11:03 AM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಪ್ರಯಾಗ್‌ರಾಜ್ ಮಹಾ ಕುಂಭಮೇಳದಲ್ಲಿ ಭೀಕರ ಬೆಂಕಿ ದುರಂತ: ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸಲು ಹರಸಾಹಸ

20/01/2025, 16:02

ನವದೆಹಲಿ(reporterkarnataka.com):ಪ್ರಯಾಗ್‌ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳ ಪ್ರದೇಶದಲ್ಲಿ ಪ್ರದೇಶದ ಶಾಸ್ತಿ ಸೇತುವೆ ಸೆಕ್ಟರ್-19 ಶಿಬಿರದಲ್ಲಿ ಹಾಗೂ ಸೆಕ್ಟರ್-5ರಲ್ಲೂ ಭೀಕರ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿ ಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ.


ಅಗ್ನಿ ಅವಘಡಕ್ಕೆ ಸದ್ಯ ಕಾರಣ ಏನು ಎಂಬುವುದು ತಿಳಿದು ಬಂದಿಲ್ಲ. ಕೋಟಿ-ಕೋಟಿ ಭಕ್ತರು ಸ್ಥಳದಲ್ಲಿ ಇದ್ದು, ಸಾವು-ನೋವುಗಳ ಕುರಿತು ಯಾವುದೇ ವರದಿ ಈವರೆಗೂ ಆಗಿಲ್ಲ. ಕಾಣಿಸಿಕೊಂಡಿರುವ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ, ಭಕ್ತರೆಲ್ಲರೂ ಚೆಲ್ಲಾಪಿಲ್ಲಿಯಾಗಿ ಓಡೋಡಿ ಹೋಗಿದ್ದು, ಅಗ್ನಿ ಅವಘಡ ವಿಡಿಯೋ ಸದ್ಯ ಹರಿದಾಡುತ್ತಿದೆ. ಸ್ಥಳದಲ್ಲಿ 30ಕ್ಕೂ ಹೆಚ್ಚು ಅಗ್ನಿಶಾಮಕ ಸಿಬ್ಬಂದಿ ವಾನಹಳು ಕಾರ್ಯಾಚರಣೆ ನಡೆಸುತ್ತಿವೆ. ವಿವೇಕಾನಂದ ಸೇವಾ ಸಮಿತಿ ಟೆಂಟ್‌ಗಳಲ್ಲಿ ಆಕಸ್ಮಿಕ ಅಗ್ನಿ ಅವಘಡ ನಡೆದಿದ್ದು ಹಲವು ಟೆಂಟ್‌ಗಳು ಬೆಂಕಿಗೆ ಸಂಪೂರ್ಣ ಆಹುತಿಯಾಗಿವೆ. ಒಂದು ಟೆಂಟ್‌ನಿಂದ ಮತ್ತೊಂದು…ಮಗದೊಂದು ಟೆಂಟ್‌ಗಳಿಗೆ ಬೆಂಕಿ ಆವರಿಸಿಕೊಂಡಿದ್ದು, ಸಿಲಿಂಡ‌ರ್ ಸ್ಪೋಟದಿಂದ ಈ ಅನಾಹುತ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು