12:11 AM Wednesday15 - January 2025
ಬ್ರೇಕಿಂಗ್ ನ್ಯೂಸ್
ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ…

ಇತ್ತೀಚಿನ ಸುದ್ದಿ

ಕುಮಾರಸ್ವಾಮಿ ಬೇಡಿಕೆಯಂತೆ ರಾಜ್ಯ ಸರಕಾರ ಹೊಸ ಇನ್ನೋವಾ ಹೈಕ್ರಾಸ್ ವಾಹನ ನೀಡಿದೆ: ರಮೇಶ್ ಬಾಬು

16/01/2025, 00:05

ಬೆಂಗಳೂರು(reporterkarnataka.com): ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಹಿಂದಿನ ಇನ್ನೋವಾ ಕ್ರಿಸ್ಟಾ ಕಾರನ್ನು ಬಳಸಲು ನಿರಾಕರಿಸಿ ಹೊಸ ಇನ್ನೋವಾ ಹೈಕ್ರಾಸ್ ಕಾರಿಗೆ ಬೇಡಿಕೆ ಸಲ್ಲಿಸಿದ್ದು, KA 59 G 0099 ಕಾರು ಹಂಚಿಕೆ ಆಗಿರುತ್ತದೆ. ಇದರ ಜೊತೆಗೆ ಕೆಲವು ಸಿಬ್ಬಂದಿಯನ್ನು ಎರವಲು ಸೇವೆಯ ಮೇಲೆ ರಾಜ್ಯ ಸರ್ಕಾರದಿಂದ ಪಡೆದುಕೊಂಡಿರುತ್ತಾರೆ. ಆದರೆ ಇಂತಹ ವಿಚಾರಗಳನ್ನು ಇಟ್ಟುಕೊಂಡು ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್ ನಾಯಕರನ್ನು ಟೀಕಿಸುವ ಮೂಲಕ ತಮ್ಮ ನಾಯಕತ್ವಕ್ಕೆ ಅವರೇ ಮಸಿ ಬಳೆದುಕೊಳ್ಳುತ್ತಿದ್ದಾರೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಾಧ್ಯಮ ವಿಭಾಗ ಅಧ್ಯಕ್ಷ ರಮೇಶ್ ಬಾಬು ಹೇಳಿದ್ದಾರೆ.
ಕೇಂದ್ರ ಬಿಜೆಪಿ ಸರಕಾರದ ಬೃಹತ್ ಕೈಗಾರಿಕಾ ಸಚಿವರಾಗಿರುವ ಎಚ್.ಡಿ.ಕುಮಾರಸ್ವಾಮಿ ಅವರು ಕರ್ನಾಟಕ ರಾಜ್ಯ ಸರ್ಕಾರ ತಮಗೆ ಶಿಷ್ಟಾಚಾರಕ್ಕೆ ಅನುಗುಣವಾಗಿ ನಿಗದಿತ ಸಮಯದಲ್ಲಿ ಹೊಸ ಕಾರನ್ನು ನೀಡಲಿಲ್ಲ ಎಂದು ಆರೋಪಿಸಿರುತ್ತಾರೆ. ಕೇಂದ್ರದಲ್ಲಿ ಸಂಪುಟ ದರ್ಜೆಯ ಸಚಿವ ಸ್ಥಾನ ಪಡೆದು ಆರು ತಿಂಗಳು ಕಳೆದರೂ ಇಲ್ಲಿಯವರೆಗೆ ರಾಜ್ಯದ ಅಭಿವೃದ್ಧಿಗೆ ಕುಮಾರಸ್ವಾಮಿ ನೀಡಿರುವ ಕೊಡುಗೆ ಶೂನ್ಯ. ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳಲು ಸಣ್ಣ ಸಣ್ಣ ವಿಷಯಗಳನ್ನು ಸಾರ್ವಜನಿಕವಾಗಿ ಪ್ರಸ್ತಾಪಿಸಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿಚರಾದ ಕೃಷ್ಣ ಬೈರೇಗೌಡ, ಚೆಲುವರಾಯ ಸ್ವಾಮಿ ಮತ್ತು ಇತರರನ್ನು ಟೀಕಿಸುತ್ತಾ
ಪ್ರಚಾರ ಪಡೆಯಲು ಮುಂದಾಗಿದ್ದಾರೆ ಎಂದು ರಮೇಶ್ ಬಾಬು ಟೀಕಿಸಿದ್ದಾರೆ.
ರಾಜ್ಯ ಸರ್ಕಾರದ ವತಿಯಿಂದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಅವರ ಅಪೇಕ್ಷೆಯಂತೆ ಹೊಸ ಟೊಯೋಟಾ ಇನ್ನೋವಾ ಹೈಕ್ರಾಸ್ ವಾಹನ ಹಂಚಿಕೆ ಆಗಿರುತ್ತದೆ. ಮಂಡ್ಯ ಜಿಲ್ಲಾಧಿಕಾರಿಗಳು ಹೊಸ ಕಾರನ್ನು ಪಡೆಯಲು ಕೇಂದ್ರ ಸಚಿವರನ್ನು ಕೋರಿದ್ದು, ಧನುರ್ ಮಾಸದ ಕಾರಣ ನೀಡಿ ಸಂಕ್ರಾಂತಿಯ ನಂತರ ಹೊಸ ಕಾರು ಪಡೆಯುವುದಾಗಿ ತಿಳಿಸಿರುತ್ತಾರೆ. ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ 04-11-2024 ರಲ್ಲಿ ಹೆಚ್.ಡಿ.ಕುಮಾರಸ್ವಾಮಿ‌ ಅವರ ಹೊಸ ವಾಹನದ ಪ್ರಸ್ತಾಪಕ್ಕೆ ಅನುಗುಣವಾಗಿ ಆರ್ಥಿಕ ಇಲಾಖೆಗೆ ಪತ್ರ ಬರೆದಿರುತ್ತಾರೆ. ಕರ್ನಾಟಕದ ಸುಮಾರು 6 ಸಂಸದರಿಗೆ ಆರ್ಥಿಕ ಮಿತಿಯೊಳಗೆ ವಾಹನಗಳನ್ನು ಖರೀದಿಸಲು ಆರ್ಥಿಕ ಇಲಾಖೆ ಅನುಮೋದನೆ ನೀಡಿದ್ದು, ಅದಕ್ಕೆ ಅನುಗುಣವಾಗಿ ವಾಹನ ಖರೀದಿ ಮಾಡಿ, ಹೊಸ ಕಾರು ಪಡೆಯಲು ಮಾಹಿತಿ ನೀಡಲಾಗಿರುತ್ತದೆ.
ರಾಜ್ಯದ 2023ರ ವಿಧಾನಸಭೆಯ ಚುನಾವಣೆಯ ಫಲಿತಾಂಶದ ನಂತರ ಕುಮಾರಸ್ವಾಮಿ ಅವರು ಪದೇ ಪದೇ ವ್ಯಕ್ತಿಗತ ಟೀಕೆಗಳಿಗೆ ಮುಂದಾಗುವುದರ ಮೂಲಕ ತಮ್ಮ ಹತಾಶ ಭಾವನೆಯನ್ನು ತೋರುತ್ತಿದ್ದಾರೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಅವರು ತಮಗೆ ದೊರೆತಿರುವ ಅವಕಾಶಗಳನ್ನು ಬಳಸಿಕೊಂಡು ರಾಜ್ಯದ ಅಭಿವೃದ್ಧಿಗೆ ಮುಂದಾಗಲಿ. ಇಂತಹ ಸಾರ್ವಜನಿಕ ಪ್ರಾಮುಖ್ಯತೆ ಇಲ್ಲದ ವಿಷಯಗಳನ್ನು ಪ್ರಸ್ತಾಪಿಸಿ ಮುಜುಗರಕ್ಕೆ ಒಳಗಾಗುವ ಬದಲು, ಆರೋಗ್ಯಕರ ಚರ್ಚೆಗಳಿಗೆ ಒತ್ತು ನೀಡಿ ರಾಜ್ಯದ ಅಭಿವೃದ್ಧಿಗೆ ಮುಂದಾಗಲಿ ರಮೇಶ್ ಬಾಬು ಕಿವಿಮಾತು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು