3:31 AM Wednesday17 - December 2025
ಬ್ರೇಕಿಂಗ್ ನ್ಯೂಸ್
ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಿ: ಮುಖ್ಯಮಂತ್ರಿ ಸೂಚನೆ

09/01/2025, 17:12

ಬೆಂಗಳೂರು(reporterkarnataka.com): ರಾಜೀವ್‌ ಗಾಂಧಿ ವೈದ್ಯಕೀಯ ವಿವಿಯಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗಿರುವ ಮೊತ್ತವನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳ ಮೂಲಸೌಲಭ್ಯಗಳಿಗಾಗಿ ಒದಗಿಸಲು ಮತ್ತು ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಲು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು.

ಕೃಷ್ಣಾದಲ್ಲಿ ನಡೆದ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಈ ಸೂಚನೆ ನೀಡಿದರು.
ಪ್ರಸ್ತುತ ಸಾಲಿನಲ್ಲಿ ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗೆ ರೂ.400 ಕೋಟಿ ಹಾಗೂ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕಾಗಿ ರೂ.130 ಕೋಟಿ ಅನುದಾನ ಒದಗಿಸಲಾಗಿದೆ. ಈ ಕಾಮಗಾರಿಗಳನ್ನು ಆದಷ್ಟು ಬೇಗನೆ ಪೂರ್ಣಗೊಳಿಸಲು ಸೂಚಿಸಿದರು.
2024-25ನೇ ಸಾಲಿನಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ರೂ.4331 ಕೋಟಿ ಅನುದಾನ ಹಂಚಿಕೆ ಮಾಡಲಾಗಿದ್ದು, ಇದುವರೆಗೆ ರೂ.3099 ಕೋಟಿ ಅನುದಾನ ಬಿಡುಗಡೆಯಾಗಿದೆ. ಇದರಲ್ಲಿ ರೂ.3005 ಕೋಟಿ ವೆಚ್ಚ ಮಾಡಲಾಗಿದ್ದು, ಬಿಡುಗಡೆ ಮೊತ್ತಕ್ಕೆ ಶೇ. 96.97 ಪ್ರಗತಿ ಸಾಧಿಸಲಾಗಿದೆ ಎಂದು ಸಚಿವರು ವಿವರಿಸಿದರು.
*ಸಭೆಯ ಮುಖ್ಯಾಂಶಗಳು…*

•2023-24 ಸಾಲಿನಲ್ಲಿ ಅನುಮೋದನೆಗೊಂಡು, ಎಲ್ಲಾ ಕಾಮಗಾರಿಗಳನ್ನು ನಿಗದಿತ ಸಮಯದ ಒಳಗಾಗಿ ಪೂರ್ಣಗೊಳಿಸಬೇಕು.

•ಗದಗ, ಕೊಪ್ಪಳ, ಕಾರವಾರ,ಕೊಡಗು ಜಿಲ್ಲೆಗಳಲ್ಲಿ ನಿರ್ಮಾಣ ಹಂತದಲ್ಲಿರುವ 450 ಹಾಸಿಗೆ ಆಸ್ಪತ್ರೆಗಳ ನಿರ್ಮಾಣವನ್ನು ತ್ವರಿತವಾಗಿ ಪೂರ್ಣಗೊಳಿಸಲು ಸೂಚನೆ.

•ರಾಜೀವ್‌ ಗಾಂಧಿ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗಿರುವ ಮೊತ್ತವನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳ ಮೂಲಸೌಲಭ್ಯಗಳಿಗಾಗಿ ಒದಗಿಸುವ ಕುರಿತು ಕ್ರಮ ಕೈಗೊಳ್ಳಬೇಕು.

•ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಬೇಕು.

•ಕ್ಯಾನ್ಸರ್‌ ಪ್ರಮಾಣ ಹೆಚ್ಚಳವಾಗಲು ಕಾರಣ ಕುರಿತು ಅಧ್ಯಯನ ನಡೆಸಿ ವರದಿ ಸಲ್ಲಿಸಬೇಕು. ಕ್ಯಾನ್ಸರ್‌ ಚಿಕಿತ್ಸೆಗೆ ಅಂತಾರಾಷ್ಟ್ರೀಯ ಗುಣಮಟ್ಟದ ಚಿಕಿತ್ಸೆ ರಾಜ್ಯದಲ್ಲಿಯೇ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು