ಇತ್ತೀಚಿನ ಸುದ್ದಿ
ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ ಜಮೀರ್ ಅಹಮದ್ ಖಾನ್
15/01/2025, 18:55
ಬೆಂಗಳೂರು(reporterkarnataka.com):ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ನಡೆದ ಹಸುವಿನ ಕೆಚ್ಚಲು ಕೊಯ್ದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಹಸುವಿನ ಮಾಲೀಕ ಕರ್ಣ ಅವರ ತಾಯಿ ಸವರಿ ಅಮ್ಮಳ್, ಸಹೋದರಿ ಅಮುದಾ ಅವರಿಗೆ ಸಚಿವ ಜಮೀರ್ ಅಹಮದ್ ಖಾನ್ ಅವರು 3 ಲಕ್ಷ ರೂ. ವೆಚ್ಚದಲ್ಲಿ ಮೂರು ಹಸು ಖರೀದಿಸಿ ನೀಡಿದರು.
ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕೆಎಂಡಿಸಿ ಅಧ್ಯಕ್ಷ ಅಲ್ತಾಫ್ ಖಾನ್, ಮುಖಂಡರಾದ ಅತುಶ್, ಗೌಸಿ, ವಿನಾಯಕ್, ಪ್ರಸಾದ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಅಮುದಾ, ಹಸು ನಿರಾಕರಿಸಿದ ನನ್ನ ಸಹೋದರನ ಪರವಾಗಿ ನಾನು ಕ್ಷಮೆ ಕೋರುತ್ತೇನೆ. ಜಮೀರಣ್ಣ ಅವರು ಒಳ್ಳೆ ಮನಸ್ಸಿನಿಂದ ಹಸು ಕೊಡಿಸಿದ್ದಾರೆ. ಕೆಲವರು ಇದರಲ್ಲಿ ರಾಜಕಾರಣ ಮಾಡುತ್ತಿದ್ದು, ನಾವು ಶಾಸಕರ ಜತೆ ಇದ್ದೇವೆ ಎಂದು ಹೇಳಿದರು.