7:10 PM Thursday16 - January 2025
ಬ್ರೇಕಿಂಗ್ ನ್ಯೂಸ್
ಕುರ್ಚಿಗಾಗಿ ಕಾದಾಟದಲ್ಲೇ ಎಲ್ಲರೂ ಮಗ್ನ, ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ: ಪ್ರತಿಪಕ್ಷ… ಕೆಎಎಸ್‌ ಪೂರ್ವಭಾವಿ ಮರುಪರೀಕ್ಷೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್… ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ 6 ಬಾರಿ ಚಾಕು ಇರಿತ: ಮುಂಜಾನೆ… ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ…

ಇತ್ತೀಚಿನ ಸುದ್ದಿ

ಕರ್ನಾಟಕ ಜಂಗಲ್ ರಾಜ್ ಆಗಿದೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪ

16/01/2025, 18:48

ಬೆಂಗಳೂರು(reporterkarnataka.com): ರಾಜ್ಯದಲ್ಲಿ ದಿನನಿತ್ಯ ಹಗಲು ದರೋಡೆ, ಪುಟ್ಟ ಮಕ್ಕಳ ಮೇಲೆ ಅತ್ಯಾಚಾರದಂತ ಅಪರಾಧ‌ ಕೃತ್ಯಗಳು ರಾಜಾರೋಷವಾಗಿ ನಡೆಯುತ್ತಿದ್ದು, ಅಪರಾಧ ಮಾಡುವವರಿಗೆ ಯಾರದೇ ಭಯವಿಲ್ಲದಂತಾಗಿದೆ. ಇದರಿಂದ ಕರ್ನಾಟಕ ಜಂಗಲ್ ರಾಜ್ಯ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಈ ಕುರಿತು ಎಕ್ಸ್ ಮಾಡಿರುವ ಅವರು, ಬೀದರನಲ್ಲಿ ಹಾಡ ಹಗಲೇ ಎಟಿಎಂಗೆ ಹಣ ತುಂಬಲು ಬಂದವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿರುವುದು ರಾಜ್ಯವೇ ಬೆಚ್ಚಿ ಬೀಳುವಂತೆ ಮಾಡಿದೆ. ಆಡಳಿತ ನಡೆಸುವವರು ಕುರ್ಚಿಗಾಗಿ ಕಿತ್ತಾಟ ನಡೆಸುವುದರಲ್ಲಿ ನಿರತರಾಗಿದ್ದು, ಸರ್ಕಾರಕ್ಕೆ ಪೊಲೀಸರ ಮೇಲೆ ನಿಯಂತ್ರಣ ಇಲ್ಲದಂತಾಗಿದೆ. ಪೊಲಿಸರಿಗೆ ಕ್ರಿಮಿನಲ್ ಗಳ ಮೇಲೆ ನಿಯಂತ್ರಣ ಇಲ್ಲದಂತಾಗಿದ್ದು, ಕರ್ನಾಟಕ ಜಂಗಲ್ ರಾಜ್ಯ ಆಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಈ ಸರ್ಕಾರದ ಅವಧಿಯಲ್ಲಿ ಮೂಕ ಪ್ರಾಣಿಗಳು, ಮನುಷ್ಯರು ಯಾರಿಗೂ ರಕ್ಷಣೆ ಇಲ್ಲದಂತಾಗಿದೆ. ರಾಜ್ಯ ಸರ್ಕಾರ ತಪ್ಪಿತಸ್ಥರ ಮೇಲೆ ಕೂಡಲೇ ಕ್ರಮ ಕೈಗೊಂಡು ಕಠಿಣ ಶಿಕ್ಷೆ ನೀಡಬೇಕು. ಇಲ್ಲದಿದ್ದರೆ ರಾಜ್ಯದ ಜನರು ದಂಗೆ ಏಳುತ್ತಾರೆ ಎಂದು ಎಚ್ಚರಿಸಿದ್ದಾರೆ.
*ತುಂಗಭದ್ರಾ ನೀರು ಪರೀಕ್ಷೆಗೆ ಆಗ್ರಹ:*
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಬಳಿ ತುಂಗಭದ್ರಾ ನೀರು ಹಸಿರು ಬಣ್ಣಕ್ಕೆ ತಿರುಗಿದ್ದು ಸುತ್ತಲಿನ ಜನರ ಆತಂಕಕ್ಕೆ ಕಾರಣವಾಗಿದೆ. ನದಿಯ ನೀರು ಹಸಿರು ಬಣ್ಣಕ್ಕೆ ತಿರುಗಲು ಹೊರಗಡೆಯಿಂದ ಕಲುಷಿತ ನೀರು ಅಥವಾ ರಸಾಯನಿಕ ನದಿಗೆ ಸೇರ್ಪಡೆಯಾಗುತ್ತಿರುವ ಕುರಿತು ಜಿಲ್ಲಾಡಳಿತ ತಕ್ಷಣೆ ಪತ್ತೆ ಹಚ್ಚುವ ಕೆಲಸ ಮಾಡಬೇಕು.
ಜಿಲ್ಲಾಧಿಕಾರಿಗಳು ಕೂಡಲೇ ನೀರನ್ನು ತಪಾಸಣೆಗೆ ಕಳುಹಿಸಿಕೊಡಬೇಕು. ಅಲ್ಲದೇ ನದಿಯ ನೀರನ್ನು ಯಾರೂ ಜನ ಜಾನುವಾರುಗಳಿಗೆ ಬಳಸದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗಬೇಕು ಎಂದು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು