6:31 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಸಂಕಟ ಬಂದಾಗ ವೆಂಕಟರಮಣ: ಕುರ್ಚಿಗೆ ಕಂಟಕ ಬಂದಾಗಲೆಲ್ಲ ಸಿಎಂ ಸಿದ್ದರಾಮಯ್ಯರಿಗೆ ಜಾತಿ ಜನಗಣತಿ ನೆನಪಾಗುತ್ತಿದೆಯಾ?

15/01/2025, 17:59

ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿ ಗಣತಿಯನ್ನು ರಾಜಕೀಯ ಅಸ್ತ್ರವಾಗಿ ಬಳಸಿಕೊಳ್ಳುತ್ತಿದ್ದಾರೆಯೇ? ತನ್ನ ಕುರ್ಚಿಗೆ ಸಂಚಿಕಾರ ಬಂದಾಗಲೆಲ್ಲ ಜಾತಿ ಜನಗಣತಿಯನ್ನು ದಾಳವಾಗಿ ಉಪಯೋಗಿಸುತ್ತಿದ್ದಾರೆಯೇ ? ಎಂಬ ಪ್ರಶ್ನೆಗಳು ರಾಜಕೀಯ ವಲಯದಲ್ಲಿ ಕೇಳಿ ಬರತೊಡಗಿವೆ. ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರು ಈ ಕುರಿತು ಪ್ರತಿಕ್ರಿಯಿಸಿದ್ದಾರೆ.
ಜಾತಿ ಜನಗಣತಿ ಬಗ್ಗೆ ಪ್ರತಿಪಕ್ಷ ಬಿಜೆಪಿಗಾಗಲಿ ಅಥವಾ ತನಗಾಗಲಿ ಯಾವ ತಕರಾರು ಇಲ್ಲ ಅಥವಾ ವಿರೋಧವೂ ಇಲ್ಲ. ಆದರೆ ರಾಜಕೀಯವಾಗಿ ಜಾತಿ ಜನಗಣತಿಯನ್ನು ದಾಳವಾಗಿ ಬಳಸಿಕೊಳ್ಳುವುದಕ್ಕೆ ನಮ್ಮ ವಿರೋಧವಿದೆ ಎಂದು ಆರ್. ಅಶೋಕ್ ಹೇಳಿದ್ದಾರೆ.
ನಾಳಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ವರದಿ ಚರ್ಚೆಯಾಗುತ್ತಿದೆ ಎಂಬ ಸುದ್ದಿಗಳು ಹರಿದಾಡುತ್ತಿರುವ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ‘ಆತ್ಮಸಾಕ್ಷಿ’ಗೆ ಕೆಲವು ಪ್ರಶ್ನೆಗಳನ್ನು ಆಶೋಕ್ ಅವರು ಕೇಳಿದ್ದಾರೆ.

1.) ತಮಗೆ ನಿಜವಾಗಿಯೂ ಜಾತಿಗಣತಿಯ ಬಗ್ಗೆ ಬದ್ಧತೆ ಇದ್ದಿದ್ದರೆ, 2018ರಲ್ಲೇ ಕಾಂತರಾಜು ವರದಿಯನ್ನ ಏಕೆ ಸ್ವೀಕರಿಸಿ ಜಾರಿ ಮಾಡಲಿಲ್ಲ?

2.) ಹತ್ತು ವರ್ಷಗಳ ಹಿಂದೆ ಕೈಗೊಂಡ ಜಾತಿ ಜನಗಣತಿ ವೈಜ್ಞಾನಿಕವಾಗಿ ನಡೆದಿಲ್ಲ, ಅನೇಕ ಜನರ ಮನೆಗಳಿಗೆ ಭೇಟಿಯೇ ನೀಡಿಲ್ಲ ಎಂಬ ದೂರುಗಳಿವೆ. ಹೀಗಿರುವಾಗ ಈ ವರದಿಯನ್ನ ಈಗ ಮುನ್ನೆಲೆಗೆ ತರುವ ತರಾತುರಿ ಏಕೆ?

3.) ಈ ಅವೈಜ್ಞಾನಿಕ ಜಾತಿ ಜನಗಣತಿ ವರದಿ ಸ್ವೀಕರಿಸದಂತೆ ಒಕ್ಕಲಿಗರ ಸಂಘ ಮನವಿ ಸಲ್ಲಿಸಿದೆ. ಇದನ್ನ ಬೆಂಬಲಿಸಿ ಸ್ವತಃ ಉಪಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಅವರೇ ಸಹಿ ಮಾಡಿದ್ದಾರೆ. ತಮ್ಮದೇ ಪಕ್ಷದ ಹಿರಿಯ ನಾಯಕರು, ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ
ಶಾಮನೂರು ಶಿವಶಂಕರಪ್ಪನವರೂ ಸಹ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಅನೇಕ ಮಠಾಧೀಶರು, ಧಾರ್ಮಿಕ ಮುಖಂಡರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಿರುವಾಗ ಕಳೆದ 20 ತಿಂಗಳಿನಿಂದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಂದು ಸರ್ವಸಮ್ಮತವಾದ ನಿಲುವಿಗೆ ಬರುವ ಬದಲು ಈಗ ದಿಢೀರನೆ ಏಕಾಏಕಿ ವರದಿಯನ್ನ ಸಂಪುಟ ಸಭೆಯಲ್ಲಿ ಚರ್ಚೆಗೆ ಎತ್ತಿಕೊಳ್ಳುತ್ತಿರುವುದು ಯಾವ ಕಾರಣಕ್ಕೆ?

5.) ಡಿಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಆಗಿದೆ ಎನ್ನಲಾದ ಅಧಿಕಾರ ಹಂಚಿಕೆ ಒಪ್ಪಂದವನ್ನ ಹೇಗಾದರೂ ಮಾಡಿ ಮುಂದೂಡಲು, ಅಧಿಕಾರ ಹಂಚಿಕೆ ಒಪ್ಪಂದದಿಂದ ತಪ್ಪಿಸಿಕೊಳ್ಳಲು ಜಾತಿ ಜನಗಣತಿ ವರದಿಯನ್ನು ತಂತ್ರವಾಗಿ ಬಳಸಿಕೊಳ್ಳಲಾಗುತ್ತಿದೆಯೇ?

6.) ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮುಡಾ ಹಗರಣ, ಅಬಕಾರಿ ಇಲಾಖೆ ಹಗರಣ, ಕಂಟ್ರಾಕ್ಟರ್ ಗಳ ಕಮಿಷನ್ ಆರೋಪ, ಪ್ರಮನಿಯಲ್ ಅಧಿಕಾರಿಗಳು, ಗುತ್ತಿಗೆದಾರರ ಸರಣಿ ಆತ್ಮಹತ್ಯೆ ಈ ರೀತಿ ಸಾಲು ಸಾಲು ವಿವಾದಗಳು, ಕಳಂಕಗಳ ಸುಳಿಯಲ್ಲಿ ಮುಜುಗರ ಅನುಭವಿಸುತ್ತಿರುವ ಪರಿಸ್ಥಿತಿಯಿಂದ ಜನರ ಗಮನ ಬೇರೆಡೆ ಸೆಳೆಯಲು ಜಾತಿಗಣತಿ ವರದಿಯನ್ನ ಒಂದು ದಾಳವಾಗಿ ಬಳಸಲಾಗುತ್ತಿದೆಯೇ?

7.) ದೆಹಲಿ ವಿಧಾನಸಭೆ ಚುನಾವಣೆಯ ಪ್ರಚಾರದಲ್ಲಿ ಬಳಸಿಕೊಳ್ಳಲು ಜಾತಿ ಗಣತಿ ವರದಿಯನ್ನು ಮುನ್ನೆಲೆಗೆ ತರಲಾಗುತ್ತಿದೆಯೇ?

8.) ಜಾತಿಗಣತಿಯನ್ನ ರಾಜಕೀಯ ದಾಳವಾಗಿ ಬಳಸುವುದು ದಲಿತರಿಗೆ, ಹಿಂದುಳಿದ ವರ್ಗಗಳಿಗೆ, ತಳ ಸಮುದಾಯಗಳಿಗೆ ಮಾಡುವ ಅಪಮಾನವಲ್ಲವೇ? ಸಾಮಾಜಿಕ ನ್ಯಾಯವೆಂಬ ಪವಿತ್ರ ಪರಿಕಲ್ಪನೆಯನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುವುದು ಆತ್ಮವಂಚನೆಯಲ್ಲವೇ?

9.) ಜಾತಿ ಜನಗಣತಿ ವರದಿಯ ದತ್ತಾಂಶಗಳು ಮಾಧ್ಯಮಗಳಲ್ಲಿ ಸೋರಿಕೆಯಾಗಲು ಕಾರಣವೇನು? ಇದು ಸರ್ಕಾರದ ಲೋಪವೋ ಅಥವಾ ಉದ್ದೇಶಪೂರ್ವಕವಾಗಿಯೇ ವರದಿಯ ಅಂಕಿ-ಅಂಶಗಳನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಲಾಗುತ್ತಿದೆಯೇ?

ನಾಳೆ, ಜನವರಿ 16ರಂದು ನಡೆಯುವ ಸಂಪುಟ ಸಭೆಗೂ ಮುನ್ನ ಮುಖ್ಯಮಂತ್ರಿಗಳ ‘ಆತ್ಮಸಾಕ್ಷಿ’ ಈ ಪ್ರಶೆಗಳನ್ನ ಆತ್ಮಾವಲೋಕನ ಮಾಡಿಕೊಂಡು ಉತ್ತರ ನೀಡಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು