6:29 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಪೆಟ್ರೋಲ್ ಟ್ಯಾಂಕರ್ ಸ್ಫೋಟ: 70 ಮಂದಿ ಸಜೀವ ದಹನ; ಹಲವರು ಗಂಭೀರ

19/01/2025, 11:47

ನೈಜೀರಿಯಾ(reporterkarnataka.com): ಪೆಟ್ರೋಲ್‌ ಟ್ಯಾಂಕರ್‌ ಸ್ಫೋಟಗೊಂಡ ಪರಿಣಾಮ ಉಂಟಾದ ಭಾರಿ ಬೆಂಕಿ ಅನಾಹುತಕ್ಕೆ ಸುಮಾರು 70 ಮಂದಿ ಸಜೀವ ದಹನವಾಗಿದ ಘಟನೆ ನೈಜೀರಿಯಾ ದೇಶದಲ್ಲಿ ನಡೆದಿದೆ.
ದುರ್ಘಟನೆಯನ್ನು ರಾಷ್ಟ್ರೀಯ ತುರ್ತು ನಿರ್ವಹಣಾ ಏಜೆನ್ಸಿ ಮುಖ್ಯಸ್ಥ ಹುಸೇನಿ ಇಸಾ ಖಚಿತಪಡಿಸಿದ್ದಾರೆ. ನೈಜಿರಿಯಾದ ಡಿಕ್ಕೊ ಪ್ರದೇಶದಲ್ಲಿ ಟ್ಯಾಂಕರ್ ನಲ್ಲಿ ಪೆಟ್ರೋಲ್‌ ಸಾಗಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ.
ನೈಜರ್ ಗವರ್ನರ್ ಮೊಹಮ್ಮದ್ ಬಾಗೊ ಅವರು ಅಪಘಾತದ ಬಗ್ಗೆ ಪ್ರತಿಕ್ರಿಯಿಸಿ,ಗ್ಯಾಸೋಲಿನ್ ಟ್ಯಾಂಕರ್‌ನಿಂದ ಇಂಧನ ಕದಿಯಲು ಪ್ರಯತ್ನಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಸ್ಫೋಟ ಸಂಭವಿಸಿದೆ. ಸ್ಫೋಟದ ನಂತರ ಬೆಂಕಿ ಕಾಣಿಸಿಕೊಂಡಿದೆ. ಈ ಅಪಘಾತದಲ್ಲಿ ಸುಮಾರು 70 ಮಂದಿ ಸಾವನ್ನಪ್ಪಿದ್ದಾರೆ. ಹಲವು ಮಂದಿ ಗಾಯಗೊಂಡಿದ್ದಾರೆ. ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಬಂದು ಪರಿಸ್ಥಿತಿಯನ್ನು ಹತೋಟಿಗೆ ತಂದರು. ಸ್ಥಳದಲ್ಲಿ ಉಂಟಾದ ಗೊಂದಲವನ್ನು ಪೊಲೀಸರು ನಿಯಂತ್ರಿಸಿದರು. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು