4:57 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

‘ಕಣ್ಣಾಮುಚ್ಚೆ ಕಾಡೇ ಗೂಡೇ’ ಸಿನಿಮಾ ಜ.17ರಂದು ಬೆಳ್ಳಿತೆರೆಗೆ

13/01/2025, 20:22

ಮಂಗಳೂರು(reporterkarnataka.com): ಡಾರ್ಲಿಂಗ್ ಪ್ರೊಡಕ್ಷನ್ಸ್ ಬ್ಯಾನರಿನಲ್ಲಿ ತಯಾರಾಗಿರುವ “ಕಣ್ಣಾಮುಚ್ಚೆ ಕಾಡೇ ಗೂಡೇ“ ಸಿನಿಮಾ ಜನವರಿ 17ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.
ಚಿತ್ರದ ನಿರ್ಮಾಪಕ ವೀರೇಶ್ ನಗರದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಈ ಕುರಿತು ಮಾಹಿತಿ ನೀಡಿದರು.
ಸಿನಿಮಾದಲ್ಲಿ ಸಸ್ಪೆನ್ಸ್ ಕಥಾ ಹಂದರದ ಜೊತೆಗೆ ತಾಯಿಯ ಸೆಂಟಿಮೆಂಟ್ ಇದೆ. ನವಿರಾದ ಪ್ರೇಮಕತೆ, ಸುಂದರವಾದ ತಾಣಗಳಲ್ಲಿ ಸಿನಿಮಾ ಚಿತ್ರೀಕರಣಗೊಂಡಿದೆ. ಸಿನಿಮಾ ಕನ್ನಡಿಗರಿಗೆ ಖಂಡಿತ ಇಷ್ಟವಾಗುತ್ತದೆ. ನಾನು ಸಿನಿಮಾದಲ್ಲಿ ನೆಗೆಟಿವ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಸಿನಿಮಾ ಮಂದಿರಕ್ಕೆ ಬಂದು ಎಲ್ಲರೂ ಸಿನಿಮಾ ನೋಡಿ ಎಂದರು.
ನಾಯಕ ನಟ ಅಥರ್ವ ಪ್ರಕಾಶ್ ಮಾತನಾಡಿ,ನನ್ನ ಮೊದಲ ಸಿನಿಮಾ ತುಳುವಿನ ಚಾಲಿಪೋಲಿಲು, ನಂತರ ನಾನು ಎಂಟು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದೇನೆ. ಈ ಸಿನಿಮಾದಲ್ಲಿ ಬಹುತೇಕ ಎಲ್ಲರೂ ತುಳು ಕಲಾವಿದರೇ ಇದ್ದಾರೆ. ಸಿನಿಮಾದ ಕುರಿತು ನನಗೆ ಹೆಚ್ಚಿನ ನಿರೀಕ್ಷೆಯಿದೆ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ ಎಂದರು.
ನಾಯಕಿ ಪ್ರಾರ್ಥನಾ ಮಾತಾಡಿ, ನಾನು ಮಂಗಳೂರ ಹುಡುಗಿ. ಸಿನಿಮಾದಲ್ಲಿ ಹಿರಿಯ ನಟ ರಾಘವೇಂದ್ರ ರಾಜ್ ಕುಮಾರ್ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ. ತುಳು ರಂಗಭೂಮಿಯ ಬಹುತೇಕ ಕಲಾವಿದರು ಸಿನಿಮಾದಲ್ಲಿದ್ದಾರೆ. ಎಲ್ಲರೂ ಚಿತ್ರತಂಡವನ್ನು ಪ್ರೋತ್ಸಾಹಿಸಿ ಎಂದರು.
ನಟ ಜ್ಯೋತಿಷ್ ಶೆಟ್ಟಿ ಮಾತಾಡಿ, ಸಿನಿಮಾದಲ್ಲಿ ಒಂದು ವಿಭಿನ್ನ ಪಾತ್ರದಲ್ಲಿ ನಾನು ಕಾಣಿಸಿಕೊಂಡಿದ್ದೇನೆ. ನನಗೆ ಸಿನಿಮಾ ಕಥೆ ಇಷ್ಟವಾಯಿತು. ಮಂಗಳೂರಿನ ಮಣ್ಣಿನ ಸೊಗಡು ಈ ಸಿನಿಮಾದಲ್ಲಿದೆ. ಎಲ್ಲರೂ ಸಿನಿಮಾ ನೋಡಿ ಎಂದರು.
ನಟರಾಜ್ ಸಿನಿಮಾ ನಿರ್ದೇಶನ ಮಾಡಿದ್ದು ಅರವಿಂದ್ ಬೋಳಾರ್, ದೀಪಕ್ ರೈ ಪಾಣಾಜೆ, ಪುಷ್ಪರಾಜ್, ಚಂದ್ರಕಲಾ ರಾವ್, ನಮಿತಾ ಇತರರು ಸಿನಿಮಾದ ಪ್ರಧಾನ ಭೂಮಿಕೆಯಲ್ಲಿರಲಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಅನಿತಾ, ರವಿ ರಾಮಕುಂಜ, ರಾಜೇಶ್ ಸ್ಕೈ ಲಾರ್ಕ್ , ನಿರ್ಮಾಪಕಿ ಅನಿತಾ ವೀರೇಶ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು