6:19 AM Sunday5 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಬಳ್ಳಾರಿ: ತಪ್ಪಿಸಿಕೊಳ್ಳಲು ಯತ್ನಿಸಿದ ಪೋಕ್ಸೊ ಆರೋಪಿಗೆ ಗುಂಡೇಟು; ಆಸ್ಪತ್ರೆಗೆ ದಾಖಲು

16/01/2025, 19:05

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಪಂಚನಾಮೆ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಪೋಕ್ಸೊ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ‌.
ಆರೋಪಿಯನ್ನು ಕಮಲಾಪುರದ ಮಂಜುನಾಥ್ ಎಂದು ಗುರುತಿಸಲಾಗಿದ್ದು, ಸದ್ಯ ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ( ವಿಮ್ಸ್)ಕ್ಕೆ ದಾಖಲಿಸಲಾಗಿದೆ.

ಆರೋಪಿ ಮಂಜುನಾಥ ಇತ್ತೀಚೆಗೆ ತೋರಣಗಲ್ಲದಲ್ಲಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ತಲೆಮರೆಸಿಕೊಂಡಿದ್ದ. ಬುಧವಾರ ರಾತ್ರಿ ಆತನನ್ನು ತೋರಣಗಲ್ಲಿನಲ್ಲಿ ಬಂಧಿಸಲಾಗಿತ್ತು.
ಗುರುವಾರ ಮುಂಜಾನೆ ಆತನನ್ನು ಪಂಚನಾಮೆ ಕರೆದೊಯ್ಯಲಾಯಿತು. ಈ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಆತ ಯತ್ನಿಸಿದ್ದ ಎನ್ನಲಾಗಿದೆ. ಆಗ ಸಿಬ್ಬಂದಿ ಆರೋಪಿ ಕಾಲಿಗೆ ಗುಂಡಿನೇಟು ಹೊಡೆಯಬೇಕಾಯಿತು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ವಿ.ಜೆ. ತಿಳಿಸಿದ್ದಾರೆ.
ಅತ್ಯಾಚಾರ ಪ್ರಕರಣ ಬಯಲಾದ ಬಳಿಕ ಆರೋಪಿಯ ಸಿಸಿಟಿವಿ ದೃಶ್ಯಾವಳಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು