4:07 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ವಿದ್ವತ್ ಟ್ರೋಫಿ 2025: ಬೆಳ್ತಂಗಡಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

10/01/2025, 13:26

ಬೆಳ್ತಂಗಡಿ(reporterkarnataka.com): ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜ್ ನೇತೃತ್ವದಲ್ಲಿ ಬೆಳ್ತಂಗಡಿ ವಾಲಿಬಾಲ್ ಅಸೋಸಿಯೇಷನ್ ಸಹಭಾಗಿತ್ವ ಮತ್ತು ಲಯನ್ಸ್ ಕ್ಲಬ್ ಬೆಳ್ತಂಗಡಿ ಇವರ ಸಹಯೋಗದೊಂದಿಗೆ ತಾಲೂಕು ಮಟ್ಟದ ಪುರುಷರ ಮತ್ತು ಆಹ್ವಾನಿತ ಮಹಿಳೆಯರ ತಂಡಗಳ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟವನ್ನು ವಿದ್ವತ್ ಪಿ ಯು ಕಾಲೇಜಿನ ಕ್ರೀಡಾಂಗಣದಲ್ಲಿ ನೆರವೇರಿತು.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ 4 ಆಹ್ವಾನಿತ ಮಹಿಳಾ ತಂಡಗಳಲ್ಲಿ ಉಜಿರೆಯ ಎಸ್ ಡಿಎಂ ತಂಡವು ಪ್ರಥಮ ಸ್ಥಾನವನ್ನು ಮುಡಿಗೇರಿಸಿ ಕೊಂಡರೆ, ಉರ್ವಾಸ್ಟೋರ್
ಮಂಗಳ ಸ್ಪೋರ್ಟ್ಸ್ ಕ್ಲಬ್ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು.
ಪುರುಷರ ವಿಭಾಗದಲ್ಲಿ ತಾಲೂಕಿನ 22 ತಂಡಗಳು ಭಾಗವಹಿಸಿ, ಫ್ರೆಂಡ್ಸ್ ಉಜಿರೆ ಎ ತಂಡ ಪ್ರಥಮ ಸ್ಥಾನ ಗಿಟ್ಟಿಸಿಕೊಂಡರೆ, ದ್ವಿತೀಯ ಆರ್ ಜೆ ಫ್ರೆಂಡ್ಸ್ , ತೃತೀಯ ಭಜರಂಗಿ ಬಾಯ್ಸ್ ಬಿ ತಂಡ ಹಾಗೂ ಫ್ರೆಂಡ್ಸ್ ಉಜಿರೆ ಬಿ ತಂಡ ಚತುರ್ಥ ಸ್ಥಾನವನ್ನು ಪಡೆದುಕೊಂಡಿತು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿದ್ವತ್ ಎಜುಕೇಶನ್ ಫೌಂಡೇಶನ್ ನ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ ಅವರು ಮಾತನಾಡಿ, ವಿದ್ಯಾರ್ಜನೆಯ ಜೊತೆಗೆ ಕ್ರೀಡೆ ಮಕ್ಕಳಲ್ಲಿ ಹುರುಪನ್ನು ತುಂಬುವುದು ಮತ್ತು ಮಕ್ಕಳು ದೈಹಿಕವಾಗಿ ಮಾನಸಿಕವಾಗಿ ಪ್ರಬುದ್ಧರಾಗಲು ಬಹಳಷ್ಟು ಸಹಕಾರಿಯಾಗುತ್ತದೆ. ಮಕ್ಕಳು ಕ್ರೀಡಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಸಾಮಾನ್ಯವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಒತ್ತು ಕೊಡುವ ವಿದ್ಯಾಸಂಸ್ಥೆಗಳಲ್ಲಿ ಮಕ್ಕಳಿಗೆ ಯಾವುದೇ ಕ್ರೀಡೆ ಗಳಿಗೆ ಅವಕಾಶವಿರುವುದಿಲ್ಲ. ಆದರೆ ವಿದ್ವತ್ ಪಿ ಯು ಕಾಲೇಜಿನ ವಿಶಿಷ್ಟ ಶಿಕ್ಷಣ ವ್ಯವಸ್ಥೆಯಲ್ಲಿ ಮಕ್ಕಳಿಗೆ ವ್ಯವಸ್ಥಿತ ಶಿಕ್ಷಣದೊಂದಿಗೆ, ಕ್ರೀಡೆಗೂ ಅವಕಾಶ ಕಲ್ಪಿಸಲಾಗಿದೆ. ಇದರಿಂದ ಮಕ್ಕಳು ದೈಹಿಕವಾಗಿಯೂ ಮಾನಸಿಕವಾಗಿಯೂ ಸಧೃಡರಾಗುತ್ತಾರೆ ಎಂದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಭಾರತಿ ಅವರು ಮಾತನಾಡಿ, ವಿದ್ವತ್ ಸಂಸ್ಥೆಯ ಕಾರ್ಯ ವೈಖರಿಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿ ಈ ವಿದ್ಯಾ ಸಂಸ್ಥೆಯು ಇನ್ನಷ್ಟು ಎತ್ತರಕ್ಕೆ ಬೆಳೆದು ಮಾದರಿ ವಿದ್ಯಾಸಂಸ್ಥೆಯಾಗಿ ಹೊರಹೊಮ್ಮಲಿ ಎಂದು ಹಾರೈಸಿದರು.
ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ಅಧ್ಯಕ್ಷರಾದ ದೇವದಾಸ್ ಶೆಟ್ಟಿ ಯವರು ಮಾತನಾಡಿ ವಿದ್ಯಾಭ್ಯಾಸದ ಜೊತೆಗೆ ಕ್ರೀಡೆ ಮಕ್ಕಳ ಆರೋಗ್ಯವನ್ನೂ ಕಾಪಾಡುತ್ತದೆ ಅದೇ ರೀತಿ ಬುದ್ಧಿಮತ್ತೆಯನ್ನು ಹೆಚ್ಚಿಸುತ್ತದೆ. ವಿದ್ವತ್ ಪಿ ಯು ಕಾಲೇಜು ಹಾಗೂ ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಸೊಸಿಯೆಷನೊಂದಿಗೆ ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸಹಯೋಗ ತುಂಬಾ ಸಂತಸ ತಂದಿದೆ ಎಂದರು.
ಇನ್ನೋರ್ವ ಮುಖ್ಯ ಅತಿಥಿಯಾಗಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ನಿರ್ದೇಶಕರಾದ ರಾಜಶೇಖರ್ ಶೆಟ್ಟಿಯವರು ಮಾತನಾಡಿ ಶಿಕ್ಷಣದೊಂದಿಗೆ ಕ್ರೀಡೆಗೆ ಒತ್ತುಕೊಡುವ ವಿದ್ವತ್ ಕಾಲೇಜಿನನಂಥ ಶಿಕ್ಷಣ ಸಂಸ್ಥೆಯು ನಮ್ಮ ಗ್ರಾಮೀಣ ಪ್ರದೇಶವಾದ ಗುರುವಾಯನಕೆರೆಯಲ್ಲಿರುವುದು ಮಕ್ಕಳ ಸೌಭಾಗ್ಯ ಎಂದರು. ಓದಿನ ಜೊತೆಗೆ ಮಕ್ಕಳು ಗುರುಹಿರಿಯರೊಂದಿಗೆ ಗೌರವಯುತವಾಗಿ ವರ್ತಿಸಿ, ಉತ್ತಮ ವಿದ್ಯಾರ್ಜನೆಯ ಜೊತೆಗೆ ತಮ್ಮ ಕನಸನ್ನು ನನಸು ಮಾಡಿಕೊಳ್ಳಿ ಎಂಬ ಕಿವಿಮಾತು ಹೇಳಿದರು.
ವಿದ್ವತ್ ಎಜುಕೇಶನ್ ಫೌಂಡೇಶನ್ ನ ಕೋಶಾಧಿಕಾರಿ ಕಾಶೀನಾಥ್. ಕೆ ಪ್ರಾಸ್ತಾವಿಕವಾಗಿ ಮಾತಾನಾಡಿ ಸ್ವಾಗತಿಸಿದರು. ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಅಧ್ಯಕ್ಷರಾದ ಯಶವಂತ್ ಗೌಡ ಬೆಳಾಲು ಧನ್ಯವಾದ ಸಮರ್ಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು