10:20 PM Thursday6 - November 2025
ಬ್ರೇಕಿಂಗ್ ನ್ಯೂಸ್
Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ…

ಇತ್ತೀಚಿನ ಸುದ್ದಿ

5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್ ಪ್ರತಿಭಟನೆ

15/01/2025, 17:31

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಜಿಲ್ಲೆಯ ಸಂಡೂರು ತಾಲ್ಲೂಕಿನ ತೋರಣಗಲ್ಲಿನಲ್ಲಿ 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರಗೈದವನನ್ನು ಕೂಡಲೇ ಬಂಧಿಸಲು
ಆಗ್ರಹಿಸಿ ಎಐಎಂಎಸ್ಎಸ್ ಪ್ರತಿಭಟನೆ ನಡೆಸಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಎಐಎಂಎಸ್ಎಸ್ ನ ಜಿಲ್ಲಾಧ್ಯಕ್ಷರಾದ ಕೆ. ಎಂ. ಈಶ್ವರಿ
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡುತ್ತಾ,ಕಾರ್ಖಾನೆಯಲ್ಲಿ ಕೆಲಸಕ್ಕೆಂದು ಜಾರ್ಖಂಡದಿಂದ ತೋರಣಗಲ್ಲಿಗೆ ಬಂದು ನೆಲೆಸಿದ್ದ ದಂಪತಿಯ ಐದು ವರ್ಷದ ಕಂದಮ್ಮ ಮನೆಯ ಬಳಿ ಮಕ್ಕಳೊಂದಿಗೆ
ಆಟವಾಡುತ್ತಿತ್ತು. ಈ ವೇಳೆ ಮಗುವನ್ನು ಪುಸಲಾಯಿಸಿ ಕರೆದೊಯ್ದಿರುವ ದುಷ್ಕರ್ಮಿ ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಲೈಂಗಿಕ ದೌರ್ಜನ್ಯದಿಂದಾಗಿ ಆಂತರಿಕ ಗಾಯಗಳಾಗಿದ್ದು
ತೀವ್ರ ರಕ್ತಸ್ರಾವದಿಂದ ನಲುಗುತ್ತಿದ್ದ ಮಗುವನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅತ್ಯಾಚಾರ ನಡೆದಿರುವುದು ವೈದ್ಯಕೀಯ ಮೂಲಗಳಿಂದ ದೃಢಪಟ್ಟು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿ ಎರಡು ದಿನಗಳಾದರೂ ಕೂಡ ಅತ್ಯಾಚಾರಿಯನ್ನು ಬಂಧಿಸಿಲ್ಲ. ಜಿಲ್ಲಾಡಳಿತ ಈ ಕೂಡಲೇ
ಅತ್ಯಾಚಾರಿಯನ್ನು ಬಂಧಿಸಿ, ಅತ್ಯುಗ್ರ ಶಿಕ್ಷೆಯನ್ನು ಖಾತ್ರಿಪಡಿಸಿ, ಮಗುವಿಗೆ ನ್ಯಾಯ ದೊರಕಿಸಿಕೊಡಬೇಕು ಹಾಗೂ ಮಗುವಿನ ಭವಿಷ್ಯದ ಎಲ್ಲಾ ಜವಾಬ್ದಾರಿಗಳನ್ನು ಸರ್ಕಾರವೇ ಹೊತ್ತುಕೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಎಐಎಂಎಸ್ಎಸ್ ನ ಜಿಲ್ಲಾ ಕಾರ್ಯದರ್ಶಿ ವಿಜಯಲಕ್ಷ್ಮಿ “ಬೆಂಗಳೂರಿನಲ್ಲಿಯೂ ಕೂಡ ಆರು ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ ನಡೆದ ಬಗ್ಗೆ ವರದಿಯಾಗಿದೆ. ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳು ಅವ್ಯಾಹತವಾಗಿ ಹೆಚ್ಚಾಗುತ್ತಿವೆ. ಸಾಮಾಜಿಕ
ಮಾಧ್ಯಮ, ಇಂಟರ್ನೆಟ್, ಟಿವಿಗಳ ಮೂಲಕ ಹರಿದಾಡುತ್ತಿರುವ ಅಶ್ಲೀಲ ಸಿನಿಮಾ-ಸಾಹಿತ್ಯ ಮತ್ತು ಮದ್ಯ ಮಾದಕ ವಸ್ತುಗಳು ಇಂತಹ ಅಪರಾಧಗಳಿಗೆ ಕಾರಣವಾಗುತ್ತಿವೆ. ಇನ್ನೊಂದೆಡೆ ಸಮಾಜದಲ್ಲಿ ನೈತಿಕ ಮೌಲ್ಯಗಳು ಕುಸಿಯುತ್ತಿವೆ. ಈ ಸಾಂಸ್ಕೃತಿಕ ಅಧಪತನದಿಂದಾಗಿ ವಿದ್ಯಾರ್ಥಿ- ಯುವಜನರು ಇಂತಹ ಹೀನ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದಾರೆ.

ಪ್ರಪಂಚವರಿಯದ ಪುಟ್ಟ ಕಂದಮ್ಮನ ಮೇಲೂ ಕ್ರೌರ್ಯ ಎಸಗುವ ಪಶುತ್ವದ ಮಟ್ಟಕ್ಕೆ ತಲುಪುತ್ತಿದ್ದಾರೆ. ಈ ಎಲ್ಲದಕ್ಕೂ ನೈತಿಕ ಜವಾಬ್ದಾರರಾಗಿರುವ ಸರ್ಕಾರಗಳು ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷಿತ ವಾತಾವರಣವನ್ನು ಕಲ್ಪಿಸಬೇಕು, ಅಶ್ಲೀಲ ಸಿನಿಮಾ-
ಸಾಹಿತ್ಯಗಳನ್ನು ನಿಷೇಧಿಸಬೇಕು,ಅಪರಾಧಿಗಳಿಗೆ ನಿದರ್ಶನೀಯ ಶಿಕ್ಷೆ ಖಾತ್ರಿಪಡಿಸಿ ಮತ್ತೆ ಇಂತಹ ಅಪರಾಧಗಳು ಮರುಕಳಿಸದಂತೆ ಕ್ರಮ
ಕೈಗೊಳ್ಳಬೇಕು ಎಂದು ಅವರು ಹೇಳಿದರು.
ಪ್ರತಿಭಟನೆಯಲ್ಲಿ ಎಐಎಂಎಸ್ಎಸ್ ನ ಪದಾಧಿಕಾರಿಗಳಾದ ಪದ್ಮಾ, ವಿದ್ಯಾ, ಗಿರಿಜಾ, ಸೌಮ್ಯ ಹಾಗೂ ವಿವಿಧ ಕಾಲೇಜಿನ ವಿದ್ಯಾರ್ಥಿನಿಯರು ಭಾಗವಹಿಸಿದ್ದರು ಎಂದು ಎಐಎಂಎಸ್ಎಸ್ ನ ಜಿಲ್ಲಾ ಜಂಟಿ ಕಾರ್ಯದರ್ಶಿ ವಿದ್ಯಾವತಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು