10:09 PM Saturday15 - November 2025
ಬ್ರೇಕಿಂಗ್ ನ್ಯೂಸ್
ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್…

ಇತ್ತೀಚಿನ ಸುದ್ದಿ

ಬಾಳೂರು: ಯುವ ಕೃಷಿಕ, ಬಿಜೆಪಿ ಕಾರ್ಯಕರ್ತ ಎಚ್.ಆರ್. ಚೇತನ್ ಹೃದಯಾಘಾತಕ್ಕೆ ಬಲಿ

17/01/2025, 21:00

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿ ಹಾದಿಹೋಣಿ ಹೊಸ್ಮನೆಮಕ್ಕಿ ಗ್ರಾಮದ ಕೃಷಿಕ, ಬಿಜೆಪಿ ಕಾರ್ಯಕರ್ತ ಎಚ್.ಆರ್. ಚೇತನ್ (35) ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ಚೇತನ್ ಅವರು ಗುರುವಾರ ಬೆಳಿಗ್ಗೆ ಮನೆಯೆದುರು ಕಾಫಿ ಕಣದಲ್ಲಿದ್ಧಾಗ ಹೃದಯಾಘಾತಕ್ಕೋಳಗಾಗಿ ಇದ್ದಕ್ಕಿದಂತೆ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಬಾಳೆಹೊನ್ನೂರು ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಅವರು ಆಸ್ಪತ್ರೆಗೆ ಹೋಗುವ ದಾರಿಮಧ್ಯದಲ್ಲಿಯೇ ಪ್ರಾಣ ಬಿಟ್ಟಿದ್ದಾರೆ.
ಚೇತನ್ ಅವರು ಕೂವೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರಮೇಶ್ ಗೌಡ ಅವರ ಏಕೈಕ ಪುತ್ರ. ಚೇತನ್ ಪತ್ನಿ, ಇಬ್ಬರು ಇಬ್ಬರ ಚಿಕ್ಕ ಮಕ್ಕಳು, ತಂದೆ ತಾಯಿ, ಶತಾಯುಷಿಯಾಗಿರುವ ಅಜ್ಜಿ, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಅವರ ಅಕಾಲಿಕ ನಿಧನದಿಂದ ಕುಟುಂಬದ ಸದಸ್ಯರು ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ.
ಚೇತನ್ ಅವರು ಬಿಜೆಪಿ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದರು, ಸಾರ್ವಜನಿಕ ಕಾರ್ಯಗಳಲ್ಲಿ ಸಕ್ರಿಯರಾಗಿದ್ದರು. ಸ್ನೇಹಜೀವಿಯಾಗಿದ್ದ ಚೇತನ್ ಬಾಳಿಬದುಕಬೇಕಾದ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಅವರ ಸಾವಿನ ಸುದ್ದಿ ಕೇಳಿ ಸ್ನೇಹಿತರು, ಗ್ರಾಮಸ್ಥರು ತೀವ್ರ ಸಂತಾಪ ಸೂಚಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಚಿಕ್ಕ ವಯಸ್ಸಿನಲ್ಲಿಯೇ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು