2:29 AM Thursday18 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಗಡ್ಡಿ ಗದ್ದೇಮ್ಮ ಜಾತ್ರೆಯಲ್ಲಿ ಮದ್ಯ ಮಾರಾಟ: ದಂಧೆಕೋರರಿಗೆ ಅಬಕಾರಿ ಇಲಾಖೆ ಸಾಥ್ ?

14/01/2025, 10:13

ದೇವಿ ದರ್ಶನ ಪಡೆದು ಪುನೀತರಾಗಲು ಆಗಮಿಸುವ ಭಕ್ತರನ್ನ ಟಾರ್ಗೆಟ್ ಮಾಡಿ ಗಡ್ಡಿ ಗದ್ದೇಮ್ಮದೇವಿ ಜಾತ್ರೆಯಲ್ಲಿ ಅಕ್ರಮವಾಗಿ ಮದ್ಯ ರಾಜಾರೋಷವಾಗಿ ಮಾರಾಟವಾಗ್ತದೆ

ಶಿವು ರಾಠೋಡ್ ಹುಣಸಗಿ ಯಾದಗಿರಿ

info.reporterkarnataka@gmail.com

ಪ್ರತಿವರ್ಷದಂತೆ ಈ ಬಾರಿಯೂ ಉತ್ತರ ಕರ್ನಾಟಕದ ನಾರಾಯಣಪುರ ಸಮೀಪದ ಸುಪ್ರಸಿದ್ಧ ಶ್ರೀ ಗಡ್ಡಿ ಗದ್ದೇಮ್ಮ ದೇವಿ ಜಾತ್ರೆ ಅದ್ದೂರಿಯಾಗಿ ನಡೆಸಲಾಗುತ್ತಿದೆ. ಆದ್ರೆ ಇಲ್ಲಿಗೆ ಬರುವ ಭಕ್ತರನ್ನೇ ಟಾರ್ಗೆಟ್​ ಮಾಡಿ ಗಡ್ಡಿ ಶ್ರೀಗದ್ದೇಮ್ಮ ದೇವಿ ಸನ್ನಿಧಾನದಲ್ಲಿ ಮದ್ಯದ ಘಮ ಹೆಚ್ಚಾಗಿದೆ. ಅಕ್ರಮವಾಗಿ ರಾಜಾರೋಷವಾಗಿ ಮದ್ಯ ಮಾರಾಟ ಮಾಡಲಾಗಿದೆ.

ಭಾರತ ಹುಣ್ಣುಮೆಗೆ ಕರ್ನಾಟಕದ ಮೂಲೆಮೂಲೆಗಳಿಂದ ಲಕ್ಷಾಂತರ ಭಕ್ತರು ಭಂಡಾರದೊಡತಿ ಭಕ್ತರ ಆರಾಧ್ಯದೈವ ಗಡ್ಡಿ ಗದ್ದಮ್ಮ ದೇವಿ ದರ್ಶನಕ್ಕೆ ಆಗಮಿಸುತ್ತಾರೆ. ಇದೇ ಸಂದರ್ಭದಲ್ಲಿ ಮಹಾರಾಷ್ಟ್ರ, ಆಂಧ್ರ ಪ್ರದೇಶ, ತೆಲಂಗಾಣ ಸೇರಿದಂತೆ ಹೊರ ರಾಜ್ಯದಿಂದಲೂ ಅಪಾರ ಪ್ರಮಾಣದ ಭಕ್ತರು ಜಾತ್ರೆಗೆ ಆಗಮಿಸುತ್ತಾರೆ. ಭಾರತ ಹುಣ್ಣುಮೆ ದಿನದಂದೂ ದೇವಿ ದರ್ಶನ ಪಡೆಯುವುದರಿಂದ ಕಷ್ಟ ಕಾರ್ಪಣ್ಯಗಳು ದೂರ ಆಗುತ್ತವೆ ಅನ್ನೋ ನಂಬಿಕೆ ಇದೆ. ಹೀಗಾಗಿ ಅಪಾರ ಸಂಖ್ಯೆಯಲ್ಲಿ ಹುಣ್ಣುಮೆ ಒಂದು ದಿನ ಮುಂಚತವಾಗಿ ಭಕ್ತರ ದಂಡು ಜಾತ್ರೆಗೆ ಹರಿದು ಬರುತ್ತೆ. ಏಳು ಗ್ರಾಮಗಳಲ್ಲಿ ಸಂಚಾರಿಸಿ ಉಡಿತುಂಬಿಕೊಂಡು ದೇವಿ ಬರುವದರಿಂದ ಒಂದು ದಿನ ಮೊದಲು ಬಂದು ದೇವಿಗೆ ವಿಶೇಷ ಖಾದ್ಯಗಳನ್ನ ಸಿದ್ದಪಡಿಸಿ ನೈವೇದ್ಯ ಹಿಡಿದು ಜಾತ್ರೆ ಆಚರಿಸುವುದು ಸಂಪ್ರದಾಯ.
ಇನ್ನೂ ದೇವಿ ದರ್ಶನ ಪಡೆದು ಪುನೀತರಾಗಲು ಆಗಮಿಸುವ ಭಕ್ತರನ್ನ ಟಾರ್ಗೆಟ್ ಮಾಡಿ ಗದ್ದೇಮ್ಮ ದೇವಿ ಜಾತ್ರೆಯಲ್ಲಿ ಅಕ್ರಮವಾಗಿ ಮದ್ಯ ರಾಜಾರೋಷವಾಗಿ ಮಾರಾಟ ಮಾಡುತ್ತಾರೆ. ಸುಮಾರು ಎಕರೆ ಪ್ರದೇಶದಲ್ಲಿ ಅದ್ದೂರಿ ಜಾತ್ರೆ ನಡೆಯುತ್ತಿದ್ದು ವಿವಿಧ ಶಾಪ್ ಗಳು ಜಾತ್ರೆಯಲ್ಲಿ ತೆರೆದಿರುತ್ತಾರೆ. ದೇವಿಯ ಸನ್ನಿಧಾನದಲ್ಲಿದ್ದುಕೊಂಡೇ ಕೆಲವರು ಭಕ್ತರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ.ಗಡ್ಡಿ ಗದ್ದೇಮ್ಮ‌ದೇವಿ ಗ್ರಾಮದಲ್ಲಿ ಮಧ್ಯ ಮಾರಾಟಗಾರರು ಕೋಲ್ಡ್ರಿಂಕ್ಸ್ ಶಾಪ್ ನ ರೀತಿಯಲ್ಲಿ ಮದ್ಯ ಅಂಗಡಿ ತೆರದು ಪ್ರತಿ ವರ್ಷವು ಅಕ್ರಮವಾಗಿ ಸಾರಾಯಿ ಮಾರಾಟ ಮಾಡಲಾಗುತ್ತಿದೆ. ಕೆಲವು ಅಂಗಡಿಗಳಂತೂ ಮುಂಬಾಗದಲ್ಲೆ ಬಾರ್ ಮಾದರಿಯಲ್ಲೇ ರೆಡಿ ಮಾಡಿ ಅಲ್ಲೇ ಕುಡಿಯುವ ವ್ಯವಸ್ಥೆ ಮಾಡಿದ್ದಾರೆ. ಚಿಕ್ಕ ಚಿಕ್ಕ ಮಕ್ಕಳಿಂದಲೂ ಮದ್ಯ ಮಾರಾಟ, ಕಣ್ಮುಚ್ಚಿ ಕುಳಿತ ಜಿಲ್ಲಾಡಳಿತ
ಹೌದು ಗಡ್ಡಿ ಗ್ರಾಮದದಲ್ಲಿ ಒಂದು ಕಡೆ ಅದ್ದೂರಿಯಾಗಿ ಜಾತ್ರೆ ನಡೆಯುತ್ತಿದ್ರೇ ಇನ್ನೊಂದು ಕಡೆ ಜಾತ್ರೆಯಲ್ಲೇ ಮೂಲೆ ಮೂಲೆಯಲ್ಲಿ ಮದ್ಯ ಮಾರಾಟವಾಗುತ್ತಿದೆ. ಇದರಲ್ಲಿ ಚಿಕ್ಕ ಮಕ್ಕಳು ಕೂಡ ಟೆಟ್ರಾ ಪಾಕೆಟ್‌ ಗಳನ್ನ ಹಣ ಪಡೆದು ಮಾರಾಟ ಮಾಡುವ ದೃಶ್ಯ ಸಾಮಾನ್ಯವಾಗಿ ಕಂಡು ಬರುತ್ತಿದೆ. ಈ ಅಕ್ರಮ ಸಾರಾಯಿ ಮಾರಾಟ ಮಾಡುವ ದಂಧೆ ರಾಜಾರೋಷವಾಗಿ ಮಾಡುತ್ತಿದ್ದಾರೆ. ದೇವಿಯ ಭಂಡಾರ ಸಿಗಬೇಕಿದ್ದ ಜಾಗದಲ್ಲಿ ಇದೀಗ ಎಣ್ಣೆ ಸಿಗುತ್ತಿದ್ದು ಜಿಲ್ಲಾಡಳಿತವೇ ಇದಕ್ಕೆ ನೇರ ಹೊಣೆ ಅಂತಾ ಕೆಲ ಭಕ್ತರು, ಸಾರ್ವಜನಿಕರು ಆಕ್ರೋಶ ಹೊರ ಹಾಕುತ್ತಿದ್ದಾರೆ.
ಅಕ್ರಮಕೋರರಿಗೆ ಸಾಥ್ ನೀಡಿದ್ರಾ ಅಬಕಾರಿ ಹಾಗೂ ಪೊಲೀಸ್ ಸಿಬ್ಬಂದಿ
ಇನ್ನೂ ಈ ವಿಚಾರ ಅಬಕಾರಿ ಇಲಾಖೆ ಸಿಬ್ಬಂದಿಗೂ ಗೊತ್ತಿದೆ. ಪ್ರತಿ ವರ್ಷ ಜಾತ್ರೆಯಲ್ಲಿ ಮಧ್ಯ ಮಾರಾಟ ಮಾಡಬಾರದೆಂದು ಸಾಮಾಜಿಕ ಹೋರಾಟಗಾರ, ಪತ್ರಕರ್ತ, ರಾಜ್ಯ ಬುಡಕಟ್ಟು ಜನಾಂಗ ಸಂರಕ್ಷಣಾ ಸಮಿತಿ ರಾಜ್ಯಾಧ್ಯಕ್ಷರಾದ ಅಮರೇಶಣ್ಣ ಕಾಮನಕೇರಿ ತಹಶಿಲ್ದಾರರಿಗೆ,ಹುಣಸಗಿ ಸಿಪಿಆಯ್ ಯವರಿಗೆ ನಾರಾಯಣಪುರ ಪೋಲಿಸ ಠಾಣೆಗೆ ಲಿಖಿತ ದೂರು ಸಲ್ಲಿಸುತ್ತಾ ಬಂದಿದ್ದಾರೆ. ಆದರೆ ಮಧ್ಯ ಮಾರಾಟಗಾರರಿಂದ ಹಣ ಪಡೆದು ಸೈಲೆಂಟ್ ಆಗಿದ್ದಾರೆ ಅನ್ನೋ ಆರೋಪ ಕೂಡ ಕೇಳಿ ಬರುತ್ತಿದೆ. ಇತ್ತ ಹುಣಸಗಿ ಮತ್ತು ನಾರಾಯಣಪುರ ಪೊಲೀಸ್ ಠಾಣೆಯ ಕೆಲ ಸಿಬ್ಬಂದಿ ಕೂಡ ಇದರಲ್ಲಿ ಭಾಗಿಯಾಗಿರುವ ಶಂಕೆ ಇದ್ದು ಹೀಗಾಗಿ ಅಕ್ರಮಕ್ಕೆ ಬ್ರೇಕ್ ಹಾಕಬೇಕಿದ್ದವರು ಇದೀಗ ಸಾಥ್ ಕೊಟ್ರಾ ಅನ್ನೋ ಆರೋಪ‌ ಕೇಳಿ ಬರುತ್ತಿದೆ‌. ಸದ್ಯ ಜಾತ್ರೆ ಮುಗಿಯುವವರೆಗೂ ದೇವಸ್ಥಾನ ಕೆಲವು ಕಿಮೀ ವರೆಗೂ ಮದ್ಯ ಮಾರಾಟಕ್ಕೆ ನಿಷೇಧ ಹಾಕಿದ್ದು ಹೀಗಿದ್ರೂ ರಾಜಾರೋಷವಾಗಿ ಮದ್ಯ ಮಾರಾಟ ಆಗ್ತಿರುವುದರಲ್ಲಿ ಅಧಿಕಾರಿಗಳು ಶಾಮೀಲಾಗಿರುವುದು ಸ್ಪಷ್ಟ ಆಗ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು