8:52 PM Sunday5 - October 2025
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು

ಇತ್ತೀಚಿನ ಸುದ್ದಿ

ನಂಜನಗೂಡು: ವೈಕುಂಠ ಏಕಾದಶಿ ಪ್ರಯುಕ್ತ ಶ್ರೀ ವೆಂಕಟೇಶ್ವರ ವೈಕುಂಠ ವೈಭವ

11/01/2025, 23:00

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕು ಹುಲ್ಲಹಳ್ಳಿ ಪಟ್ಟಣದ ಶ್ರೀ ಮಹದೇವ ತಾತ ಬಡಾವಣೆಯಲ್ಲಿರುವ ಶ್ರೀ ಅಲ ಮೇಲು ಮಂಗಮ್ಮ ಸಮೇತ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಇಂದು ವೈಕುಂಠ ಏಕಾದಶಿ ಪ್ರಯುಕ್ತ ಶ್ರೀ ವೆಂಕಟೇಶ್ವರ ಸ್ವಾಮಿ ವೈಕುಂಠ ವೈಭವ ಕಾರ್ಯಕ್ರಮವು ಸಡಗರ ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿಂದ ನಡೆಯಿತು.
ನಿನ್ನೆಯಿಂದಲೇ ದೇವಾಲಯದಲ್ಲಿ ಹೋಮ ಹವನಗಳು ನಡೆದು ಶುಕ್ರವಾರ ಬೆಳಿಗ್ಗೆಯಿಂದಲೇ ಶ್ರೀ ಅಲಮೇಲು ಮಂಗಮ್ಮ ಹಾಗೂ ಶ್ರೀ ವೆಂಕಟೇಶ್ವರ ಸ್ವಾಮಿ ಅವರಿಗೆ ವಿಶೇಷ ಅಲಂಕಾರ ಮಾಡಿ ಪೂಜೆ ನಡೆಸಲಾಯಿತು.
ದೇವಾಲಯಕ್ಕೆ ಹುಲ್ಲಹಳ್ಳಿ ಹಾಗೂ ಸುತ್ತಮುತ್ತಲಿನ ಸಾವಿರಾರು ಭಕ್ತರು ಆಗಮಿಸಿ, ದೇವರ ದರ್ಶನ ಪಡೆದು ತಮ್ಮ ಭಕ್ತಿ ಭಾವ ಮೆರೆದರು.


ಇದೇ ಸಂದರ್ಭ ದೇವಾಲಯದ ವತಿಯಿಂದ ನಿರ್ಮಿಸಲಾಗಿದ್ದ ವೈಕುಂಠ ದ್ವಾರವನ್ನು ಪ್ರವೇಶಿಸಿ ಸುವ ಮೂಲಕ ವೈಕುಂಠ ಏಕಾದಶಿಯನ್ನು ಏಕಾಗ್ರತೆಯಿಂದ ಆಚರಿಸಿದ ಭಕ್ತರು ಶ್ರೀ ವೆಂಕಟೇಶ್ವರನಿಗೆ ತಮ್ಮ ಭಕ್ತಿ ನಮನ ಸಲ್ಲಿಸಿದರು.
ವೈಕುಂಠ ಏಕಾದಶಿ ಪ್ರಯುಕ್ತ ದೇವಾಲಯದ ಒಳ ಹಾಗೂ ಹೊರ ಆವರಣಗಳನ್ನು ಬಣ್ಣ ಬಣ್ಣದ ಹೂ ಹಾಗು ವಿದ್ಯುತ್ ದೀಪಗಳಿಂದ ಭವ್ಯವಾಗಿ ಅಲಂಕಾರಿಕಲಾಗಿತ್ತು.
ಬಂದ ಎಲ್ಲಾ ಭಕ್ತರಿಗೆ ದೇವಾಲಯದ ವತಿಯಿಂದ ಲಾಡು ಸೇರಿದಂತೆ ಪ್ರಸಾದ ವಿನಿಯೋಗ ಮಾಡಲಾಯಿತು.
ದೇವಾಲಯದ ಸಂಸ್ಥಾಪಕ ಸದಸ್ಯರಾದ ವಕೀಲ ಶ್ರೀನಿವಾಸ ರೆಡ್ಡಿ ಮಾತನಾಡಿ ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ದೇವಾಲಯದ ಸಂಸ್ಥಾಪಕರಾದ ಶ್ರೀ ವಿಜಯಲಕ್ಷ್ಮಿ, ನಾರಾಯಣ ರೆಡ್ಡಿ, ಡಾ.ಕುಮಾರ್, ಸೇರಿದಂತೆ ಕುಟುಂಬ ವರ್ಗದವರು ಹಾಗೂ ಪುರ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು