ಇತ್ತೀಚಿನ ಸುದ್ದಿ
ನಂಜನಗೂಡು: ಅಮರಶಿಲ್ಪಿ ಜಕಣಾಚಾರ್ಯರ ಸಂಸ್ಮರಣ ದಿನಾಚರಣೆ
17/01/2025, 19:55
ಮೋಹನ್ ನಂಜನಗೂಡು ಮೈಸೂರು
info.reporterkarnataka@gmail.com
ಶ್ರೀ ವಿರಾಟ್ ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘ ನಂಜನಗೂಡು ತಾಲೂಕು ಘಟಕದ ವತಿಯಿಂದ ಅಮರಶಿಲ್ಪಿ ಜಕಣಾಚಾರ್ಯರ ಸಂಸ್ಮರಣ ದಿನಾಚರಣೆ ಮತ್ತು ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ನಗರದ ಮಹದೇಶ್ವರ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ದರ್ಶನ್ ಧ್ರುವನಾರಾಯಣ್ ಸೇರಿದಂತೆ ವೇದಿಕೆ ಮೇಲಿನ ಗಣ್ಯರು, ದೀಪ ಬೆಳಗಿಸುವ ಮೂಲಕ ನೆರವೇರಿಸಿದರು.
ಇದೇ ಸಂದರ್ಭ ಸಂಘದ ವತಿಯಿಂದ ವೇದಿಕೆ ಮೇಲಿನ ಗಣ್ಯರು ನೂತನ ವರ್ಷದ ಕ್ಯಾಲೆಂಡರ್ ಸಹ ಬಿಡುಗಡೆ ಮಾಡಿದರು. ಕಾರ್ಯಕ್ರಮದ ಉದ್ಘಾಟನೆ ಹಾಗೂ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿ ಶಾಸಕ ದರ್ಶನ್ ಧ್ರುವನಾರಾಯಣ್ ಮಾತನಾಡಿ, ಅಮರಶಿಲ್ಪಿ ಜಕಣಚಾರಿಯವರು ವಿಶ್ವ ವಿಖ್ಯಾತ ಮಹಾನ್ ಶಿಲ್ಪಿಯಾಗಿದ್ದರು. ಅಂತಹವರ ಸಂಸ್ಮರಣೆ ಮಾಡುತ್ತಿರುವ ವಿರಾಟ್ ವಿಶ್ವಕರ್ಮ ಸಮಾಜದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು ಅಲ್ಲದೆ ಸಮಾಜದ ವತಿಯಿಂದ ಸಂಘಕ್ಕೆ ನಿವೇಶನ ಕೋರಿರುತ್ತಾರೆ. ಹಾಗಾಗಿ ನಗರಸಭೆ ಜೊತೆ ಮಾತನಾಡಿ ನಿವೇಶನ ಕೊಡಿಸುವ ಭರವಸೆ ನೀಡಿದರು.
ಸಂಘದ ವತಿಯಿಂದ ವೇದಿಕೆ ಮೇಲಿನ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ನಗರ ಸಭೆ ಅಧ್ಯಕ್ಷ ಶ್ರೀಕಂಠ ಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಕುರಟ್ಟಿ ಮಹೇಶ್, ಶಂಕರ್, ಎಂಎನ್ ಮಂಜುನಾಥ್, ಸಂಘದ ಅಧ್ಯಕ್ಷ ಪುಟ್ಟಣ್ಣ, ಮುಖಂಡರುಗಳಾದ ಈಶ್ವರ ಆಚಾರ್, ಮಾಜಿ ಡಿ ವೈ ಎಸ್ ಪಿ , ಮರಿಸ್ವಾಮಿ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.