ಇತ್ತೀಚಿನ ಸುದ್ದಿ
ಸಂಸ್ಕಾರದಿಂದ ಉತ್ತಮ ಶಿಕ್ಷಣ: ಆದಿಚುಂಚನಗಿರಿ ಶೃಂಗೇರಿ ಮಹಾ ಸಂಸ್ಥಾನ ಮಠದ ಶ್ರೀ ಗುಣನಾಥ ಸ್ವಾಮೀಜಿ
12/01/2025, 15:32
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಸಂಸ್ಕಾರದಿಂದ ಉತ್ತಮ ಶಿಕ್ಷಣ ಮತ್ತು ಉದ್ಯೋಗ ಪಡೆಯಬಹುದು ಎಂದು ಶುಕ್ರವಾರ ಜಾವಳಿಯ ಬಿಜಿಎಸ್ ಶಾಲೆಯಲ್ಲಿ ವಿಜೃಂಭಣೆಯಿಂದ ಏರ್ಪಡಿಸಿದ್ದ ಶಾಲಾ ವಾರ್ಷಿಕೋತ್ಸವದ ಅಧ್ಯಕ್ಷತೆ ವಹಿಸಿದ್ದ ಆದಿಚುಂಚನಗಿರಿ ಶೃಂಗೇರಿ ಮಹಾ ಸಂಸ್ಥಾನ ಮಠದ ಶ್ರೀ ಗುಣನಾಥ ಸ್ವಾಮೀಜಿ ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶ್ರೀ ಗುಣನಾಥ ಸ್ವಾಮೀಜಿ ಸಾಂಸ್ಕೃತಿಕ ಕಾರ್ಯಕ್ರಮಗಳು ವಿದ್ಯಾರ್ಥಿಗಳು ವ್ಯಕ್ತಿತ್ವವನ್ನು ರೂಪಿಸುತ್ತವೆ. ವಿದ್ಯಾರ್ಥಿಗಳು ಜೀವನದಲ್ಲಿ ಗುರಿ ಮತ್ತು ಛಲ ಬೆಳೆಸಿಕೊಳ್ಳುವುದರ ಜೊತೆಗೆ ಕಠಿಣ ಪರಿಶ್ರಮದ ಮೂಲಕ ಸಾಧನೆಯ ಹಾದಿಯಲ್ಲಿ ನಡೆಯಬೇಕು ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಿಂದಲೆ ಗುರಿಯನ್ನು ನಿಗದಿಪಡಿಸಿಕೊಳ್ಳಬೇಕು ಆಗ ಮಾತ್ರ ಯಶಸ್ಸು ಸಾಧ್ಯ ಅಷ್ಟೇ ಅಲ್ಲ ತಮ್ಮ ತಂದೆ ತಾಯಿ ಗುರು ಹಿರಿಯರನ್ನು ಗೌರವಿಸಬೇಕು
ಹಾಗಾಗಿ ಪ್ರತಿವರ್ಷ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವವನ್ನು ಕಾರ್ಯಕ್ರಮವನ್ನು ನಡೆಸಿಕೊಂಡು ಬರಬೇಕು ಎಂದು ಬಿಜಿಎಸ್ ಶಾಲಾ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು
ಬಿಜಿಎಸ್ ಶಾಲಾ ಮುಕ್ಯೋಪಾಧ್ಯಯಾರಾದ ಸುರೇಶ್ ಮಾತನಾಡಿ ವಿದ್ಯಾರ್ಥಿಗಳು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಭವಿಷ್ಯವನ್ನು ರೂಪಿಸಿಕೊಳ್ಳಬೇಕಾದರೆ ಸತತ ಪರಿಶ್ರಮ ಪಡಬೇಕು ವಿದ್ಯಾರ್ಥಿ ಜೀವನದಿಂದಲೇ ಶಿಸ್ತು ಸಂಯಮ ಧನಾತ್ಮಕ ಚಿಂತನೆ ರೂಡಿಸಿಕೊಳ್ಳುವದರ ಜೊತೆಗೆ ಪಾಲಕರು ತಮ್ಮ ಮಕ್ಕಳಿಗೆ ಉತ್ತಮ ಹವ್ಯಾಸಗಳನ್ನು ಬೆಳೆಸುವ ಮೂಲಕ ಮಕ್ಕಳಲ್ಲಿ ಮಾನಸಿಕ ಧೃಡತೆಯನ್ನು ಬೆಳೆಸಬೇಕೆಂದರು.
ಶಾಲಾ ವಾರ್ಷಿಕೋತ್ಸವದ ವೇದಿಕೆಯಲ್ಲಿ ಹೇಮಂತ್ ಚಂದ್ರ ಸಹಾಯಕ ನಿರ್ದೇಶಕರು ಅಕ್ಷರ ದಾಸೋಹ ಮೂಡಿಗೆರೆ, ಆಡಳಿತ ಮಂಡಳಿ ಸದಸ್ಯರಾದ ಚನ್ನಕೇಶವ ಗೌಡ, ಗ್ರಾಮ ಪಂಚಾಯತಿ ಅಧ್ಯಕ್ಷ ಪ್ರದೀಪ್, ಎಂ ವಿ ಜಗದೀಶ್, ಪರಿಕ್ಷಿತ್ ಜಾವಳಿ, ಶಶಿಧರ್, ಉಪಾಧ್ಯಕ್ಷ ಮನೋಹರ್, ಶ್ರೀನಾಥ್ ವಾಟೆಖಾನ್, ಕಾಫಿ ಬೆಳೆಗಾರರಾದ ಗಿಲ್ಬರ್ಟ್ ಲೋಬೊ, ಕೇಶವೇ ಗೌಡ, ಉಪನ್ಯಾಸ ದುಗ್ಗಪ್ಪಗೌಡ ಶಿಕ್ಷಣ ತಜ್ಞರು, ಶಿಕ್ಷಕರಾದ ಯೋಗೇಶ್, ಗೌರಿಬಾಯಿ, ಸತೀಶ್, ಸಾಗರ್, ಆಶಾಕಿರಣ. ಅನ್ನಪೂರ್ಣಹಾಗೂಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.