿ ಸಮಯದಲ್ಲಿ ಈ ರಸ್ತೆಯಲ್ಲಿ ಸಂಚಾರ ಮಾಡುವುದು ಅಪಾಯಕಾರಿ ಆಗಿದೆ ಎಂದು ಎಂದು ಗಡ್ಕರಿ ಅವರಿಗೆ ಕುಮಾರಸ್ವಾಮಿ ಅವರು ಮನವರಿಕೆ ಮಾಡಿಕೊಟ್ಟರು.
ಜೇವರ್ಗಿ- ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿ (NH-150A)ಯಲ್ಲಿನ ಪಾಂಡವಪುರ ಪಟ್ಟಣ, ಕಿರಂಗೂರು ಬಳಿಯ ಹೆದ್ದಾರಿ ಅಭಿವೃದ್ಧಿ ಮಾಡುವ ಬಗ್ಗೆಯೂ ಸಚಿವರು ಗಡ್ಕರಿ ಅವರೊಂದಿಗೆ ಚರ್ಚೆ ನಡೆಸಿದರು.

ಆಂಧ್ರ ಪ್ರದೇಶದ ಕುಪ್ಪಂ- ಬಂಗಾರಪೇಟೆ- ಕೋಲಾರ -ಚಿಂತಾಮಣಿ; ಚಿಂತಾಮಣಿಯ ಗಜಾನನ ಸರ್ಕಲ್- ಚೇಳೂರು; ರಾಷ್ಟ್ರೀಯ ಹೆದ್ದಾರಿ NH-75ರಿಂದ ಹೊಸಕೋಟೆ -ಹೆಚ್.ಕ್ರಾಸ್- ಚಿಂತಾಮಣಿ ನಡುವೆ ಸಂಪರ್ಕ ಕಲ್ಪಿಸುವ NH-69, NH-42ರಿಂದ ಹೊಸಕೋಟೆ -ಗೌನಿಪಲ್ಲಿ – ಶ್ರೀನಿವಾಸಪುರ ಮೂಲಕ NH-75ಕ್ಕೆ ಸಂಪರ್ಕ ಕಲ್ಪಿಸುವ ಹೆದ್ದಾರಿ ಯೋಜನೆಗಳ ಬಗ್ಗೆಯೂ ಸಚಿವರು ಸಾರಿಗೆ ಸಚಿವರ ಗಮನ ಸೆಳೆದರು.

ಇತ್ತೀಚಿನ ಸುದ್ದಿ

ಜಾಹೀರಾತು