1:36 AM Monday15 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಲಸಿಕೆ ಕುರಿತು ಅಪಪ್ರಚಾರ ಮಾಡಿರುವ ಕಾಂಗ್ರೆಸ್ ಮುಖಂಡರೇ ಇಂದಿನ ಪರಿಸ್ಥಿತಿಗೆ ಕಾರಣ: ಶಾಸಕ ವೇದವ್ಯಾಸ್ ಕಾಮತ್ 

21/05/2021, 18:59

ಮಂಗಳೂರು(reporterkarnataka news): ಕೋವಿಡ್ ಲಸಿಕೆಯ ಕುರಿತು ಕೇವಲ ರಾಜಕೀಯ ದುರುದ್ಧೇಶದಿಂದ ಅಪಪ್ರಚಾರ ಮಾಡಿರುವ ಕಾಂಗ್ರೇಸ್ ಮುಖಂಡರೇ ಇಂದಿನ ಈ ಪರಿಸ್ಥಿತಿಗೆ ಮೂಲ ಕಾರಣ ಎಂದು ಶಾಸಕ ವೇದವ್ಯಾಸ್ ಕಾಮತ್ ಕಿಡಿಕಾರಿದ್ದಾರೆ.

ಭಾರತದಲ್ಲಿ ಲಸಿಕೆ ಕಂಡುಹಿಡಿದ ಸಂದರ್ಭದಲ್ಲಿ ಗುಣಮಟ್ಟದ ಕುರಿತು ತಾವೇ ತಜ್ಞರಂತೆ ಬೇಕಾಬಿಟ್ಟಿಯಾಗಿ ಹೇಳಿಕೆ ನೀಡಿದ್ದ ಕಾಂಗ್ರೇಸ್ ಮುಖಂಡರು ಅದರ ಪರಿಣಾಮದ ಕುರಿತು ಆಲೋಚಿಸುವಷ್ಟು ಪ್ರಬುದ್ಧರಾಗಿಲ್ಲವೇ. ಮೊದಲ ಹಂತದಲ್ಲಿ ಡಿ ಗ್ರೂಪ್ ನೌಕರರಿಗೆ ಲಸಿಕೆ ನೀಡಿದಾಗ ಪ್ರಧಾನಿ ಮೊದಲು ಲಸಿಕೆ ಪಡೆಯಬೇಕಿತ್ತು ಎನ್ನುವ ಕಾಂಗ್ರೆಸ್ ಮುಖಂಡರು ಪ್ರಧಾನಿ ಲಸಿಕೆ ಪಡೆದಾಗ ಜನತೆಗೆ ಲಸಿಕೆ ನೀಡದೆ ಪ್ರಧಾನಿ ಲಸಿಕೆ ಪಡೆಯುತ್ತಿದ್ದಾರೆ ಎಂದು ಅಪ್ರಬುದ್ಧರಂತೆ ಹೇಳಿಕೆ ನೀಡುತ್ತಿದ್ದಾರೆ. ಲಸಿಕೆಯ ಬಗ್ಗೆ ಜನರಲ್ಲಿ ಭಯದ ವಾತಾವರಣ ಸೃಷ್ಟಿಸಿ ಈಗ ತೇಪೆಹಚ್ಚುವ ಕೆಲಸ ಮಾಡುತಿದ್ದಾರೆ ಎಂದಿದ್ದಾರೆ.

ಭಾರತದ ಲಸಿಕೆಯನ್ನು ಬೇರೆ ದೇಶಗಳಿಗೆ ನೀಡಿರುವ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಆಂದೋಲನ ಪ್ರಾರಂಭಿಸುವ ಕಾಂಗ್ರೆಸ್ ಮುಖಂಡರು ಜನರು ಲಸಿಕೆ ಪಡೆಯಲು ಹಿಂದೇಟು ಹಾಕಲು ಮೂಲ ಕಾರಣ ಯಾರೆಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು. ಈ ದೇಶದಲ್ಲಿ ಲಸಿಕೆ ಕಂಡುಹಿಡಿದ ಸಂದರ್ಭದಲ್ಲಿ ರಾಜಕೀಯ ದುರುದ್ಧೇಶದಿಂದ ಕಾಂಗ್ರೆಸಿಗರು ಮಾಡಿದ ಅಪಪ್ರಚಾರದಿಂದ ಜನರು ಲಸಿಕೆ ಪಡೆಯಲು ಹಿಂದೇಟು ಹಾಕುತಿದ್ದರು. ಆ ಸಂದರ್ಭದಲ್ಲಿ ಲಸಿಕೆಯ ಸಿಂಧುತ್ವ ಕೊನೆಗೊಳ್ಳುವ ಮೊದಲು ಅನ್ಯ ಮಾರ್ಗವಿಲ್ಲದೆ ಬೇಡಿಕೆಯಿರುವ ದೇಶಗಳಿಗೆ ನೀಡಲಾಗಿದೆ. ಇದನ್ನು ಅನೇಕ ವೈದ್ಯರು ಒಪ್ಪಿಕೊಂಡಿದ್ದಾರೆ. ಇವೆಲ್ಲದರ ನೈತಿಕ ಹೊಣೆಗಾರಿಕೆಯಿಂದ ಕಾಂಗ್ರೇಸಿಗರು ಜನತೆಯ ಬಳಿ ಕ್ಷಮೆಯಾಚಿಸಬೇಕು ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಜನರನ್ನು ಲಸಿಕಾ ಕೇಂದ್ರಗಳಿಗೆ ತೆರಳದಂತೆ ವಿವಿಧ ರೀತಿಯ ಹೇಳಿಕೆಯನ್ನು ನೀಡಿ, ಸ್ವತಃ ಕಾಂಗ್ರೇಸ್ ಮುಖಂಡರು ಲಸಿಕೆ ಪಡೆದಿದ್ದಾರೆ. ಕಂಡವರ ಮಕ್ಕಳನ್ನು ಬಾವಿಗೆಸೆದು ಆಳ ನೋಡುವ ಬದಲು ತಾವೇ ಯಾಕೆ ಬಾವಿಗೆ ಹಾರಬಾರದು ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು