8:23 PM Monday20 - January 2025
ಬ್ರೇಕಿಂಗ್ ನ್ಯೂಸ್
ಮಹಾತ್ಮ ಗಾಂಧಿ ರಿಯಲ್ ಗಾಂಧಿ, ಸೋನಿಯಾ, ರಾಹುಲ್, ಪ್ರಿಯಾಂಕ ಅವರು ನಕಲಿ ಗಾಂಧಿಗಳು:… ಬೆಂಗಳೂರು ಐಟಿ ಹಬ್, ವ್ಯೂಹಾತ್ಮಕ ನಗರ; ಇಲ್ಲೇ ಐಕ್ಯಾಟ್ ಕೇಂದ್ರ ಖಚಿತ: ಕೇಂದ್ರ… ಮುಡಾ ಕುರಿತು ಇಡಿ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ 5ರ ಹರೆಯದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಸೂಕ್ತ ಕ್ರಮಕ್ಕೆ ಜನವಾದಿ ಮಹಿಳಾ… ಮಂಗಳೂರಿನ ಜನತೆಗೆ ಕಲುಷಿತ ನೀರು ಪೂರೈಕೆ: ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ… ಭಾರತಿ ಏರ್‌ಟೆಲ್ ಮತ್ತು ಬಜಾಜ್ ಫೈನಾನ್ಸ್ ನಿಂದ ಹಣಕಾಸಿನ ಸೇವೆಗಳಿಗಾಗಿ ಅತಿದೊಡ್ಡ ಡಿಜಿಟಲ್… ರಾಜ್ಯದಲ್ಲಿ ಕೃಷಿ ಬಲವರ್ಧನೆ ನೆರವಿಗೆ ಸಚಿವ ಚಲುವರಾಯಸ್ವಾಮಿ ಮನವಿ: ಕೇಂದ್ರ ಸಮ್ಮತಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕೋತಿಗೆ ಗ್ರಾಪಂ ಮಾಜಿ ಅಧ್ಯಕ್ಷರಿಂದ ಅಂತ್ಯ ಸಂಸ್ಕಾರ: ರಾತ್ರಿ… ಜಾತಿಗಣತಿ ವರದಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡನೆ: ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ… ಸಂಭ್ರಮ- ಸಡಗರಕ್ಕೆ ಸಾಕ್ಷಿಯಾದ ಕಡಲನಗರಿಯ ಮಂಗಳಾ ಕ್ರೀಡಾಂಗಣ: 4500 ಕ್ರೀಡಾಪಟುಗಳ ಪಾದಸ್ಪರ್ಶ

ಇತ್ತೀಚಿನ ಸುದ್ದಿ

ಬೆಂಗಳೂರು ಐಟಿ ಹಬ್, ವ್ಯೂಹಾತ್ಮಕ ನಗರ; ಇಲ್ಲೇ ಐಕ್ಯಾಟ್ ಕೇಂದ್ರ ಖಚಿತ: ಕೇಂದ್ರ ಸಚಿವ ಕುಮಾರಸ್ವಾಮಿ

20/01/2025, 20:15

*ಮುಂಬರುವ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದಲ್ಲಿ ಬೆಂಗಳೂರು ದಾಪುಗಾಲು*

ಮಾನೇಸರ್ (ಹರಿಯಾಣ): ಬೆಂಗಳೂರು ನಗರದಲ್ಲಿ ಅಂತಾರಾಷ್ಟ್ರೀಯ ಆಟೋಮೋಟಿವ್ ಟೆಕ್ನಾಲಜಿ ಕೇಂದ್ರ -ಐಕ್ಯಾಟ್ ನ ಮೂರನೇ ಕೇಂದ್ರ ಸ್ಥಾಪನೆಯಾಗಲಿದೆ.
ಹರಿಯಾಣದ ಗುರುಗ್ರಾಮದಲ್ಲಿರುವ ಐಕ್ಯಾಟ್ (ICAT- The International Centre for Automotive Technology) ನ ಎರಡು ಕೇಂದ್ರಗಳಿಗೆ ಭೇಟಿ ನೀಡಿದ ಸಚಿವರು; ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನದ ನೆಲೆವೀಡಾದ ಬೆಂಗಳೂರಿನಲ್ಲಿ ಇದರ ಮೂರನೇ ಕೇಂದ್ರ ಸ್ಥಾಪನೆ ಮಾಡುವ ಬಗ್ಗೆ ಐಕ್ಯಾಟ್ ನ ಉನ್ನತ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು.
ಅಲ್ಲದೆ, ದಕ್ಷಿಣದಲ್ಲಿಯೇ ಅತ್ಯಂತ ಆಯಕಟ್ಟಿನ ಹಾಗೂ ವ್ಯೂಹಾತ್ಮಕ ನಗರವೂ ಆಗಿರುವ ಬೆಂಗಳೂರಿನಲ್ಲಿ ಐಕ್ಯಾಟ್ ನ ಹೊಸ ಕೇಂದ್ರ ಬರುವುದು ಅತ್ಯಗತ್ಯವಾಗಿದೆ. ನಾವೀನ್ಯತೆ, ಆವಿಷ್ಕಾರ ಹಾಗೂ ಉದ್ಯಮಶೀಲತೆಯಲ್ಲಿ ಬೆಂಗಳೂರು ಮುಂಚೂಣಿಯಲ್ಲಿದೆ. ಅಟೋಮೊಬೈಲ್ ಕ್ಷೇತ್ರದ ಹಬ್ ಆಗಿಯೂ ಬೆಳೆಯುತ್ತಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಐಕ್ಯಾಟ್ ಕೇಂದ್ರ ಸ್ಥಾಪನೆ ಬಗ್ಗೆ ಕೇಂದ್ರದ ನಿರ್ದೇಶಕ ಸೌರಭ್ ದಲೇಲ ಅವರೊಂದಿಗೆ ಚರ್ಚಿಸಿದರು.
ಬೆಂಗಳೂರಿನಲ್ಲಿ ಆದಷ್ಟು ಬೇಗ ಐಕ್ಯಾಟ್ ಕೇಂದ್ರ ಆರಂಭ ಮಾಡುವ ಬಗ್ಗೆ ಪ್ರಕ್ರಿಯೆಗಳನ್ನು ಆರಂಭ ಮಾಡುವುದಾಗಿ ಅಧಿಕಾರಿಗಳು ಸಚಿವರಿಗೆ ಸ್ಪಷ್ಟ ಭರವಸೆ ನೀಡಿದರು.


ಬೆಂಗಳೂರಿನಲ್ಲಿ ಸ್ಥಾಪನೆ ಆಗಲಿರುವ ಈ ಕೇಂದ್ರವು ಎಲೆಕ್ಟ್ರಿಕ್ ವಾಹನ (ಇವಿ) ತಂತ್ರಜ್ಞಾನ, ಸಾಫ್ಟ್‌ವೇರ್ ನಿಯಂತ್ರಿತ ವಾಹನಗಳು (ಎಸ್‌ಡಿವಿಗಳು), ಸ್ವಾಯತ್ತ ವ್ಯವಸ್ಥೆಗಳು ಮತ್ತು ದತ್ತಾಂಶ ಸುರಕ್ಷತೆಯಲ್ಲಿ ಐಕ್ಯಾಟ್ ಕೇಂದ್ರವು ನಿರ್ಣಾಯಕವಾಗಿ ಕೆಲಸ ಮಾಡುತ್ತದೆ. ಅಲ್ಲದೆ, ಈ ಕೇಂದ್ರವು ಬೆಂಗಳೂರಿನಲ್ಲಿ ಸ್ಥಾಪನೆ ಆಗುವುದರಿಂದ ಕರ್ನಾಟಕದ ಜತೆಗೆ ಅದರ ಅಕ್ಕಪಕ್ಕದ ರಾಜ್ಯಗಳಲ್ಲಿಯೂ ಅಟೋಮೊಬೈಲ್ ಆವಿಷ್ಕಾರಕ್ಕೆ ಭಾರೀ ಪ್ರಮಾಣದ ಉತ್ತೇಜನ ದೊರೆಯಲಿದೆ ಎಂದು ಸಚಿವ ಕುಮಾರಸ್ವಾಮಿ ಅವರು ಇದೇ ಸಂದರ್ಭದಲ್ಲಿ ಹೇಳಿದರು.
ಬೆಂಗಳೂರಿನಲ್ಲಿ ಐಕ್ಯಾಟ್ ಕೇಂದ್ರ ಸ್ಥಾಪನೆಗೆ ಕೇಂದ್ರದ ಬೃಹತ್ ಕೈಗಾರಿಕೆ ಸಚಿವಾಲಯದಿಂದ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ನೀಡಲಾಗುವುದು ಹಾಗೂ ಅದೇ ರೀತಿ ಕರ್ನಾಟಕ ಸರ್ಕಾರದಿಂದ ಸಿಗಬೇಕಿರುವ ಅನುಕೂಲಗಳನ್ನು ಒದಗಿಸಿಕೊಡುವ ಪ್ರಯತ್ನ ಮಾಡಲಾಗುವುದು ಎಂದು ಸಚಿವರು ಐಕ್ಯಾಟ್ ನಿರ್ದೇಶಕರಿಗೆ ಭರವಸೆ ನೀಡಿದರು.
ಬೆಂಗಳೂರಿನಲ್ಲಿ ಐಕ್ಯಾಟ್ ನ ಮೂರನೇ ಕೇಂದ್ರ ಬಂದರೆ ಅಟೋಮೊಬೈಲ್ ಕ್ಷೇತ್ರಕ್ಕೆ ಮಾತ್ರವಷ್ಟೇ ಅಲ್ಲದೆ, ರಕ್ಷಣೆ ಮತ್ತು ರೇಲ್ವೆ ಕ್ಷೇತ್ರಗಳಿಗೂ ಹೆಚ್ಚು ಉಪಯೋಗ ಆಗುತ್ತದೆ, ಹೊಸ ಅವಕಾಶದ ಬಾಗಿಲುಗಳನ್ನು ತೆರೆಯುತ್ತದೆ. ಅಟೋಮೊಬೈಲ್ ತಂತ್ರಜ್ಞಾನದ ಅಭಿವೃದ್ಧಿಗೆ ಸಹಕಾರಿ ಆಗಲಿದೆ ಎಂದು ಸಚಿವರು ಹೇಳಿದರು.
*ಐಕ್ಯಾಟ್ 3ನೇ ಕೇಂದ್ರ; ಏನಿದರ ವೈಶಿಷ್ಟ್ಯಗಳು:?*
ಐಕ್ಯಾಟ್ 3ನೇ ಕೇಂದ್ರ ಕೇಂದ್ರ ಕೇವಲ ಒಂದು ತಂತ್ರಜ್ಞಾನ ಆಧಾರಿತ ಕೇಂದ್ರವಷ್ಟೇ ಆಗಿರದೆ, ಒಟ್ಟಾರೆ ಆರ್ಥಿಕತೆ ಮೇಲೆ ಪ್ರತಿಕೂಲಕರ ಪ್ರಭಾವ ಬೀರುತ್ತದೆ.

•ಸುಧಾರಿತ ಎಲೆಕ್ಟ್ರಿಕ್ ತಂತ್ರಜ್ಞಾನ ಅಭಿವೃದ್ಧಿ ಮತ್ತು ಮಾಪನಾಂಕ ನಿರ್ಣಯದ ಪ್ರಯೋಗಾಲಯಗಳನ್ನು ಹೊಂದಿರುತ್ತದೆ.

•ಎಲೆಕ್ಟ್ರಾನಿಕ್ ನಿಯಂತ್ರಿತ ವ್ಯವಸ್ಥೆ (ECU) ಹಾಗೂ ಸೆನ್ಸಾರ್ ತಂತ್ರಜ್ಞಾನ ಅಭಿವೃದ್ಧಿ ವ್ಯವಸ್ಥೆ ಹೊಂದಿರುತ್ತದೆ.

•ಸೈಬರ್ ಸುರಕ್ಷತೆ ಲ್ಯಾಬ್‌ಗಳು ಮತ್ತು ಅತ್ಯಾಧುನಿಕ ಚಾಲನಾ ನೆರವು ವ್ಯವಸ್ಥೆ (ADAS) ಸಂಶೋಧನೆ ವ್ಯವಸ್ಥೆ ಹೊಂದಿರುತ್ತದೆ.

•ಸಂಪರ್ಕಿತ ಮತ್ತು ಸ್ವಾಯತ್ತ ಇಲ್ಲವೇ ಏಕೀಕೃತ ನಿಯಂತ್ರಣ ವ್ಯವಸ್ಥೆಯುಳ್ಳ ವಾಹನ ತಂತ್ರಜ್ಞಾನಗಳಿಗೆ ಸೌಲಭ್ಯಗಳನ್ನು ಹೊಂದಿರುತ್ತದೆ.

•ಸಾಫ್ಟ್‌ವೇರ್ ಆಧಾರಿತ ಅಥವಾ ನಿಯಂತ್ರಿತ ವಾಹನಗಳ (SDVs) ಸಾಫ್ಟ್‌ವೇರ್ ಪರೀಕ್ಷೆ ಮತ್ತು ಅಭಿವೃದ್ಧಿಯನ್ನು ಮಾಡುತ್ತದೆ.

•ಮಹತ್ವದ್ದಾದ ಆಟೋಮೋಟಿವ್ ದತ್ತಾಂಶವನ್ನು ಸುರಕ್ಷಿತವಾಗಿ ಕಾಪಾಡುವ ವ್ಯವಸ್ಥೆಯನ್ನು ಹೊಂದಿರುತ್ತದೆ.

*ಸಚಿವರ ಕನಸು ನನಸು:*
ಪ್ರಧಾನಿಗಳ ಆತ್ಮನಿರ್ಭರ್ ಭಾರತ್ ಹಾಗೂ ಮೇಕ್ ಇಂಡಿಯಾ ಮೂಲಕ ವಿಕಸಿತ ಭಾರತ ಕನಸು ಸಾಕಾರಕ್ಕೆ ಐಕ್ಯಾಟ್ ನ ಎರಡು ಕೇಂದ್ರಗಳ ಕೊಡುಗೆ ದೊಡ್ಡದು. ಅದೇ ರೀತಿ ಬೆಂಗಳೂರಿನಲ್ಲಿ ಮೂರನೇ ಅತಿದೊಡ್ಡ ಕೇಂದ್ರ ಸ್ಥಾಪನೆಯಾದರೆ ರಾಜ್ಯಕ್ಕೆ ಹೆಚ್ಚು ಅನುಕೂಲ ಆಗುವುದು ಮಾತ್ರವಲ್ಲದೆ, ದಕ್ಷಿಣದ ರಾಜ್ಯಗಳಲ್ಲಿ ಆಟೋಮೊಟೀವ್ ತಂತ್ರಜ್ಞಾನದ ಬೃಹತ್ ಕ್ರಾಂತಿಯೇ ಆಗಲಿದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.

*ಎರಡೂ ಕೇಂದ್ರಗಳಿಗೆ ಭೇಟಿ, ಪರಿಶೀಲನೆ:*
ಸೋಮವಾರ ಇಡೀ ದಿನ ಐಕ್ಯಾಟ್ ಕೇಂದ್ರಗಳ ವಿವಿಧ ವಿಭಾಗಳಿಗೆ ಭೇಟಿ ನೀಡಿದ ಸಚಿವ ಕುಮಾರಸ್ವಾಮಿ ಅವರು; ಅಲ್ಲಿರುವ ಎಲ್ಲಾ ಸುಧಾರಿತ ತಾಂತ್ರಿಕ ಸೌಲಭಗಳನ್ನು ಖುದ್ದು ವೀಕ್ಷಿಸಿದರು. ಅಲ್ಲದೆ, ವಾಹನಗಳ ಸುರಕ್ಷತಾ ಸೌಲಭ್ಯಗಳನ್ನು ಅವರು ಪರಿಶೀಲಿಸಿದರು.
ಅದಕ್ಕೂ ಮೊದಲು ಅಧಿಕಾರಿಗಳ ಸಭೆ ನಡೆಸಿದ ಸಚಿವರು; ಐಕ್ಯಾಟ್ ಕೇಂದ್ರದಲ್ಲಿನ ಚಟುವಟಿಕೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡರು. ಆ ನಂತರ ಇಡೀ ಕೇಂದ್ರದ ಪ್ರಯೋಗಾಲಯಗಳು, ಅಪಘಾತ ಪರೀಕ್ಷೆ ಪ್ರಯೋಗಾಲಯಗಳು, ಪ್ರತಿಧ್ವನಿ ಅಧ್ಯಯನ ಕೇಂದ್ರಗಳು ಹಾಗೂ ಇಂಧನ ಹರಿವಿನ ಪರೀಕ್ಷಾ ಕಾರ್ಯವಿಧಾನಗಳನ್ನು ಸಚಿವರು ಪರಿಶೀಲನೆ ವೀಕ್ಷಿಸಿದರು.
ಈ ಭೇಟಿಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವರು; ಭಾರತದ ವಾಹನಗಳ ಉತ್ಕೃಷ್ಟತೆಗೆ ಐಕ್ಯಾಟ್ ಕೇಂದ್ರ ಅತಿದೊಡ್ಡ ಕೊಡುಗೆ ನೀಡುತ್ತಿದೆ. ಆವಿಷ್ಕಾರ, ನಾವೀನ್ಯತೆ ಕ್ಷೇತ್ರಗಳಿಗೆ ಇದು ಹೆಚ್ಚು ಆದ್ಯತೆ ಕೊಡುತ್ತಿದೆ. ಇಲ್ಲಿಗೆ ಬಂದಿರುವುದು ನನಗೆ ಬಹಳ ಸಂತೋಷ ತಂದಿದೆ. ಇಲ್ಲಿನ ಸುಧಾರಿತ ಪ್ರಯೋಗಾಲಯಗಳು ಮತ್ತು ಪರೀಕ್ಷಾ ಮೂಲಸೌಕರ್ಯಗಳನ್ನು ಒಳಗೊಂಡಂತೆ ICAT ನ ಅತ್ಯಾಧುನಿಕ ಸೌಲಭ್ಯಗಳು ಆಟೋಮೋಟಿವ್ ನಾವೀನ್ಯತೆಯಲ್ಲಿ ಭಾರತದ ಸಾಮರ್ಥ್ಯಗಳಿಗೆ ಸಾಕ್ಷಿಯಾಗಿವೆ ಎಂದು ಸಚಿವರು ಹೇಳಿದರು.
ಇದೇ ವೇಳೆ ಸಚಿವರು ಅತ್ಯಾಧುನಿಕ ಐಟಿ ಆಟೋಮ್ಯಾಟಿವ್ ಕೇಂದ್ರಕ್ಕೆ ಅಡಿಗಲ್ಲು ಹಾಕಿದರು.

ಇತ್ತೀಚಿನ ಸುದ್ದಿ

ಜಾಹೀರಾತು