6:48 AM Wednesday14 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಎಷ್ಟಾದರೂ ಹಣ-ಸವಲತ್ತು ಕೇಳಿ ಕೊಡ್ತೀನಿ, ಆದರೆ ಒಲಂಪಿಕ್ ಮೆಡಲ್ ತನ್ನಿ: ಮಂಗಳೂರಿನಲ್ಲಿ ಸಿಎಂ ಕರೆ

17/01/2025, 20:52

ಮಂಗಳೂರು(reporterkarnataka.com):ಕ್ರೀಡಾಪಟುಗಳು, ಕೋಚ್ ಗಳು ಮತ್ತು ಕ್ರೀಡಾ ಇಲಾಖೆ ಎಷ್ಟಾದರೂ ಹಣ-ಸವಲತ್ತು ಕೇಳಿ. ನಾನು ಕೊಡ್ತೀನಿ. ಆದರೆ ಒಲಂಪಿಕ್ ನಲ್ಲಿ ರಾಜ್ಯದ ಪಟುಗಳು ದೇಶಕ್ಕಾಗಿ ಮೆಡಲ್ ತನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.‌
ಯುವಜನ ಮತ್ತು ಕ್ರೀಡಾ ಇಲಾಖೆ ಮತ್ತು ಜಿಲ್ಲಾಡಳಿತ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ “ಕರ್ನಾಟಕ ಕ್ರೀಡಾಕೂಟ 2025 ನ್ನು ಉದ್ಘಾಟಿಸಿ ಮಾತನಾಡಿದರು.
ಅಗತ್ಯ ವೇದಿಕೆ ಮತ್ತು ಉತ್ತಮ ಪ್ರೋತ್ಸಾಹ ಇಲ್ಲದಿದ್ದರೆ ಕ್ರೀಡಾ ಕ್ಷೇತ್ರ ಮತ್ತು ಕ್ರೀಡಾಪಟುಗಳು ಬೆಳವಣಿಗೆ ಆಗಲು ಸಾಧ್ಯವಿಲ್ಲ. ಆದ್ದರಿಂದ ನಮ್ಮ ಸರ್ಕಾರ ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಹಾಜರಾತಿ ಸೇರಿ ಇನ್ನಿತರೆ ರಿಯಾಯ್ತಿಗಳನ್ನು ಕೊಡುವ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಪುನರುಚ್ಚರಿಸಿದರು.
ಮುಂದಿನ ಬಜೆಟ್ ನಲ್ಲಿ ಮಂಗಳೂರು ಮತ್ತು ಉಡುಪಿ ಕ್ರೀಡಾಂಗಣಗಳ ಉನ್ನತೀಕರಣಕ್ಕೆ ತಲಾ 3 ಕೋಟಿ ರೂಪಾಯಿ ನಿಗದಿ ಮಾಡ್ತೀನಿ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಘೋಷಿಸಿದರು.
ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲೂ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಾಗ ಶೇ2 ರಷ್ಟು ಉದ್ಯೋಗಗಳು ಕ್ರೀಡಾಟುಗಳಿಗೆ ಮೀಸಲು ಇಡಲಾಗುವುದು. ಜೊತೆಗೆ ಪೊಲೀಸ್, ಅರಣ್ಯ ಇಲಾಖೆ ಸೇರಿ ಸಮವಸ್ತ್ರ ಧರಿಸುವ ಹುದ್ದೆಗಳಿಗೆ ಶೇ 3ರಷ್ಟು ಉದ್ಯೋಗ ಕ್ರೀಡಾಪಟುಗಳಿಗೆ ಉದ್ಯೋಗ ಮೀಸಲು ಇಡಲಾಗುವುದು ಎಂದು ಸಿಎಂ ಘೋಷಿಸಿದರು.



ಒಲಂಪಿಕ್ ನಲ್ಲಿ ಮೆಡಲ್ ತಂದವರಿಗೆ 6 ಕೋಟಿ ರೂಪಾಯಿ ಕೊಡ್ತೀವಿ. ಹಾಗೆಯೇ ಏಷ್ಯಾ ಕ್ರೀಡಾಕೂಟ ಮತ್ತು ರಾಷ್ಟ್ರಮಟ್ಟದಲ್ಲಿ ಪದಕ ತಂದವರಿಗೂ ನಗದು ಬಹುಮಾನ ಕೊಡುತ್ತಿದ್ದೇವೆ. ಈ ಪ್ರೋತ್ಸಾಹ ಸದುಪಯೋಗಪಡಿಸಿಕೊಂಡು ಮೆಡಲ್ ಗಳನ್ನು ತಂದು ಕ್ರೀಡಾಕ್ಷೇತ್ರವನ್ನು ಬೆಳಗಿಸಿ, ಬೆಳೆಸಿ ಎಂದು ಕರೆ ನೀಡಿದರು.
ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್, ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಕೆ.ಗೋವಿಂದರಾಜು, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ‌ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಐವನ್ ಡಿಸೋಜಾ, ಮಾಜಿ ಸಚಿವ ರಮಾನಾಥ ರೈ ಸೇರಿ ಜಿಲ್ಲೆಯ ಶಾಸಕರುಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು