5:01 PM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಜ.14: ಸ್ವರ ಸಂಕ್ರಾಂತಿ ಉತ್ಸವ-2025, ‘ಸ್ವರ ಸಾಧನಾ’ ಪ್ರಶಸ್ತಿ ಪ್ರದಾನ

11/01/2025, 17:54

ಮಂಗಳೂರು(reporterkarnataka.com): ಸ್ವರಾಲಯ ಸಾಧನಾ ಫೌಂಡೇಶನ್‌ ವತಿಯಿಂದ ಸಂಕ್ರಾಂತಿ ಹಬ್ಬದ ಪ್ರಯುಕ್ತ ಸ್ವರ ಸಂಕ್ರಾಂತಿ ಉತ್ಸವ-2025 ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಜ.14ರಂದು ಜರುಗಲಿದೆ.
ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ
ವಯಲನಿಸ್ಟ್ ವಿಶ್ವಾಸ್ ಕೃಷ್ಣ ಈ ಕುರಿತು ಮಾಹಿತಿ ನೀಡಿದರು.
ಮಧ್ಯಾಹ್ನ 2 ಗಂಟೆಯಿಂದ ಕಲಾ ಶಾಲೆ ವಿದ್ಯಾರ್ಥಿಗಳಿಂದ ವಯಲಿನ್ ಪ್ರಸ್ತುತಿ ನಡೆಯಲಿದ್ದು, ಮಧ್ಯಾಹ್ನ 3.30ಕ್ಕೆ ಸಭಾ
ಕಾರ್ಯಕ್ರಮ ಹಾಗೂ ಮೂವರು ಹಿರಿಯ ಸಾಧಕರಿಗೆ ‘ಸ್ವರ ಸಾಧನಾ’ ಪ್ರಶಸ್ತಿ ಪ್ರದಾನ ನಡೆಯಲಿದೆ, ಸಂಜೆ 5 ಗಂಟೆಯಿಂದ
ಕರ್ನಾಟಕ ಶಾಸ್ತ್ರೀಯ ಸಂಗೀತದ ಪ್ರಖ್ಯಾತ ಕಲಾವಿದರಾದ ರಂಜನಿ- ಗಾಯತ್ರಿ ಅವರಿಂದ ವಿಶಿಷ್ಟ ಪರಿಕಲ್ಪನೆಯ `ರಸ ಬೈರಾಗ’ ಸಂಗೀತ ಕಛೇರಿ ನಡೆಯಲಿದೆ. ವಯಲಿನ್ ನಲ್ಲಿ ವಿದ್ವಾನ್ ವಿಠಲ್ ರಂಗಲ್, ಮೃದಂಗದಲ್ಲಿ ವಿದ್ವಾನ್ ಸಾಯಿ ಗಿರಿಧರ್, ಘಟಂನಲ್ಲಿ ವಿದ್ವಾನ್ ಎಸ್.ಕೃಷ್ಣ ಸಹಕರಿಸಲಿದ್ದಾರೆ.
ನಿಡಸೋಸಿ ಶ್ರೀ ದುರದುಂಡೀಶ್ವರ ಮಠದ ಜಗದ್ಗುರು ಶ್ರೀ ನಿಜಲಿಂಗೇಶ್ವರ ಸ್ವಾಮೀಜಿ ಹಾಗೂ ಬಾಳೆಕುದ್ರು ಮಠದ ಶ್ರೀಮದ್‌
ಜಗದ್ಗುರು ಶ್ರೀ ವಾಸುದೇವ ಸದಾಶಿವಾಶ್ರಮ ಮಹಾಸ್ವಾಮಿ ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಶಾಸಕ ವೇದವ್ಯಾಸ್ ಕಾಮತ್, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಹಾಗೂ ಸ್ವರ ರತ್ನ ವಿದ್ವಾನ್ ವಿಶಲ್ ರಾಮಮೂರ್ತಿ ಭಾಗವಹಿಸಲಿದ್ದಾರೆ.
ಪ್ರಸಿದ್ಧ ಮೃದಂಗ ವಾದಕ ವಿದ್ವಾನ್ ನೈಬಿ ಪ್ರಭಾಕರ ಶೃಂಗೇರಿ ಮತ್ತು ಸಂಗೀತ ಕ್ಷೇತ್ರದ ಸಾಧಕಿ ವಿದುಷಿ ಸಾವಿತ್ರಿ ಪ್ರಭಾಕರ್
ದಂಪತಿ, ಭರತನಾಟ್ಯ ಕ್ಷೇತ್ರದ ಸಾಧಕಿ, ಮಂಗಳೂರಿನ ಸನಾತನ ನಾಟ್ಯಾಲಯದ ನೃತ್ಯಗುರು ವಿದುಷಿ ಶಾರದಾ ಮಣಿಶೇಖರ್ ‌
ಹಾಗೂ ಮೃದಂಗದ ಸಾಧಕರಾದ ವಿದ್ವಾನ್ ಕುಂಜೂರು ಎಚ್.ರವಿಕುಮಾರ್ ಅವರಿಗೆ ಸ್ವರ ಸಾಧನಾ ಪ್ರಶಸ್ತಿ ಪ್ರದಾನ
ಕಾರ್ಯಕ್ರಮ ನಡೆಯಲಿದೆ.
ಸಂಗೀತ ಪ್ರೇಮಿಗಳು ಪ್ರವೇಶ ಪತ್ರದ ಮೂಲಕ ಉಚಿತವಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ಪ್ರವೇಶ ಪತ್ರವನ್ನು ಪತ್ತುಮುಡಿ ಹೋಟೆಲ್ ಜನತಾ ಡಿಲಕ್ಸ್ ಸಮೀಪದ ತಕ್ವಿಲಾ ಕಟ್ಟಡದ ಮೊದಲ ಮಹಡಿಯಲ್ಲಿರುವ ಎ1 ಲಾಜಿಕ್ಸ್ ಸಂಸ್ಥೆಯ ಕಚೇರಿಯಿಂದ ಪಡೆಯಬಹುದಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಶ್ರೀಕೃಷ್ಣ ನೀರಮೂಲೆ, ರಮೇಶ್, ಶ್ರೇಷ್ಠ ಲಕ್ಷ್ಮಿ, ಡಾ.ಸುಮಾ ಕಾಮತ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು