4:11 AM Thursday3 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಭಾರತೀಯ ಆಟೋ ಕ್ಷೇತ್ರಕ್ಕೆ ಹಸಿರು ಬಲ; ಕೇಂದ್ರದ ಒತ್ತಾಸೆಯಿಂದ ಇವಿ ವಾಹನ ಮಾರಾಟ ಹೆಚ್ಚಳ

18/01/2025, 21:06

*ವರ್ಷದಿಂದ ವರ್ಷಕ್ಕೆ ಸರಾಸರಿ ಶೇ.9ರಷ್ಟು ಬೆಳವಣಿಗೆ*

*FADA 13ನೇ ಆಟೋ ಶೃಂಗಸಭೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ*

ನವದೆಹಲಿ(reporterkarnataka.com): ಭಾರತೀಯ ಅಟೋಮೊಬೈಲ್ ಕ್ಷೇತ್ರವು ಪರಿಸರ ಸ್ನೇಹಿ ಹೆಜ್ಜೆಗಳ ಮೂಲಕ ಸುರಕ್ಷಿತ, ದಕ್ಷತೆ ಹಾಗೂ ಕ್ಷಮತೆಯ ಭವಿಷ್ಯಕ್ಕೆ ನಾಂದಿ ಹಾಡಿದ್ದು, ಮುಂಬರುವ ದಿನಗಳಲ್ಲಿ ದೇಶೀಯ ವಾಹನ ಕ್ಷೇತ್ರ ಅದ್ಭುತಗಳಿಗೆ ಸಾಕ್ಷಿಯಾಗಲಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.


ನವದೆಹಲಿಯಲ್ಲಿ ಶನಿವಾರ ಭಾರತೀಯ ಆಟೋಮೊಬೈಲ್ ಡೀಲರ್ಸ್ ಫೆಡರೇಶನ್ (Federation of Automobile Dealers Associations-FADA) 13ನೇ ಆಟೋ ಶೃಂಗಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ದೇಶದಲ್ಲಿ ಹಸಿರು, ಸುರಕ್ಷಿತ ಮತ್ತು ಹೆಚ್ಚು ಪರಿಣಾಮಕಾರಿ ಭವಿಷ್ಯವನ್ನು ರೂಪಿಸುವಲ್ಲಿ ಭಾರತದ ವಾಹನ ಕ್ಷೇತ್ರದ ಪರಿವರ್ತಕ ಪಾತ್ರ ವಹಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಕುಮಾರಸ್ವಾಮಿ ಅವರು; ಸದ್ಯದ ಅಗತ್ಯಗಳನ್ನು ಪೂರೈಸಿಕೊಳ್ಳುತ್ತಾ ನಾಳೆಯ ಚಲನಶೀಲತೆಯನ್ನು ಬಲವಾಗಿ ರೂಪಿಸುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ಭಾರತೀಯ ವಾಹನ ಕ್ಷೇತ್ರ ಉತ್ತಮವಾಗಿ ಕೆಲಸ ಮಾಡುತ್ತಿದೆ ಎಂದರು.
ಆಟೋ ಕ್ಷೇತ್ರವು ಅತ್ಯುತ್ತಮ ಬೆಳವಣಿಗೆ ದರವನ್ನು ದಾಖಲಿಸಿದೆ ಎಂದು ಹೇಳಿದ ಸಚಿವರು; 2024ರಲ್ಲಿ ಭಾರತವು 26.1 ದಶಲಕ್ಷ ವಾಹನಗಳನ್ನು ಚಿಲ್ಲರೆ ಮಾರುಕಟ್ಟೆಯಲ್ಲಿ ಮಾರಾಟ ಮಾಡಿದೆ. ವರ್ಷದಿಂದ ವರ್ಷಕ್ಕೆ ಸರಾಸರಿ ಶೇ.9ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ ಎಂದು ಉಲ್ಲೇಖಿಸಿದರು.
ಜಾಗತಿಕ ಮಟ್ಟದಲ್ಲಿ ನಿರಂತರ ಅನಿಶ್ಚಿತತೆಯ ಹೊರತಾಗಿಯೂ ಭಾರತೀಯ ವಾಹನೋದ್ಯಮವು ಸುಸ್ಥಿರವಾಗಿ ಅಭಿವೃದ್ಧಿ ಹೊಂದುತ್ತಿದೆ. ಸಾಂಪ್ರದಾಯಿಕ ಮತ್ತು ಎಲೆಕ್ಟ್ರಿಕ್ ವಾಹನ ಎರಡರಲ್ಲೂ ಗಮನಾರ್ಹ ಮೈಲಿಗಲ್ಲುಗಳನ್ನು ಸಾಧಿಸುತ್ತಿದೆ. ಇದು ಅತ್ಯಂತ ಹರ್ಷದಾಯಕ ಸಂಗತಿ ಎಂದು ಅವರು ಹೇಳಿದರು.
*ಎಲೆಕ್ಟ್ರಿಕ್ ವಾಹನ ಮಾರಾಟದಲ್ಲಿ ದಾಖಲೆ:*
ದೇಶದಲ್ಲಿ ವಾಯುಮಾಲಿನ್ಯ ಶೂನ್ಯ ಮಟ್ಟಕ್ಕೆ ಇಳಿಸುವ ಎಲೆಕ್ಟ್ರಿಕ್ ವಾಹನಗಳ ಮಾರಾಟ ದೊಡ್ಡ ಪ್ರಮಾಣದಲ್ಲಿ ಆಗುತ್ತಿದೆ. 2023ರಲ್ಲಿ 10,22,994 ಎಲೆಕ್ಟ್ರಿಕ್ ವಾಹನಗಳು ಮಾರಾಟವಾಗಿದ್ದವು. 2024ರಲ್ಲಿ 14,08,245 ವಾಹನಗಳು ಮಾರಾಟ ಆಗಿದ್ದು, ಶೇ.5.59ರಷ್ಟು ಹೆಚ್ಚಳ ಆಗಿದೆ. ಎಲೆಕ್ಟ್ರಿಕ್ ವಾಹನಗಳಿಗೆ ಉತ್ತೇಜನ ಹಾಗೂ ಪರಿಸರ ಸ್ನೇಹಿಯಾಗಿ ಕೇಂದ್ರ ಸರಕಾರ ಕೈಗೊಂಡಿರುವ ಪರಿಣಾಮಕಾರಿ ಕ್ರಮಗಳಿಗೆ ಈ ಸಾಧನೆ ಸಾಕ್ಷಿಯಾಗಿದೆ ಎಂದು ಸಚಿವರು ಹೇಳಿದರು.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು ಎಲೆಕ್ಟ್ರಿಕ್ ವಾಹನ ಕ್ಷೇತ್ರಕ್ಕೆ ದೊಡ್ಡ ಮಟ್ಟದ ಉತ್ತೇಜನ ನೀಡುತ್ತಿದೆ. ಉತ್ಪಾದನಾ ಸಂಪರ್ಕ ಉತ್ತೇಜನ (ಪಿಎಲ್‌ಐ) ಮತ್ತು ಹೈಬ್ರಿಡ್ ಮತ್ತು ಎಲೆಕ್ಟ್ರಿಕ್ ವಾಹನಗಳ ವೇಗದ ಅಳವಡಿಕೆ ಮತ್ತು ತಯಾರಿಕೆ (ಫೇಮ್-II) ಯೋಜನೆಯಂತಹ ಪ್ರಮುಖ ನೀತಿಗಳನ್ನು ಅನುಷ್ಠಾನಕ್ಕೆ ತರಲಾಗಿದೆ. ಪಿಎಲ್‌ಐ ಯೋಜನೆಯಡಿ ₹25,938 ಕೋಟಿ ಹಂಚಿಕೆ ಮಾಡಲಾಗಿದ್ದು, ಸೆಪ್ಟೆಂಬರ್ 2024ರ ವೇಳೆಗೆ ₹20,715 ಕೋಟಿ ಹೂಡಿಕೆ ಮತ್ತು ₹10,472 ಕೋಟಿಯಷ್ಟು ಹೆಚ್ಚಿನ ಮಾರಾಟ ವಹಿವಾಟು ನಡೆದಿದೆ ಎಂದು ಅವರು ಹೇಳಿದರು.
ಭಾರತೀಯ ಆಟೋಮೊಬೈಲ್ ಡೀಲರ್ಸ್ ಫೆಡರೇಶನ್ ಅಧ್ಯಕ್ಷ ಸಿ.ಎಸ್.ವಿಘ್ನೇಶ್ವರ್ ಸೇರಿದಂತೆ ಅನೇಕ ಪದಾಧಿಕಾರಿಗಳು ಉಪಸ್ಥಿತರಿದ್ದರು.
#hdkumaraswamy#centralgovernment#transportminister#stategovernment

ಇತ್ತೀಚಿನ ಸುದ್ದಿ

ಜಾಹೀರಾತು