4:45 PM Saturday19 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ಕೋಲಾರ: ಕರ್ನಾಟಕ- ಆಂಧ್ರ ಲಿಂಕ್ ರಸ್ತೆ ಕಾಮಗಾರಿಗೆ ಜಂಟೀ ಚಾಲನೆ

12/01/2025, 15:35

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ರಾಜ್ಯದಿಂದ ಆಂಧ್ರ ಪ್ರದೇಶದ ಬಿ.ಕೊತ್ತಕೋಟ, ಮದನಪಲ್ಲಿಗೆ ಹೋಗುವ ರಸ್ತೆಯು ಆಂಧ್ರದ ಅರಣ್ಯ ಪ್ರದೇಶದಲ್ಲಿ ಹಾದು ಹೋಗಲಿದ್ದು ಮದನಪಲ್ಲಿ ಶಾಸಕರು ಅರಣ್ಯ ಇಲಾಖೆಯೊಂದಿಗೆ ಸಮಾಲೋಚಿಸಿ ಲಿಂಕ್ ರಸ್ತೆಗೆ ವ್ಯವಸ್ಥೆ ಮಾಡುತ್ತಿದ್ದು ಮದನಪಲ್ಲಿ ಶಾಸಕರಿಗೆ ಶಾಸಕ ಜಿ.ಕೆ.ವೆಂಕಟಶಿವಾ ರೆಡ್ಡಿ ಕೃತಜ್ಞತೆ ಸಲ್ಲಿಸಿದರು.
ತಾಲೂಕಿನ ರಾಯಲ್ಪಾಡು ಹೋಬಳಿಯ ಮುದಿಮಡುಗು ಸಮೀಪದ ಆಂಧ್ರದ ಮೊರಂಕಿಂದಪಲ್ಲಿ ಗ್ರಾಮದಲ್ಲಿ ಶನಿವಾರ ರಾಜ್ಯ , ಆಂಧ್ರ ರಸ್ತೆಗೆ ಕಾಮಗಾರಿಗೆ ಜಂಟಿಯಾಗಿ ಚಾಲನೆ ನೀಡಿ ಮಾತನಾಡಿದರು.
ಅಲ್ಲದೆ ರಾಜ್ಯ ನೆರ ಹೊರೆಯ ಗ್ರಾಮಗಳಲ್ಲಿ ಬಾಂಧವ್ಯ, ಬಾವ ಬೆಸೆಗೆ ಸಂಬಂದವಿದೆ ರಾಜ್ಯದ ೨-೫೦ ಕಿಲೋಮೀಟರ್ ರಸ್ತೆ ಕಾಮಗಾರಿ ಮಾಡಬೇಕಾಗಿದ್ದು ರಾಜ್ಯ ಮತ್ತು ಆಂಧ್ರ ಪ್ರದೇಶಕ್ಕೆ ಲಿಂಕ್ ರಸ್ತೆಯನ್ನು ವ್ಯವಸ್ಥೆ ಮಾಡುವ ಉದ್ದೇಶವನ್ನು ಹೊಂದಿದ್ದೇನೆ ಎಂದರು.
ಮದನಪಲ್ಲಿ ಶಾಸಕ ಷಹಜಾನಪಾಷ ಮಾತನಾಡಿ ರಸ್ತೆ ಇತರೆ ಮೂಲ ಭೂತ ಸೌಲಭ್ಯಗಳ ಕೊರತೆಯಿಂದ ನಾಗರೀಕರು ಬೇಸರಿಸುತ್ತಿದ್ದು ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ನಾವಿಬ್ಬರೂ ಸೇರಿ ಸರಿಪಡಿಸುವ ನಿಟ್ಟಿನಲ್ಲಿ ಕೈಜೋಡಿಸುತ್ತಿದ್ದೇವೆ ಎಂದರು.
ಗ್ರಾಮೀಣ ಭಾಗದ ಬಡಜನರಿಗೆ ತರಕಾರಿ ಹಣ್ಣು ಹಂಪರು ಸರಬರಾಜು ಮಾಡಲು ಮತ್ತು ರೈತರಿಗೆ ಅನುಕೂಲವಾಗುವಂತೆ ಈ ರಸ್ತೆ ನಿರ್ಮಿಸಲಾಗುತ್ತಿದೆ
ಎಂದು ಹೇಳಿದರು.
ಜಿಪಂ ಮಾಜಿ ಅಧ್ಯಕ್ಷ ತೂಪಲ್ಲಿ ಆರ್.ನಾರಾಯಣಸ್ವಾಮಿ, ತಾಪಂ ಮಾಜಿ ಸದಸ್ಯರಾದ ಮಂಜುನಾಥ ರೆಡ್ಡಿ, ರಾಜಶೇಖರ ರೆಡ್ಡಿ, ಮುದಿಮಡುಗು ಗ್ರಾಮ ಪಂಚಾಯತಿ ಸದಸ್ಯ ಎಲ್.ರಾಜೇಶ್, ಆ‌ರ್.ಐ. ಶಂಕರ ರೆಡ್ಡಿ, ಜಿಲ್ಲಾ ಪಂಚಾಯತ್ ಇಂಜಿನಿಯರ್, ಕೃಷ್ಣಪ್ಪ,ವಾಟರ್ ಬೋರ್ಡ್ ಇಂಜಿನಿಯರ್ ಸಂತೋಷ್, ಸರ್‌ಪಂಚ್ ಆನಂದ ರೆಡ್ಡಿ, ಮಂಡಲ್ ಅಧ್ಯಕ್ಷ ಈಶ್ವರ್, ಮುಖಂಡ ವೇಣು, ಜಯಣ್ಣ, ನಾಗೇಶ್ ,ರಾಜ್ಯ ಆಂಧ್ರದ ಪಂಚಾಯಿತ್ ರಾಜ್, ಕಂದಾಯ ಅಧಿಕಾರಿಗಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು