8:37 PM Wednesday13 - May 2026
ಬ್ರೇಕಿಂಗ್ ನ್ಯೂಸ್
ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ… ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ ಶೇ. 1.50ರಷ್ಟು ಹೆಚ್ಚಳ: ಸರ್ಕಾರದ…

ಇತ್ತೀಚಿನ ಸುದ್ದಿ

ಕೋಟೆಕರ್ ಸಹಕಾರಿ ಸಂಘ ದರೋಡೆ: ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಮುಖ್ಯಮಂತ್ರಿ ತುರ್ತು ಸಭೆ; ಆರೋಪಿಗಳ ಶೀಘ್ರ ಬಂಧನಕ್ಕೆ ಖಡಕ್ ಸೂಚನೆ

17/01/2025, 18:03

*ತಪ್ಪಿಸಿಕೊಂಡ ಆರೋಪಿಗಳು: ಸಿ.ಎಂ ಗರಂ*

*ಎಲ್ಲಾ ಟೋಲ್ ಗಳಲ್ಲಿ ತಪಾಸಣೆ: ಕೇರಳ ಗಡಿಯಲ್ಲಿನ ಸಿಸಿ ಕ್ಯಾಮರಾಗಳ ಪರಿಶೀಲನೆಗೆ ಸೂಚನೆ*

ಮಂಗಳೂರು(reporterkarnataka.com): ಕೋಟೆಕರ್ ವ್ಯವಸಾಯ ಸೇವಾ ಸಹಕಾರಿ ಸಂಘ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿಗಳು ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ ನೀಡಿದರು.
ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಪಶ್ಚಿಮ ರೇಂಜ್ ನ ಐಜಿ ಅಮಿತ್, ಪೊಲೀಸ್ ಆಯುಕ್ತ ಸಿಂಗ್, ಅನುಪಮ್ ಅಗರವಾಲ್, ಎಸ್.ಪಿ ಯತೀಶ್ , ಡಿವೈಎಸ್ ಪಿ ಸೇರಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು.
ಘಟನೆಯ ಕುರಿತಂತೆ ಸಮಗ್ರ ಮಾಹಿತಿ ಪಡೆದ ಮುಖ್ಯಮಂತ್ರಿಗಳು, ನೀವೆಲ್ಲಾ ಇದ್ದು ಯಾಕೆ ಹೀಗಾಯ್ತು? ಆರೋಪಿಗಳು ಸಲೀಸಾಗಿ ತಪ್ಪಿಸಿಕೊಂಡು ಹೋಗಿದ್ದು ಹೇಗೆ ? ಎಷ್ಟು ಟೋಲ್ ಗಳನ್ನು ದಾಟಿ ಹೋಗಿದ್ದಾರೆ. ನೀವು ಟೋಲ್ ಗಳನ್ನು‌ ಏಕೆ ಟೈಟ್ ಮಾಡಲಿಲ್ಲ ಎಂದು ಗರಂ ಆಗಿ ಪ್ರಶ್ನಿಸಿದರು.
ಸಹಕಾರಿ ಬ್ಯಾಂಕ್ ನಲ್ಲಿ ಭದ್ರತಾ ಸಿಬ್ಬಂದಿ ಇರಲಿಲ್ಲ. ಐದಾರು ಮಂದಿ ಮಾತ್ರ ಬ್ಯಾಂಕ್ ಸಿಬ್ಬಂದಿ ಇದ್ದರು. ಆರೋಪಿಗಳು ಕನ್ನಡ ಮತ್ತು ಹಿಂದಿಯಲ್ಲಿ ಮಾತಾಡಿರುವುದು ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು.‌
ಎಲ್ಲಾ ಟೋಲ್ ಗಳಲ್ಲೂ ಬಿಗಿ ತಪಾಸಣೆ ನಡೆಸಬೇಕು. ನಾಲ್ಕು ಜಿಲ್ಲೆಗಳ ವ್ಯಾಪ್ತಿಯಲ್ಲಿ ನಾಕಾಬಂಧಿ ಹಾಕಿ ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮಕ್ಕೆ ಒಪ್ಪಿಸಿ ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು