12:10 AM Tuesday14 - January 2025
ಬ್ರೇಕಿಂಗ್ ನ್ಯೂಸ್
ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ… ಹಸುಗಳ ಕೆಚ್ಚಲು ಕೊಯ್ದ ‘ವ್ಯಾಘ್ರ’ನ ಬಂಧನ: ಬಿಹಾರ ಮೂಲದ ದುಷ್ಟನಿಗೆ ನ್ಯಾಯಾಂಗ ಬಂಧನ ನಂಜನಗೂಡು: ಅಂಧಕಾಸುರ ಸಂಹಾರ ಧಾರ್ಮಿಕ ಆಚರಣೆ ನಿರ್ವಿಘ್ನವಾಗಿ ಮುಕ್ತಾಯ ಹಸುಗಳ ಕೆಚ್ಚಲು ಕೊಯ್ದ ದುರುಳರ ವಿರುದ್ಧ ಕಠಿಣ ಕ್ರಮ ಜರುಗಿಸಿ: ಕೇಂದ್ರ ಸಚಿವ… ಹಸುಗಳ ಕೆಚ್ಚಲು ಕೊಯ್ದು ಆರೋಪಿಗಳ ಪತ್ತೆ ಹಚ್ಚಿ ಶಿಕ್ಷೆಗೆ ಗುರಿಪಡಿಸಲಾಗುವುದು: ಸಿಎಂ ಸಿದ್ದರಾಮಯ್ಯ ನೈಸ್ ಯೋಜನೆಗೆ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಎಲ್ಲಿ?: ರಾಜ್ಯ ಸರ್ಕಾರದ ವಿರುದ್ಧ…

ಇತ್ತೀಚಿನ ಸುದ್ದಿ

ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ ಸಹಸ್ರ ಸಹಸ್ರ ಭಕ್ತರಿಂದ ಜಯಘೋಷ

14/01/2025, 21:27

ಸದಾಶಿವನ್ ನಾಯರ್ ಶಬರಿಮಲೆ

info.reporterkarnataka@gmail.com

ದಕ್ಷಿಣ ಭಾರತದ ಅತ್ಯಂತ ಪ್ರಸಿದ್ಧ ಯಾತ್ರಾಸ್ಥಳವಾದ ಕೇರಳದ ಶಬರಿಮಲೆ ಬೆಟ್ಟದಲ್ಲಿ ಇಂದು ಸಂಜೆ 6:45ರ ಸುಮಾರಿಗೆ ಮಕರ ಸಂಕ್ರಮಣದ ಶುಭದಿನದಂದು ಮಕರ ಜ್ಯೋತಿ ದರ್ಶನವಾಯಿತು.
ಶಬರಿಮಲೆ ಬೆಟ್ಟದಲ್ಲಿ ಸೇರಿದ್ದ ಲಕ್ಷಾಂತರ ಮಂದಿ ಅಯ್ಯಪ್ಪ ಭಕ್ತರು ಮಕರ ಜ್ಯೋತಿಯ ದರ್ಶನ ಪಡೆದು ಪುನೀತರಾದರು. ಜ್ಯೋತಿ ಸ್ವರೂಪವಾದ ಅಯ್ಯಪ್ಪ ಸ್ವಾಮಿಯ ದರ್ಶನಕ್ಕೆ ಭಕ್ತರ ದಂಡು ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದರು. ಮಕರ ಜ್ಯೋತಿ ದರ್ಶನವಾಗುತ್ತಿದ್ದಂತೆ ಸ್ವಾಮಿಯೇ ಶರಣಂ ಅಯ್ಯಪ್ಪ ಘೋಷಣೆ ಮುಗಿಲು ಮುಟ್ಟಿತು. ಮೂರು ಬಾರಿ ಮಕರ ಜ್ಯೋತಿ ದರ್ಶನವಾಯಿತು.


ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರ ಪ್ರದೇಶ, ತೆಲಂಗಾಣ, ಪುದುಚೇರಿ ಹಾಗೂ ಉತ್ತರ ಭಾರತದ ಕೆಲವು ಕಡೆಗಳಿಂದ ಲಕ್ಷಾಂತರ ಮಂದಿ ಭಕ್ತರು ಅಯ್ಯಪ್ಪ ದರ್ಶನಕ್ಕೆ ಆಗಮಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು