1:39 AM Saturday15 - November 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್

ಇತ್ತೀಚಿನ ಸುದ್ದಿ

ಮಂಗಳೂರು: ಇಂದಿನಿಂದ ಕರ್ನಾಟಕ ಕ್ರೀಡಾಕೂಟ ಆರಂಭ: ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

17/01/2025, 07:13

ಮಂಗಳೂರು (reporterkarnataka.com): ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಡಳಿತ, ಕರ್ನಾಟಕ ಒಲಿಂಪಿಕ್ ಸಂಸ್ಥೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾದ ಕರ್ನಾಟಕ ಕ್ರೀಡಾಕೂಟ 2025 ಜ. 17 ರಿಂದ 23ರ ವರೆಗೆ ಮಂಗಳೂರು ಮತ್ತು ಉಡುಪಿಯಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 17ರಂದು ಸಂಜೆ 5 ಗಂಟೆಗೆ ನಗರದ ಮಂಗಳಾ ಕ್ರೀಡಾಂಗಣದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕ್ರೀಡಾ ಜ್ಯೋತಿ ಪ್ರಜ್ವಲಿಸಿ, ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಕ್ರೀಡಾ ಧ್ವಜಾರೋಹಣ ನೆರವೇರಿಸಲಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ವಿಧಾನ ಪರಿಷತ್ ಶಾಸಕ ಹಾಗೂ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಡಾ. ಕೆ. ಗೋವಿಂದರಾಜ್ ಅವರ ಉಪಸ್ಥಿತಿಯಲ್ಲಿ ಶಾಸಕ ಡಿ. ವೇದವ್ಯಾಸ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮಂಗಳೂರಿನಲ್ಲಿ ಕ್ರೀಡೆಗಳಾದ ಬ್ಯಾಡ್ಮಿಂಟನ್, ಬಾಸ್ಕೆಟ್‍ಬಾಲ್, ಫೆನ್ಸಿಂಗ್ (ಕತ್ತಿವರಸೆ) ಫುಟ್ಬಾಲ್, ಹ್ಯಾಂಡ್‍ಬಾಲ್, ಖೋಖೋ, ನೆಟ್ಬಾಲ್, ಈಜು, ಟೇಕ್ವೊಂಡೋ, ವಾಲಿಬಾಲ್, ವೇಯ್ಟ್ ಲಿಫ್ಟಿಂಗ್, ವುಶು ಕ್ರೀಡಾಕೂಟ ಆಯೋಜಿಸಲಾಗಿದೆ.
ಆರ್ಚರಿ(ಬಿಲ್ಲುಗಾರಿಕೆ), ಅಥ್ಲೆಟಿಕ್ಸ್ , ಬಾಕ್ಸಿಂಗ್, ಸೈಕ್ಲಿಂಗ್, ಜುಡೋ, ಕಬಡ್ಡಿ, ಕುಸ್ತಿ, ಕಯಾಕಿಂಗ್ ಮತ್ತು ಕನೋಯಿಂಗ್ ಕ್ರೀಡೆಗಳನ್ನು ಉಡುಪಿ ಜಿಲ್ಲೆಯಲ್ಲಿ ಆಯೋಜನೆಗೊಂಡಿದ್ದು ಹಾಕಿ, ಲಾನ್ ಟೆನ್ನಿಸ್, ಟೇಬಲ್ ಟೆನ್ನಿಸ್ ಕ್ರೀಡೆಗಳನ್ನು ಮಣಿಪಾಲದಲ್ಲಿ ಆಯೋಜಿಸಲಾಗಿದೆ.
ಕ್ರೀಡಾಕೂಟದ ಸಮಾರೋಪ ಸಮಾರಂಭ ಉಡುಪಿಯ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಜನವರಿ 23 ರಂದು ಸಂಜೆ 4:30 ಗಂಟೆಗೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು