5:47 AM Sunday5 - October 2025
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್

ಇತ್ತೀಚಿನ ಸುದ್ದಿ

ಸಂಸದ ಕ್ಯಾ. ಬ್ರಿಜೇಶ್ ಚೌಟ ಎಂಪಿ ಅನುದಾನಡಿ ಮೊದಲ ಕಾಮಗಾರಿಗೆ ಚಾಲನೆ

13/01/2025, 20:25

ಮಂಗಳೂರು(reporterkarnataka.com): ಪುತ್ತೂರು ತಾಲೂಕಿನ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸೋಮವಾರ ಚಾಲನೆ ನೀಡಿದ್ದಾರೆ.


ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಡಿ ಅಂದಾಜು 5 ಲಕ್ಷ ರೂ. ವೆಚ್ಚದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಪುತ್ತೂರು ಕಸಬಾ ಪರ್ಲಡ್ಕ ಸರ್ಕಾರಿ ಕಾಂಪೌಂಡ್‌ ಒಳಗಿರುವ ತೋಡಿಗೆ ಚರಂಡಿ ವ್ಯವಸ್ಥೆ ಹಾಗೂ ಸ್ಲ್ಯಾಬ್ ನಿರ್ಮಾಣ ಕಾರ್ಯ ನಡೆಯಲಿದ್ದು, ಸಂಸದ ಕ್ಯಾ. ಚೌಟ ಅವರು ಸೋಮವಾರ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಇದರ ಜತೆಗೆ ಪುತ್ತೂರು ಕಸಬಾ ದರ್ಬೆಯ ಆಫಿಸರ್ಸ್ ಕ್ಲಬ್ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದ್ದು ಸಂಸದರ ನಿಧಿಯಡಿ 5 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರೀಟಿಕರಣ ಕಾಮಗಾರಿಗೂ ಶಂಕುಸ್ಥಾಪನೆ ನೆರವೇರಿಸಲಾಯಿತು.
ಕ್ಯಾ. ಬ್ರಿಜೇಶ್ ಚೌಟ ಅವರು ಸಂಸದರಾದ ಬಳಿಕ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಡಿ ಬಿಡುಗಡೆ ಮಾಡಲಾದ ವಿವಿಧ ಅನುದಾನದ ಅಭಿವೃದ್ಧಿ ಕಾಮಗಾರಿ ಇದಾಗಿದೆ. ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಂಸದ ಕ್ಯಾ. ಚೌಟ ಅವರು,ನಮ್ಮ ಕ್ಷೇತ್ರದ ಜನತೆಗೆ ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ನಾನು ಪ್ರಾಮಾಣಿಕವಾಗಿ ದಣಿವರಿಯದೇ ಕೆಲಸ ಮಾಡುತ್ತೇನೆ. ನಮ್ಮ ಕ್ಷೇತ್ರದ ಸಮಗ್ರ ಅಭಿವೃದ್ದಿಯೇ ನನ್ನ ಮೊದಲ ಆದ್ಯತೆಯಾಗಿದೆ ಎಂದು ಹೇಳಿದರು.
ಈ ವೇಳೆ ಡಾ. ಸುರೇಶ್ ಪುತ್ತೂರಾಯ, ಬಿಜೆಪಿ ಪುತ್ತೂರು ನಗರ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪುತ್ತೂರು ನಗರಸಭೆ ಅಧ್ಯಕ್ಷ ಲೀಲಾವತಿ ಅಣ್ಣು ನಾಯ್ಕ್, ಉಪಾಧ್ಯಕ್ಷ ಬಾಲಚಂದ್ರ, ಚಂದ್ರಶೇಖರ ರಾವ್ ಬಪ್ಪಳಿಗೆ, ಚನಿಲ ತಿಮ್ಮಪ್ಪ ಶೆಟ್ಟಿ, ರಾಧಾಕೃಷ್ಣ ಆಳ್ವ, ಜಗನ್ನಿವಾಸ ರಾವ್, ಡಾ. ಮಂಜುನಾಥ್ ಶೆಟ್ಟಿ, ಪ್ರಸನ್ನ ಮಾರ್ತ, ವಿಕಾಸ್ ಪುತ್ತೂರು, ಶಶಿಧರ್ ನಾಯ್ಕ್, ಸಂತೋಷ್ ರೈ ಕೈಕಾರ, ಶಶಿಧರ್ ನಾಯಕ್, ನಾಗೇಶ್ ಪ್ರಭು, ಹರಿಪ್ರಸಾದ್ ಯಾದವ್, ಹರಿಪ್ರಸಾದ್ ಪೆರಿಯತತೋಡಿ, ವಿದ್ಯಾಧರ್ ಜೈನ್, ನಿತೀಶ್ ಶಾಂತಿವನ, ಪುನೀತ್ ಮಾಡತ್ತಾರ್, ನಿತೇಶ್ ಕಲ್ಲೇಗ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು