5:58 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಇನ್ನೂ 2 ವಾರ ಕಾಲ ಲಾಕ್ ಡೌನ್ ವಿಸ್ತರಣೆ ಸಾಧ್ಯತೆ: ಈ ಬಾರಿ ಇರುತ್ತಾ ಕಠಿಣ ನಿರ್ಬಂಧ? 

21/05/2021, 18:55

ಬೆಂಗಳೂರು(reporterkarmataka news): ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆಯ ಕುರಿತು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಾಳೆ ನಿರ್ಧಾರ ಕೈಗೊಳ್ಳಲಿದ್ದು, ಈ ನಡುವೆ ಮೇ 24ರ ಬಳಿಕ ಎರಡು ವಾರಗಳ ಕಾಲ ಲಾಕ್ ಡೌನ್ ವಿಸ್ತರಣೆಯಾಗುವ ಸಾಧ್ಯತೆಗಳಿವೆ. ಇದು ಕಠಿಣ ಲಾಕ್ ಡೌನ್ ಆಗಲಿದೆ ಎಂದು ತಿಳಿದು ಬಂದಿದೆ.

ಮುಂದಿನ 15 ದಿನಗಳ ಕಾಲ ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಮಾಡಬೇಕು ಎಂದು ವಿಪತ್ತು ನಿರ್ವಹಣಾ ಅಧಿಕಾರಿಗಳ ತಂಡ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ ಎಂದು ತಿಳಿದು ಬಂದಿದೆ.

ಈ ಮಧ್ಯೆ ಮುಖ್ಯಕಾರ್ಯದರ್ಶಿ ರವಿಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯದಲ್ಲಿನ ಕೊರೊನಾ ಸ್ಥಿತಿಗತಿ, ಲಾಕ್ ಡೌನ್ ವಿಸ್ತರಣೆ ಕುರಿತು ಸುದೀರ್ಘ ಚರ್ಚೆ ನಡೆಸಲಾಗಿದೆ. ಈ ಸಭೆಯಲ್ಲಿ ವಿಪತ್ತು ನಿರ್ವಹಣಾ ಅಧಿಕಾರಿಗಳು ಮುಂದಿನ 2 ವಾರಗಳ ಕಾಲ ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಿಸುವುದು ಒಳಿತು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಿಎಂ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಕಾರ್ಯದರ್ಶಿ ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು