4:15 AM Tuesday14 - January 2025
ಬ್ರೇಕಿಂಗ್ ನ್ಯೂಸ್
ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ… ಹಸುಗಳ ಕೆಚ್ಚಲು ಕೊಯ್ದ ‘ವ್ಯಾಘ್ರ’ನ ಬಂಧನ: ಬಿಹಾರ ಮೂಲದ ದುಷ್ಟನಿಗೆ ನ್ಯಾಯಾಂಗ ಬಂಧನ ನಂಜನಗೂಡು: ಅಂಧಕಾಸುರ ಸಂಹಾರ ಧಾರ್ಮಿಕ ಆಚರಣೆ ನಿರ್ವಿಘ್ನವಾಗಿ ಮುಕ್ತಾಯ ಹಸುಗಳ ಕೆಚ್ಚಲು ಕೊಯ್ದ ದುರುಳರ ವಿರುದ್ಧ ಕಠಿಣ ಕ್ರಮ ಜರುಗಿಸಿ: ಕೇಂದ್ರ ಸಚಿವ… ಹಸುಗಳ ಕೆಚ್ಚಲು ಕೊಯ್ದು ಆರೋಪಿಗಳ ಪತ್ತೆ ಹಚ್ಚಿ ಶಿಕ್ಷೆಗೆ ಗುರಿಪಡಿಸಲಾಗುವುದು: ಸಿಎಂ ಸಿದ್ದರಾಮಯ್ಯ ನೈಸ್ ಯೋಜನೆಗೆ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಎಲ್ಲಿ?: ರಾಜ್ಯ ಸರ್ಕಾರದ ವಿರುದ್ಧ…

ಇತ್ತೀಚಿನ ಸುದ್ದಿ

ಬೀಚ್ ಉತ್ಸವಕ್ಕೆ ಮಂಗಳ: ಖ್ಯಾತ ಗಾಯಕ ರಘು ದೀಕ್ಷಿತ್ ಲೈವ್ ಕಾಯ೯ಕ್ರಮ; ನೃತ್ಯೋತ್ಸವ

13/01/2025, 20:19

ಮಂಗಳೂರು(reporterkarnataka.com): ಕರಾವಳಿ ಉತ್ಸವದ ಅಂಗವಾಗಿ ತಣ್ಣೀರುಬಾವಿ ಕಡಲ ಕಿನಾರೆಯಲ್ಲಿ ರೋಹನ್ ಕಾಪೋ೯ರೇಶನ್ ನಡೆದ ಎರಡು ದಿನಗಳ ಬೀಚ್ ಉತ್ಸವ ಭಾನುವಾರ ಸಮಾರೋಪಗೊಂಡಿತು.
ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರು ಸಮಾರೋಪದಲ್ಲಿ ಮಾತನಾಡಿ, ಬೀಚ್ ಉತ್ಸವದಿಂದ ಪ್ರವಾಸೋದ್ಯಮಕ್ಕೆ ಹೆಚ್ಚು ಉತ್ತೇಜನ ದೊರಕಲಿದೆ. ಕರಾವಳಿಯ ಸೊಬಗನ್ನು ಹೆಚ್ಚಿಸಲು ಇಂತಹ ಕಾಯ೯ಕ್ರಮಗಳು ಇನ್ನಷ್ಟು ನಡೆಯಲಿ ಎಂದು ಹೇಳಿದರು.


ಸಮಾರಂಭದಲ್ಲಿ ಮೇಯರ್ ಮನೋಜ್ ಕುಮಾರ್, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ನಗರ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್, ಹೆಚ್ಚು ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್, ಉದ್ಯಮಿ ರೋಹನ್ ಮೊಂಥೆರೋ, ಮುಡಾ ಆಯುಕ್ತ ನೂರ್ ಜಹರಾ ಖಾನಂ , ಪಿಲಿಕುಳ ಆಯುಕ್ತ ಡಾ. ಅರುಣ್ ಶೆಟ್ಟಿ, ಆರ್ ಟಿ ಓ ಶ್ರೀಧರ್ ಮಲ್ನಾಡ್, ಮತ್ತಿತರರು ಉಪಸ್ಥಿತರಿದ್ದರು.
ಭಾನುವಾರ ಕಡಲ ಕಿನಾರೆಯಲ್ಲಿ ಯೋಗ ಕಾಯ೯ಕ್ರಮ, ಉದಯ ರಾಗ, ಜಲಕ್ರೀಡೆ, ಮರಳು ಶಿಲ್ಪ ಸ್ಪಧೆ೯ ನಡೆಯಿತು.
ಸಮಾರೋಪದ ಬಳಿಕ ನೃತ್ಯೋತ್ಸವ ಹಾಗೂ ಖ್ಯಾತ ಗಾಯಕ ರಘು ದೀಕ್ಷಿತ್ ಅವರ ಲೈವ್ ಕಾಯ೯ಕ್ರಮ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು